ಉತ್ತರ ಕನ್ನಡ | ಶಾಸಕ ಶಿವರಾಮ ಹೆಬ್ಬಾರ್ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ವಿವಿಧ ಸೌಲಭ್ಯಗಳ ವಿತರಣೆ

Date:

ಉತ್ತರ ಕನ್ನಡ: ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ಹಳ್ಳಿಗಳ ಮೂಲಸೌಕರ್ಯ ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು.

- Advertisement -

ಮುಂಡಗೋಡ ತಾಲ್ಲೂಕಿನ ಬೆಡ್ಸಗಾಂವ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಳಗೇರಿ ಗ್ರಾಮದಲ್ಲಿ 95 ಲಕ್ಷ ರೂಪಾಯಿಗಳ ಬೃಹತ್ ವೆಚ್ಚದಲ್ಲಿ ಹಮ್ಮಿಕೊಳ್ಳಲಾದ ನೂತನ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುಗಮ ಸಂಚಾರದಿಂದ ಮಾತ್ರ ಹಳ್ಳಿಗಳಲ್ಲಿ ಆರ್ಥಿಕ ಚಟುವಟಿಕೆಗಳು ವೇಗ ಪಡೆಯಲು ಸಾಧ್ಯ. ಈ ರಸ್ತೆಯು ಜಳಗೇರಿ ಮತ್ತು ಸುತ್ತಮುತ್ತಲ ಗ್ರಾಮಸ್ಥರ ದಶಕಗಳ ಸಂಚಾರ ಸಮಸ್ಯೆಗೆ ಮುಕ್ತಿ ನೀಡಲಿದೆ ಎಂದು ತಿಳಿಸಿದರು.

1000505467

ಬಳಿಕ ಬನವಾಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಕಲಾಂಗ ಚೇತನ ಅರ್ಹ ಫಲಾನುಭವಿಗಳಿಗೆ ಶಾಸಕರು ತ್ರಿಚಕ್ರ ವಾಹನ ಹಾಗೂ ವಿಲ್ ಚೇರ್ ವಿತರಿಸಿದರು. ಶಕ್ತಿಹೀನರ ಬಾಳಿಗೆ ಆಸರೆಯಾಗುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅವರು ಈ ವೇಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | 108 ಅಂಬ್ಯುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆ: ಗಂಡು ಮಗುವಿಗೆ ಜನ್ಮ ನೀಡಿದ ತಾಯಿ

ನಂತರ ಬನವಾಸಿಯ ಪಿ.ಎಂ.ಶ್ರೀ ಮಾದರಿ ಶಾಲೆಗೆ ಭೇಟಿ ನೀಡಿದ ಶಾಸಕರು, ಅಲ್ಲಿನ ವಿದ್ಯಾರ್ಥಿಗಳಿಗೆ ಅಗತ್ಯವಾದ ವಿವಿಧ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಶಿಕ್ಷಣವು ಸಮಾಜದ ಭದ್ರ ಅಡಿಪಾಯವಾಗಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಪೂರಕ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದರು.

ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಮುಂಡಗೋಡ ಮತ್ತು ಬನವಾಸಿ ಭಾಗದ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...