ಉತ್ತರ ಕನ್ನಡ | ಸಾಮೂಹಿಕ ವಿವಾಹ: ಸಹಾಯಧನಕ್ಕೆ ಅರ್ಜಿ ಆಹ್ವಾನ

Date:

ಉತ್ತರ ಕನ್ನಡ ಜಿಲ್ಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯಗಳ (ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ) ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸಾಮೂಹಿಕ ವಿವಾಹದಲ್ಲಿ ಮದುವೆ ಆಗುವ ಪ್ರತಿ ಜೋಡಿಗೆ 50,000/- ರೂ.ಗಳನ್ನು ನೀಡಲು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಅರ್ಜಿ ಸಲ್ಲಿಸಲು ಇರುವ ನಿಯಮಾವಳಿಗಳು: ವಧು-ವರರು ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು. ಹುಡುಗಿಗೆ ಕನಿಷ್ಠ 18 ವರ್ಷ ಗರಿಷ್ಠ 42 ವರ್ಷ ಆಗಿರಬೇಕು ಮತ್ತು ಹುಡುಗನಿಗೆ ಕನಿಷ್ಠ 21 ವರ್ಷದಿಂದ ಗರಿಷ್ಠ 45 ವರ್ಷ ವಯಸ್ಸು ಇರಬೇಕು. ವಧು-ವರರ ವಾರ್ಷಿಕ ಆದಾಯ ರೂ.2.5 ಲಕ್ಷದ ಒಳಗಿರಬೇಕು. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಈ ಸೌಲಭ್ಯವನ್ನು ಪಡೆಯಬಹುದು. ವರನಿಗೆ ಜೀವಂತ ಪತ್ನಿ ಅಥವಾ ವಧುಗೆ ಜೀವಂತ ಪತಿ ಇದ್ದಲ್ಲಿ ಈ ಯೋಜನೆ ಅನ್ವಯಿಸುವುದಿಲ್ಲ. 7 ದಿನ ಮುಂಚಿತವಾಗಿ ವಾಸ್ತವ್ಯವಿರುವ ಜಿಲ್ಲೆಯಲ್ಲಿಯೇ ಅರ್ಜಿ ಸಲ್ಲಿಸಬೇಕು. ಸಾಮೂಹಿಕ ವಿವಾಹದಲ್ಲಿ ಕನಿಷ್ಟ 10 ಜೋಡಿಗಳು ಆದರೂ ಭಾಗವಹಿಸಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಜಿಲ್ಲಾ ನೊಂದಣಿ/ವಕ್ಫ್ ಬೋರ್ಡ್ ಕಚೇರಿಗಳಲ್ಲಿ ನೊಂದಣಿಯಾಗಿರುವ ಖಾಸಗಿ ಟ್ರಸ್ಟ್‌ಗಳು, ದೇವಸ್ಥಾನದ ಟ್ರಸ್ಟ್‌ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುವೆ ಆದ ಜೋಡಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಮಳೆ ಬಂದರೆ ಹೊಂಡ, ಬಿಸಿಲಾದ್ರೆ ಧೂಳು: ಭೀಮಘರ್ಜನೆಯ ವಿಡಿಯೋ ವೈರಲ್

ಸದರಿ ಸಾಮೂಹಿಕ ವಿವಾಹವನ್ನು ಆಯೋಜಿಸುವ ಆಯೋಜಕರ ಖರ್ಚು-ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ.5000 ಗಳನ್ನು ನೀಡಲಾಗುವುದು ಎಂದು ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8277799990 ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಉತ್ತರ ಕನ್ನಡ, ಕಾರವಾರ ದೂರವಾಣಿ ಸಂಖ್ಯೆ: 08382-220336 ಅಥವಾ ನಿಮ್ಮ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಕಚೇರಿ ಸಮಯದಲ್ಲಿ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...