ಉತ್ತರ ಕನ್ನಡ | ವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸಿದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿಗಳ ಖಡಕ್ ಸೂಚನೆ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿ ವೈಟ್‌ಬೋರ್ಡ್ ಅಥವಾ ಖಾಸಗಿ ವಾಹನಗಳನ್ನು ಬಾಡಿಗೆ ಉದ್ದೇಶಕ್ಕಾಗಿ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ.

- Advertisement -

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ. ಟ್ಯಾಕ್ಸಿ ಚಾಲಕರು ಸಲ್ಲಿಸಿದ ದೂರಿನನ್ವಯ, ಅನೇಕ ಖಾಸಗಿ ವಾಹನಗಳು ಅನಧಿಕೃತವಾಗಿ ಪ್ರವಾಸಿಗರನ್ನು ಕರೆದೊಯ್ಯುತ್ತಿರುವುದು ಗಮನಕ್ಕೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಕುರಿತು ಫೋಟೋ ಸಹಿತ ಸಲ್ಲಿಕೆಯಾಗಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಧಿಕಾರಿಗಳು, ಇಂತಹ ವಾಹನಗಳ ವಿರುದ್ಧ ತಕ್ಷಣವೇ ತನಿಖೆ ನಡೆಸಿ ದಂಡ ವಿಧಿಸುವಂತೆ ಸೂಚಿಸಿದರು.ಅಲ್ಲದೆ, ನಿಯಮ ಉಲ್ಲಂಘನೆ ಪುನರಾವರ್ತನೆಯಾದಲ್ಲಿ ಅಂತಹ ವಾಹನಗಳ ಲೈಸೆನ್ಸ್ ಅನ್ನು ಶಾಶ್ವತವಾಗಿ ರದ್ದುಗೊಳಿಸಲು ಸಾರಿಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಇದರಿಂದ ಇನ್ನು ಮುಂದೆ ಜಿಲ್ಲೆಯಲ್ಲಿ ವೈಟ್‌ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸುವುದು ಶಿಕ್ಷಾರ್ಹ ಅಪರಾಧವಾಗಲಿದೆ. ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಅನಧಿಕೃತ ಟ್ಯಾಕ್ಸಿಗಳು, ಆಟೋಗಳು ಮತ್ತು ಬಾಡಿಗೆ ಬೈಕ್‌ಗಳ ವಿರುದ್ಧವೂ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ಸೂಚಕ: ಸಚಿವ ಮಂಕಾಳ ವೈದ್ಯ

ಆಟೋ ಮತ್ತು ಟ್ಯಾಕ್ಸಿ ನಿಲ್ದಾಣಗಳ ಸಮಸ್ಯೆ ಹಾಗೂ ಸಂಚಾರ ವ್ಯಾಪ್ತಿಯ ವಿಸ್ತರಣೆಯ ಕುರಿತು ಸ್ಥಳೀಯ ತಹಶೀಲ್ದಾರರು ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಕರ್ನಾಟಕದ ವಾಯು ಮಾಲಿನ್ಯ ತಪಾಸಣಾ ಪತ್ರಕ್ಕೆ ಗೋವಾದಲ್ಲಿ ಮಾನ್ಯತೆ ನೀಡದ ಕುರಿತು ಅಲ್ಲಿನ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು. ಜೊತೆಗೆ, ಟ್ಯಾಕ್ಸಿಗಳಲ್ಲಿನ ಪ್ಯಾನಿಕ್ ಬಟನ್ ಸಮಸ್ಯೆ ಹಾಗೂ ವಾಯು ಮಾಲಿನ್ಯ ಪತ್ರವನ್ನು ಆನ್‌ಲೈನ್‌ನಲ್ಲಿ ದಾಖಲಿಸುವ ವಿಷಯವನ್ನು ರಾಜ್ಯ ಸಾರಿಗೆ ಆಯುಕ್ತಾಲಯದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಜಿಲ್ಲೆಯ ಸುಮಾರು 400ಕ್ಕೂ ಅಧಿಕ ಹೊಸ ಮಾರ್ಗಗಳಲ್ಲಿ ಸರ್ಕಾರಿ ಬಸ್‌ಗಳ ಸಂಚಾರಕ್ಕೆ ಜಿಲ್ಲಾಧಿಕಾರಿಗಳು ಅನುಮೋದನೆ ನೀಡಿದ್ದಾರೆ. ಆದರೆ, ದುರ್ಗಮ ರಸ್ತೆಗಳು ಮತ್ತು ಅಪಘಾತ ವಲಯಗಳಲ್ಲಿ (ಬ್ಲಾಕ್‌ಸ್ಪಾಟ್‌ಗಳು) ವಾಹನ ಚಾಲನೆ ಮಾಡುವಾಗ ಚಾಲಕರು ಅತ್ಯಂತ ಜಾಗರೂಕತೆಯಿಂದ ಇರಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ವಿವಿಧ ತಾಲೂಕುಗಳ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮತ್ತು ಆಟೋ-ಟ್ಯಾಕ್ಸಿ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...