ಉತ್ತರ ಕನ್ನಡ | ಲೋಕಾಯುಕ್ತರ ಮಿಂಚಿನ ದಾಳಿ: ಕಾರವಾರ, ಶಿರಸಿಯ ನಗರಸಭೆ ಹಾಗೂ ಹಾಸ್ಟೆಲ್‌ಗಳಲ್ಲಿ ಕಡತಗಳ ಪರಿಶೀಲನೆ

Date:

ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ ಘಟನೆ ವರದಿಯಾಗಿದೆ. ಸ್ವಯಂಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

- Advertisement -

ಉತ್ತರ ಕನ್ನಡ ಜಿಲ್ಲಾ ಲೋಕಾಯುಕ್ತ ಎಸ್‌ಪಿ ದಿನೇಶ್ ಅವರ ನೇತೃತ್ವದಲ್ಲಿ ಈ ತನಿಖೆ ನಡೆದಿದೆ. ಕಾರವಾರ ನಗರಸಭೆಗೆ ಬೆಳಿಗ್ಗೆ ಸುಮಾರು 11 ಗಂಟೆಯ ಸುಮಾರಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ, ಕಂದಾಯ ಮತ್ತು ತೆರಿಗೆ ಸೇರಿದಂತೆ ವಿವಿಧ ವಿಭಾಗಗಳ ಕಡತಗಳನ್ನು ಕೂಲಂಕಷವಾಗಿ ಪರಿಶೀಲಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜನರ ಮನೆ ಬಾಗಿಲಿಗೆ ಜಾತಿ–ಆದಾಯ ಪ್ರಮಾಣಪತ್ರ: 9.60 ಲಕ್ಷ ವಿತರಣೆ, ಶೇ.85.76 ಸಾಧನೆ

ಬಾಕಿ ಉಳಿದಿರುವ ಕಡತಗಳ ವಿಲೇವಾರಿ ಹಾಗೂ ದಾಖಲೆಗಳ ನಿರ್ವಹಣೆ ಬಗ್ಗೆ ಮಾಹಿತಿ ಕಲೆಹಾಕಿದ ತಂಡವು, ನಗರಸಭೆ ಆಯುಕ್ತ ಜಗದೀಶ ಹುಲಿಗೆಜ್ಜೆ ಅವರ ಕೊಠಡಿಗೂ ತೆರಳಿ ಪ್ರಮುಖ ಮಾಹಿತಿಯನ್ನು ಪಡೆದುಕೊಂಡಿತು. ಅದೇ ಸಮಯದಲ್ಲಿ ಶಿರಸಿ ನಗರಸಭೆಗೂ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಅಲ್ಲಿನ ಕಡತಗಳನ್ನು ಪರಿಶೀಲಿಸಿದರು.

ಇದರ ಜೊತೆಗೆ, ಜಿಲ್ಲೆಯ ಒಟ್ಟು 9 ಹಾಸ್ಟೆಲ್‌ಗಳು ಹಾಗೂ ಆಸ್ಪತ್ರೆಯೊಂದಕ್ಕೂ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಗಳು ಮತ್ತು ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಒಂದೇ ದಿನ ಜಿಲ್ಲೆಯ ಹಲವು ಸರ್ಕಾರಿ ಸಂಸ್ಥೆಗಳ ಮೇಲೆ ಲೋಕಾಯುಕ್ತರು ದಾಳಿ ನಡೆಸಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಕುತೂಹಲಕ್ಕೆ ಹಾಗೂ ಚರ್ಚೆಗೆ ಗ್ರಾಸವಾಗಿದೆ.

ಯಾವ ನಿರ್ದಿಷ್ಟ ಅಂಶಗಳ ಆಧಾರದ ಮೇಲೆ ಈ ಸುಮೋಟೋ ಪ್ರಕರಣ ದಾಖಲಾಗಿದೆ ಮತ್ತು ಪರಿಶೀಲನೆ ವೇಳೆ ಏನೆಲ್ಲ ಲೋಪದೋಷಗಳು ಪತ್ತೆಯಾಗಿವೆ ಎಂಬ ಬಗ್ಗೆ ಸಂಪೂರ್ಣ ವಿವರಗಳು ಇನ್ನಷ್ಟೇ ಹೊರಬರಬೇಕಿವೆ. ಸಂಪೂರ್ಣ ತನಿಖೆ ಹಾಗೂ ದಾಖಲೆಗಳ ಪರಿಶೀಲನೆ ಪೂರ್ಣಗೊಂಡ ಬಳಿಕ, ಅಧಿಕಾರಿಗಳು ಸಂಗ್ರಹಿಸಿದ ಸಮಗ್ರ ಮಾಹಿತಿಯೊಂದಿಗೆ ಲೋಕಾಯುಕ್ತ ಕೇಂದ್ರ ಕಚೇರಿಗೆ ಅಧಿಕೃತ ವರದಿಯನ್ನು ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...