ಉತ್ತರ ಕನ್ನಡ | ಸಿದ್ದಾಪುರ ಸಹಕಾರಿ ಸಂಘದ ಸಿಇಒ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಚುರುಕು

Date:

ಉತ್ತರ ಕನ್ನಡ: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮವಾಗಿ ಆಸ್ತಿ ಮತ್ತು ನಗದು ಸಂಪಾದನೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಸಿದ್ದಾಪುರ ಕೋಲ್-ಸಿರ್ಸಿ ಗ್ರೂಪ್ ಗ್ರಾಮ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮಾರುತಿ ಯಶ್ವಂತ ಮಾಲ್ಟಿ ಅವರ ವಿವಿಧ ನೆಲೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

- Advertisement -

ಮೂಲತಃ ಹಳಿಯಾಳದ ನಿವಾಸಿಯಾಗಿರುವ ಮಾರುತಿ ಮಾಲ್ಟಿ ಅವರಿಗೆ ಸೇರಿದ ಮನೆಗಳು, ವಾಣಿಜ್ಯ ಮಳಿಗೆಗಳು ಹಾಗೂ ಕಚೇರಿಗಳ ಮೇಲೆ ಕಾರವಾರ, ಉಡುಪಿ ಮತ್ತು ಮಂಗಳೂರು ಲೋಕಾಯುಕ್ತ ವಿಭಾಗಗಳ ಅಧಿಕಾರಿಗಳ ತಂಡಗಳು ಈ ಕಾರ್ಯಾಚರಣೆ ನಡೆಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸಿದ್ದಾಪುರದಲ್ಲಿ ಲೋಕಾಯುಕ್ತ ಸಿಪಿಐ ವಿನಾಯಕ ಬಿಲ್ಲವ ಅವರ ಮಾರ್ಗದರ್ಶನದಲ್ಲಿ ಎರಡು ಕಡೆ ಶೋಧ ಕಾರ್ಯ ನಡೆದರೆ, ಹಳಿಯಾಳದಲ್ಲಿ ಕಾರವಾರ ಲೋಕಾಯುಕ್ತ ಡಿವೈಎಸ್ಪಿ ಧನ್ಯಾ ನಾಯಕ ಅವರ ನೇತೃತ್ವದ ತಂಡವು ಮಾರುತಿ ಅವರಿಗೆ ಸೇರಿದ ವಾಸದ ಮನೆ ಹಾಗೂ ಬಟ್ಟೆ ಅಂಗಡಿಗಳಲ್ಲಿ ದಾಖಲೆಗಳ ತಪಾಸಣೆ ನಡೆಸಿತು.

ಈ ಕಾರ್ಯಾಚರಣೆಯ ಸಂದರ್ಭದಲ್ಲಿ ಆಸ್ತಿ ಪಾಸ್ತಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳು, ನಗದು ಹಣ, ಬ್ಯಾಂಕ್ ಖಾತೆಗಳ ವಿವರ ಹಾಗೂ ಹೂಡಿಕೆಯ ಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಸಿಇಒ ಅವರ ಆರ್ಥಿಕ ವ್ಯವಹಾರಗಳ ಬಗ್ಗೆ ಆಳವಾದ ತನಿಖೆ ನಡೆಯುತ್ತಿದ್ದು, ಪರಿಶೀಲನೆಯ ನಂತರ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಪಟ್ಟಣ ಪಂಚಾಯತ ನಲ್ಲಿ ₹35 ಲಕ್ಷ ಅಕ್ರಮ ಆರೋಪ; ನ್ಯಾಯಾಂಗ ತನಿಖೆಗೆ ಕರವೇ (ಗಜಸೇನೆ) ಆಗ್ರಹ

ಸಹಕಾರಿ ಸಂಘದ ಪ್ರಮುಖ ಹುದ್ದೆಯಲ್ಲಿದ್ದುಕೊಂಡು ಅಕ್ರಮ ಆಸ್ತಿ ಗಳಿಸಿರುವ ಆರೋಪ ಕೇಳಿಬಂದಿರುವುದು ಸಹಕಾರಿ ವಲಯದಲ್ಲಿ ಸಂಚಲನ ಮೂಡಿಸಿದೆ. ಲೋಕಾಯುಕ್ತ ಅಧಿಕಾರಿಗಳ ಈ ಹಠಾತ್ ದಾಳಿಯು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದ್ದು, ತನಿಖೆಯ ವರದಿ ಬಂದ ನಂತರ ಮುಂದಿನ ಕಾನೂನು ಕ್ರಮಗಳು ಜರುಗಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡಿಸಲು ಸಂಪೂರ್ಣ ಭಸ್ಮ

ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ...

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...