ಉತ್ತರ ಕನ್ನಡ | ಮಳೆ ಕಾರಣದಿಂದ ನೀಡಿದ್ದ ರಜೆ ಸರಿದೂಗಿಸಲು ಶನಿವಾರ ಪೂರ್ಣಾವಧಿ ತರಗತಿ ನಡೆಸಲು ಆದೇಶ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಶಾಲೆಗಳಿಗೆ ಘೋಷಿಸಲಾಗಿದ್ದ ರಜೆಗಳ ಬೋಧನಾ ಅವಧಿಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದೆ.

- Advertisement -

ಉತ್ತರ ಕನ್ನಡ, ಕಾರವಾರ ತಾಲೂಕಿನಾದ್ಯಂತ ಭಾರಿ ಮಳೆಯಿಂದಾಗಿ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಣೆ ನೀಡಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, 2005ರ ವಿಪತ್ತು ನಿರ್ವಹಣಾ ಕಾಯ್ದೆಯ ಕಲಂ 34(ಎಮ್) ಅಡಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...
WhatsApp Image 2025 08 07 at 3.59.56 PM

ಈ ರಜಾ ಅವಧಿಯಲ್ಲಿ ನಷ್ಟವಾದ ಬೋಧನಾ ಸಮಯವನ್ನು ಸರಿದೂಗಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದರ ಅನ್ವಯ, ಆಗಸ್ಟ್ 16ರಿಂದ ಆರಂಭವಾಗುವ ಪ್ರತಿ ಶನಿವಾರದಂದು ಪೂರ್ಣ ದಿನ ಶಾಲಾ ತರಗತಿಗಳನ್ನು ನಡೆಸುವಂತೆ ಆದೇಶಿಸಲಾಗಿದೆ. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದ್ದು, ಸಂಬಂಧಿಸಿದ ಎಲ್ಲಾ ಶಾಲೆಗಳು ಮತ್ತು ಶಿಕ್ಷಣಾಧಿಕಾರಿಗಳು ಇದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ

ಈ ನಿರ್ದೇಶನವು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ತಲುಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...