ಉತ್ತರ ಕನ್ನಡ | ಉಸ್ತುವಾರಿ ಸಚಿವರಾಗಿ ಲಕ್ಷ್ಮಣ ಸವದಿ ಮೊದಲ ಭೇಟಿ; ಆಗಸ್ಟ್ 6 ಮತ್ತು 7ರಂದು ಜಿಲ್ಲೆಯಾದ್ಯಂತ ಪ್ರವಾಸ

Date:

ಉತ್ತರ ಕನ್ನಡ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ಲಕ್ಷ್ಮಣ ಸವದಿ ಅವರು ಮೊದಲ ಬಾರಿಗೆ ಅಂದರೆ ಆಗಸ್ಟ್ 6 ಮತ್ತು 7ರಂದು ಜಿಲ್ಲೆಯಲ್ಲಿ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ.

- Advertisement -

ಎರಡು ದಿನಗಳ ಈ ಪ್ರವಾಸದಲ್ಲಿ ಕಾರವಾರ, ಅಂಕೋಲಾ, ಹೊನ್ನಾವರ, ಶಿರಸಿ, ಮುಂಡಗೋಡ ಹಾಗೂ ಕಲಘಟಗಿ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವುದು, ವಿವಿಧ ಇಲಾಖೆಗಳ ಸಭೆಗಳಲ್ಲಿ ಭಾಗವಹಿಸುವುದು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ಸುದ್ದಿ ಓದಿದ್ದೀರಾ? ಹಳಿಯಾಳ | ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ: ಅಧಿಕಾರಿಗಳಿಗೆ ಶಾಸಕ ಆರ್.ವಿ. ದೇಶಪಾಂಡೆ ಸೂಚನೆ

ಆಗಸ್ಟ್ 6ರಂದು ಬೆಳಗ್ಗೆ ಗೋವಾದಿಂದ ಕಾರವಾರಕ್ಕೆ ಆಗಮಿಸುವ ಸಚಿವರು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಜಿಲ್ಲಾ ಮಟ್ಟದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಅಂಕೋಲಾ ಹಾಗೂ ಹೊನ್ನಾವರದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Advertisements

ಆಗಸ್ಟ್ 7ರಂದು ಶಿರಸಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ, ಮುಂಡಗೋಡದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಕಲಘಟಗಿಗೆ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸಂಜೆ ಚಿಟಗುಪ್ಪಾ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಬಳಿಕ ಇದು ಲಕ್ಷ್ಮಣ ಸವದಿ ಅವರ ಮೊದಲ ಅಧಿಕೃತ ಜಿಲ್ಲಾ ಪ್ರವಾಸವಾಗಿರುವುದರಿಂದ, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿದೆ. ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳು, ಮೂಲಸೌಕರ್ಯ ಕಾಮಗಾರಿಗಳು ಹಾಗೂ ಆಡಳಿತಾತ್ಮಕ ವಿಚಾರಗಳ ಕುರಿತು ಮಹತ್ವದ ಚರ್ಚೆಗಳು ನಡೆಯುವ ಸಾಧ್ಯತೆ ಇದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...