ಉತ್ತರ ಕನ್ನಡ | ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ಸೂಚಕ: ಸಚಿವ ಮಂಕಾಳ ವೈದ್ಯ

Date:

ಉತ್ತರ ಕನ್ನಡ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಕೇವಲ ಭರವಸೆಗಳಲ್ಲ, ಅವು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ನಿಜವಾದ ಸೂಚಕಗಳಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಬುಧವಾರ ಹೊನ್ನಾವರದ ಗುಣವಂತೆಯ ಕೆಳಗಿನೂರು ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಗಾರ ಮತ್ತು ಗ್ಯಾರಂಟಿ ಉತ್ಸವ’ವನ್ನು ಉದ್ಘಾಟಿಸಿ ಹೇಳಿದರು.

- Advertisement -

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಸಾರ್ವಜನಿಕರಿಗೆ ಪ್ರತಿ ವರ್ಷ ಸುಮಾರು 1,500 ಕೋಟಿ ರೂಪಾಯಿ ಹಾಗೂ ರಾಜ್ಯಾದ್ಯಂತ 50 ಸಾವಿರ ಕೋಟಿ ರೂಪಾಯಿಗಳ ಪ್ರಯೋಜನ ತಲುಪುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಬಡ ಜನರ ಮುಖದಲ್ಲಿನ ನಗು ಮತ್ತು ನೆಮ್ಮದಿಯೇ ನಿಜವಾದ ಅಭಿವೃದ್ಧಿಯ ಸಂಕೇತ ಎಂದ ಸಚಿವರು, ಈ ಯೋಜನೆಗಳು ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಿದ್ದು, ಅಲ್ಲಿನ ಸರ್ಕಾರಗಳು ನಮ್ಮನ್ನು ಅನುಸರಿಸುತ್ತಿವೆ ಎಂದು ಹೆಮ್ಮೆ ನಮಗೆ ಇದೆ ಎಂದು ತಿಳಿಸಿದರು. ಮುಂಬರುವ ಬಜೆಟ್ 4.50 ಲಕ್ಷ ಕೋಟಿ ರೂಪಾಯಿಗಳ ಬೃಹತ್ ಗಾತ್ರವನ್ನು ಹೊಂದಿರಲಿದೆ ಎಂಬ ಮಾಹಿತಿಯನ್ನು ಮಂಕಾಳ ವೈದ್ಯ ಅವರು ಈ ಸಂದರ್ಭದಲ್ಲಿ ಹೇಳಿದರು.

1000517512

ಇದೇ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಅವರು, ರಾಜ್ಯದಲ್ಲಿ ಇದುವರೆಗೆ 1,17,421 ಕೋಟಿ ರೂಪಾಯಿಗಳನ್ನು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ನೇರವಾಗಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

‘ಶಕ್ತಿ’ ಯೋಜನೆಯಡಿ ರಾಜ್ಯದಲ್ಲಿ 668 ಕೋಟಿ ಮಹಿಳೆಯರು ಪ್ರಯಾಣಿಸಿರುವುದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದ್ದು, ಈ ಯೋಜನೆಯ ಯಶಸ್ಸಿಗಾಗಿ ಹೊಸದಾಗಿ 5,000 ಬಸ್ಸುಗಳ ಖರೀದಿ ಮತ್ತು ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು. ಯೋಜನೆಯ ಪ್ರಚಾರಕ್ಕಾಗಿ ‘ಮನೆಗೆ 5 ಗ್ಯಾರಂಟಿ, ಮನೆ ಮುಂದೆ ರಂಗೋಲಿ’ ಎಂಬ ಅಭಿಯಾನವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮುಂಡಗೋಡ–ಹಳಿಯಾಳ ಗ್ರಾಮಗಳ ಜನತೆಗೆ ಸುವರ್ಣಾವಕಾಶ: ಮೀನು ಮಾರಾಟ ವಾಹನಕ್ಕೆ ಸಿಗಲಿದೆ 90% ಸಬ್ಸಿಡಿ!

ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಅವರು ಜಿಲ್ಲೆಯ ಪ್ರಗತಿಯ ವಿವರ ನೀಡಿ, ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 17 ಕೋಟಿಗೂ ಅಧಿಕ ಮಹಿಳೆಯರು ಪ್ರಯಾಣಿಸಿದ್ದು, 532 ಕೋಟಿ ರೂ.ಗಳ ಉಚಿತ ಟಿಕೆಟ್ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 3.37 ಲಕ್ಷ ಫಲಾನುಭವಿಗಳಿಗೆ 1,599 ಕೋಟಿ ರೂ. ತಲುಪಿದ್ದು, ಯುವನಿಧಿ ಮತ್ತು ಅನ್ನಭಾಗ್ಯ ಯೋಜನೆಗಳು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಂಡಿವೆ ಎಂದು ಜಿಲ್ಲೆಯ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳು ಶೇ. 99ರಷ್ಟು ಪ್ರಗತಿ ಸಾಧಿಸಿರುವುದನ್ನು ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ ಶ್ಲಾಘಿಸಿದರು. ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಮೋಹನ್ ಮೈಸೂರು ಅವರು, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಕೊಳ್ಳುವ ಸಾಮರ್ಥ್ಯ ಹೆಚ್ಚಾಗಿದೆಯೇ ಹೊರತು ರಾಜ್ಯ ದಿವಾಳಿಯಾಗಿಲ್ಲ.

ಜಿ.ಎಸ್.ಟಿ ಸಂಗ್ರಹಣೆಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಆರ್ಥಿಕ ಅಂಕಿಅಂಶಗಳ ಸಮೇತ ವಿವರಿಸಿದರು. ಫಲಾನುಭವಿ ಅನಿತಾ ಅವರು ಮಾತನಾಡಿ, ಈ ಯೋಜನೆಗಳಿಂದ ತಮಗೆ ತಿಂಗಳಿಗೆ 10 ರಿಂದ 12 ಸಾವಿರ ರೂಪಾಯಿ ಉಳಿತಾಯವಾಗುತ್ತಿದ್ದು, ಅದನ್ನು ಮಕ್ಕಳ ಶಿಕ್ಷಣಕ್ಕೆ ಬಳಸುತ್ತಿರುವುದಾಗಿ ಗ್ಯಾರಂಟಿ ಯೋಜನೆಗಳಿಂದ ತಮಗೆ ಆದ ಉಪಯೋಗದ ಬಗ್ಗೆ ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ್, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿ.ಪಂ. ಸಿಇಒ ಡಾ. ದಿಲೀಶ್ ಶಶಿ, ಎಸ್ಪಿ ದೀಪನ್ ಎಂ.ಎನ್ ಸೇರಿದಂತೆ ವಿವಿಧ ತಾಲೂಕುಗಳ ಗ್ಯಾರಂಟಿ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...