ಉತ್ತರ ಕನ್ನಡ | ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ನವೆಂಬರ್ 25ರೊಳಗೆ ಯೋಜನಾ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ

Date:

ಉತ್ತರ ಕನ್ನಡ ಜಿಲ್ಲೆಯ ಸಮಗ್ರ ಅಭಿವೃಧ್ದಿಗೆ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳು ಮತ್ತು ಜನತೆಗೆ ಒದಗಿಸಬೇಕಾದ ಸೌಲಭ್ಯಗಳ ಕುರಿತಂತೆ ಸಮಗ್ರವಾದ ವರದಿಯನ್ನು ತಯಾರಿಸುವಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಸೂಚಿಸಿದರು.

- Advertisement -

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲಾ ಯೋಜನಾ ಸಮಿತಿ ರಚನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ. ಜಿಲ್ಲೆಯ ಸಮಗ್ರ ಅಭಿವೃಧ್ದಿಗೆ, ಜನತೆಯ ಆಶೋತ್ತರಗಳನ್ನು ಒಳಗೊಂಡ ಯೋಜನೆಗಳನ್ನು ರೂಪಿಸಬೇಕು, ಈ ಯೋಜನೆಯಲ್ಲಿ ಸ್ಥಳೀಯ ಅಂಗನವಾಡಿ, ಶಾಲೆ, ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಹಿಡಿದು ಅತ್ಯಂತ ಅಗತ್ಯವಿರುವ ದೊಡ್ಡ ಯೋಜನೆಗಳನ್ನೂ ಕೂಡಾ ಸೇರಿಸಬೇಕು. ಈ ಎಲ್ಲಾ ಯೋಜನೆಗಳನ್ನು ಒಳಗೊಂಡ ಇಲಾಖಾವಾರು ಬೇಡಿಕೆಯ ಸಮಗ್ರ ಯೋಜನಾ ವರದಿಯನ್ನು ನವೆಂಬರ್ 25 ರೊಳಗೆ ಸಲ್ಲಿಸುವಂತೆ ಸೂಚಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಯೋಜನೆಯಲ್ಲಿ ಸಾರ್ವಜನಿಕರ ಬೇಡಿಕೆಯನುಸಾರ ಕಾಮಗಾರಿಗಳನ್ನು ಸೇರ್ಪಡೆ ಮಾಡುವ ಮೂಲಕ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು, ತಾವು ಮಾಡುವ ಉತ್ತಮ ಕೆಲಸಗಳಿಂದ ಸಾರ್ವಜನಿಕರು ತಮ್ಮನ್ನು ನೆನೆಸುವಂತಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ನಿಷೇಧವಿದ್ದರೂ ನಿಲ್ಲದ ಮರಳು ದಂಧೆ; ಎನ್‌ಜಿಟಿ ಆದೇಶಕ್ಕೂ ಕಿಮ್ಮತ್ತಿಲ್ಲ

ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರೀಯಾ ಮಾತನಾಡಿ, ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿನ ಬೇಡಿಕೆಗಳ ವರದಿಯನ್ನು ನಿಗಧಿತ ಅವಧಿಯೊಳಗೆ ಜಿಲ್ಲಾ ಪಂಚಾಯತ್‌ಗೆ ಸಲ್ಲಿಸುವಂತೆ ಹಾಗೂ ಯೋಜನೆ ಸಿದ್ದಪಡಿಸುವಲ್ಲಿ ಗೊಂದಲಗಳಿದ್ದಲ್ಲಿ ನೇರವಾಗಿ ಸಂಪರ್ಕಿಸುವಂತೆ ತಿಳಿಸಿದರು. ಯೋಜನಾ ವರದಿಯನ್ನು ತಯಾರಿಸುವ ಸಂದರ್ಭದಲ್ಲಿ ಸ್ಥಳೀಯ ಚುನಾಯಿತ ಜನ ಪ್ರತಿನಿಧಿಗಳ ಅಭಿಪ್ರಾಯ ಪಡೆದು, ಸಭೆಯಲ್ಲಿ ಚರ್ಚಿಸಿ ವರದಿಯನ್ನು ಸಲ್ಲಿಸಬೇಕು ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ.ದಿಲೀಷ್ ಶಶಿ ಹೇಳಿದರು. 

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್‌ಎಂ.ಎನ್, ಉಪ ವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅಲ್ಲಾಭಕ್ಷ, ಮುಖ್ಯಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...