ಉತ್ತರ ಕನ್ನಡ | ಮುರುಡೇಶ್ವರದಲ್ಲಿ ಶೀಘ್ರದಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ: ಸಚಿವ ಮಂಕಾಳ ವೈದ್ಯ

Date:

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಶೀಘ್ರದಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಗೊಳ್ಳುವುದು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಸಾರ್ವಜನಿಕ ಸಭೆಯಲ್ಲಿ ಘೋಷಿಸಿದ್ದಾರೆ.

- Advertisement -

ಆಸ್ಪತ್ರೆಗೆ ಬೇಕಾದ ಜಮೀನು ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಸ್ತಾವಿತ ಯೋಜನೆಯಡಿ ಮೆಡಿಕಲ್ ಕಾಲೇಜು ಹಾಗೂ ನರ್ಸಿಂಗ್ ಕಾಲೇಜುಗಳ ಜೊತೆಗೆ ಒಟ್ಟು ಸುಮಾರು 18 ಕಾಲೇಜುಗಳು ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಈ ಮಹತ್ವಾಕಾಂಕ್ಷೆಯ ಯೋಜನೆಗೆ ಒಟ್ಟು 30 ಎಕರೆ ಭೂಮಿ ಅಗತ್ಯವಿದ್ದು, ಈ ಹಿಂದೆ ಜಮೀನು ಹಂಚಿಕೆ ಕುರಿತು ಕೆಲವು ವಿರೋಧ ವ್ಯಕ್ತವಾಗಿತ್ತು, ಜಿಲ್ಲೆಯ ಜನರ ಆರೋಗ್ಯದ ದೃಷ್ಟಿಯಿಂದ ಸುಸಜ್ಜಿತ ಆಸ್ಪತ್ರೆ ಅತ್ಯಗತ್ಯವಾಗಿದೆ ಎಂದು ಶಾಸಕರು ಹೇಳಿದರು. ಯೋಜನೆಗಾಗಿ ಜಾಗದ ಕೊರತೆ ಎದುರಾಗದಂತೆ ಮುರುಡೇಶ್ವರದ ಸಮೀಪದ ಮಾವಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ, ಹೋಟೆಲ್ ಹಿಂಭಾಗದಲ್ಲಿರುವ ಸುಮಾರು 30 ಎಕರೆ ಜಾಗವನ್ನು ಈಗಾಗಲೇ ಕಾಯ್ದಿರಿಸಲಾಗಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಕುಮಟಾ | ಚತುಷ್ಪಥ ರಸ್ತೆ ಕಾಮಗಾರಿ ವಿಳಂಬ; ಅಧಿಕಾರಿಗಳಿಗೆ ಶಾಸಕ ದಿನಕರ ಶೆಟ್ಟಿ ಎಚ್ಚರಿಕೆ

ಆರಂಭದಲ್ಲಿ ಪ್ರಸ್ತಾಪಿಸಿದ ಜಾಗ ಲಭ್ಯವಾಗದಿದ್ದರೂ ಸಹ, ಮಾವಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿಯೇ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮುರುಡೇಶ್ವರದಲ್ಲೇ ಆಗುತ್ತದೆ; ಇದರ ಬಗ್ಗೆ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ದೃಢಪಡಿಸಿದರು.

ಜಿಲ್ಲೆಯಲ್ಲಿ ದೀರ್ಘಕಾಲದಿಂದ ಸುಸಜ್ಜಿತ ಆಸ್ಪತ್ರೆಯ ಬೇಡಿಕೆ ಇದ್ದು, ಈ ಯೋಜನೆ ಜಾರಿಗೆ ಬಂದರೆ ಜಿಲ್ಲೆಯ ಜನರಿಗೆ ಆರೋಗ್ಯ ಸೇವೆಗಳನ್ನು ಸುಲಭವಾಗಿ ಸಿಗುವಂತೆ ಮಾಡಲಿದೆ. ಜೊತೆಗೆ ಮೆಡಿಕಲ್ ಹಾಗೂ ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಸ್ಥಳೀಯ ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಅನುಕೂಲವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರಂತರತೆಯೇ ರಂಗಭೂಮಿಯ ನಿಜವಾದ ಶಕ್ತಿ: ಕೋಟಿಗಾನಹಳ್ಳಿ ರಾಮಯ್ಯ

ರಂಗಭೂಮಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲು ಇಚ್ಛಾಶಕ್ತಿ, ಬದ್ಧತೆ ಹಾಗೂ ಸಾಂಸ್ಕೃತಿಕ ಹೊಣೆಗಾರಿಕೆ...

ಉಡುಪಿ | ಸೌಹಾರ್ದ ಸಮಾಜ ಕಟ್ಟುವ ಹೊಣೆ ಮುಸ್ಲಿಮ್ ಒಕ್ಕೂಟ ವಹಿಸಲಿ: ಯು.ಟಿ.ಖಾದರ್

ಸಾಮರಸ್ಯದ ಬದುಕು ಮತ್ತು ಒಗ್ಗಟ್ಟಿನ ಸಮಾಜವೇ ನಮ್ಮ ದೊಡ್ಡ ಶಕ್ತಿ ಹಾಗೂ...

ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ...

ಜಮಖಂಡಿ | ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ: 4 ಸಾವಿರ ಅರ್ಜಿಗಳ ಪೈಕಿ 3 ಸಾವಿರಕ್ಕೂ ಹೆಚ್ಚು ವಿಲೇವಾರಿ

ಸರ್ಕಾರದ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಬದಲು...