ಉತ್ತರ ಕನ್ನಡ | ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆ: ಎಸ್.ಈ. ಸುಧೀಂದ್ರ

Date:

ಉತ್ತರ ಕನ್ನಡ: ಕರ್ನಾಟಕ ರಾಜ್ಯದಲ್ಲಿ ನೂತನ ಜೈವಿಕ ಇಂಧನ ರಚನೆ ಮತ್ತು ಈ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಎಸ್.ಈ. ಸುಧೀಂದ್ರ ಅವರು ತಿಳಿಸಿದ್ದಾರೆ.

- Advertisement -

ಬುಧವಾರ ಕಾರವಾರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿರುವ ಜೈವಿಕ ಇಂಧನ ಸಂಶೋಧನೆ, ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕೇಂದ್ರಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ನಂತರ ಅವರು ಮಾತನಾಡಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ರಾಜ್ಯದ ಜೈವಿಕ ಇಂಧನ ಸಂಶೋಧನಾ ಕೇಂದ್ರಗಳು, ಜೈವಿಕ ಇಂಧನ ಉದ್ಯಾನಗಳು, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಗುಣಮಟ್ಟ ಖಾತ್ರಿ ಪ್ರಯೋಗಶಾಲೆಗಳು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಸಹಯೋಗದೊಂದಿಗೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿವೆ.

ಇವುಗಳ ಸಂಘಟಿತ ಪ್ರಯತ್ನದಿಂದಾಗಿ ರಾಜ್ಯದಲ್ಲಿ ಈ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು. ಉತ್ತರ ಕನ್ನಡ ಜಿಲ್ಲೆಯ ಕಾರ್ಯವೈಖರಿಯನ್ನು ಶ್ಲಾಘಿಸಿದ ಅವರು, ಜಿಲ್ಲೆಯಲ್ಲಿ ಎರಡು ವಿಶಿಷ್ಟ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಕಾರವಾರದ ಕೇಂದ್ರವು ಕಡಲ ತೀರದಲ್ಲಿ ಲಭ್ಯವಿರುವ ಜೈವಿಕ ಇಂಧನ ಸಂಪನ್ಮೂಲಗಳ ಮೇಲೆ ಬೆಳಕು ಚೆಲ್ಲುತ್ತಿದ್ದರೆ, ಸಿರ್ಸಿಯ ಅರಣ್ಯ ಕಾಲೇಜಿನ ಕೇಂದ್ರವು ಅರಣ್ಯ ಆಧಾರಿತ ಸಂಪನ್ಮೂಲಗಳ ಕುರಿತು ಕೇಂದ್ರೀಕೃತ ಸಂಶೋಧನೆಯಲ್ಲಿ ತೊಡಗಿದೆ ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಅವರು ಮಾತನಾಡಿ, ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ಜೈವಿಕ ಇಂಧನ ಘಟಕವಿರುವುದರಿಂದ ಕಾರವಾರ ಮಾತ್ರವಲ್ಲದೆ ನೆರೆಯ ಗೋವಾ ರಾಜ್ಯದ ವಿದ್ಯಾರ್ಥಿಗಳಿಗೂ ಸಂಶೋಧನೆ ಮತ್ತು ಮಾಹಿತಿ ಪಡೆಯಲು ಅನುಕೂಲವಾಗಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಕೆಫೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ; ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿ

ಇಲ್ಲಿನ ಪ್ರಾತ್ಯಕ್ಷಿಕೆಗಳು ಬಯೋ ಡೀಸೆಲ್ ಉತ್ಪಾದನೆಯ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿವೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಎಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾಬಕ್ಷ್, ವಲಯ ಅರಣ್ಯಾಧಿಕಾರಿ ಕಿರಣ್ ಮಾನವಾಚಾರಿ, ಕಾರವಾರ ಕೇಂದ್ರದ ಸಂಯೋಜಕ ರೋಹನ್ ಬುಜಲೆ ಹಾಗೂ ವಿಜ್ಞಾನ ಕೇಂದ್ರದ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...