ಉತ್ತರ ಕನ್ನಡ | ಶಿಕ್ಷಕಿ ಮನೆಯಲ್ಲಿ ಭಾರೀ ಕಳ್ಳತನ: ಆರು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ, ನಗದು ಕಳವು

Date:

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ವಿದ್ಯಾರಣ್ಯ ಬಡಾವಣೆಯಲ್ಲಿ ವಾಸವಾಗಿರುವ ಶಿಕ್ಷಕಿ ಜಯಶ್ರೀ ಸೀತಾರಾಮ ಗಾಂವ್ಕರ ಅವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಆರು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ, ನಗದು ಕಳ್ಳತನವಾಗಿದೆ.

- Advertisement -

2025ರ ಜುಲೈ 26ರಂದು ಬೆಳಿಗ್ಗೆ 9:30ರಿಂದ ಮಧ್ಯಾಹ್ನ 12:30ರ ನಡುವೆ ಕಳ್ಳರು ಮನೆಯ ಮುಂದಿನ ಬಾಗಿಲಿನ ಚಿಲಕದ ಕೊಂಡಿಯನ್ನು ಯಾವುದೋ ಗಟ್ಟಿಯಾದ ವಸ್ತುವಿನಿಂದ ಮುರಿದು ಒಳನುಗ್ಗಿದ್ದಾರೆ. ಮನೆಯೊಳಗೆ ಪ್ರವೇಶಿಸಿದ ನಂತರ, ಕಳ್ಳರು ನೇರವಾಗಿ ಮಲಗುವ ಕೋಣೆಯಲ್ಲಿರುವ ಕಪಾಟನ್ನು ತೆರೆದು, ಅದರಲ್ಲಿಟ್ಟಿದ್ದ ಬೆಲೆಬಾಳುವ ಬಂಗಾರದ ಆಭರಣಗಳು ಮತ್ತು ನಗದನ್ನು ಕದ್ದೊಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ | ಭಾವೈಕ್ಯ ಸಮಾಜ ಕಟ್ಟುವಲ್ಲಿ ಸೂಫಿ ಸಂತರ ಪಾತ್ರ ಅಪಾರ: ಸತೀಶ್ ಜಾರಕಿಹೊಳಿ

ಕಳುವಾದ ವಸ್ತುಗಳಲ್ಲಿ ಬಂಗಾರದ ಕರಿಮಣಿ ಸರ, ನೆಕ್ಲೆಸ್‌ಗಳು, ಪಾಟಲಿ ಬಳೆ, ಗಣಪತಿ ಲಾಕೆಟ್ ಇರುವ ಚೈನು, ಕೆನ್ನೆ ಸರಪಳಿಗಳು ಮತ್ತು ಉಂಗುರಗಳು ಸೇರಿವೆ. ಇದರ ಜತೆಗೆ ಒಂದು ಲಕ್ಷ ರೂಪಾಯಿ ನಗದು ಕೂಡ ನಾಪತ್ತೆಯಾಗಿದೆ. ಕಳವಾಗಿರುವ ಬಂಗಾರದ ಆಭರಣಗಳು ಒಟ್ಟಾರೆ 175 ಗ್ರಾಂ ತೂಕವಿದ್ದು, ನಗದನ್ನೂ ಸೇರಿಸಿ ಅಂದಾಜು 6,03,000 ರೂಪಾಯಿ ಮೌಲ್ಯದ ವಸ್ತುಗಳನ್ನು ಕಳ್ಳರು ದೋಚಿದ್ದಾರೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಬರಗಾಲದಲ್ಲಿ ಸ್ಥಳೀಯರಿಗೆ ಹೆಚ್ಚಿನ ಕೆಲಸ ನೀಡಿ, ವಾರದೊಳಗೆ ಕೂಲಿ ಪಾವತಿಸಿ: ಡಿಸಿಎಂ ಪರಮೇಶ್ವರ

ತೀವ್ರ ಬರಗಾಲವಿರುವ ಕಾರಣ ವಿಬಿ ಜಿ ರಾಮ್‌ಜಿ ಯೋಜನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಯಾದಗಿರಿ | ‘ಬೆಂಕಿ ಹಚ್ಚುತ್ತೇನೆ’ ಹೇಳಿಕೆ ಶಾಸಕರ ಘನತೆಗೆ ತಕ್ಕುದಲ್ಲ: ಮಂಜುನಾಥ ಮೇತ್ರಿ

ಅಕ್ರಮ ಮರಳು ಸಾಗಾಟ ಹಾಗೂ ಓವರ್‌ಲೋಡ್ ಟಿಪ್ಪರ್‌ಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸುವುದು...

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...