ಉತ್ತರ ಕನ್ನಡ | ಶಾಲಾ-ಕಾಲೇಜುಗಳಲ್ಲಿ ಮಾದಕ ವ್ಯಸನ ತಡೆಗೆ ಪೊಲೀಸ್ ಇಲಾಖೆಯ ಜಾಗೃತಿ ಅಭಿಯಾನ

Date:

ಯುವಜನರನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಶಾಲೆ ಹಾಗೂ ಕಾಲೇಜುಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದೆ.

- Advertisement -

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರ ಮಾರ್ಗದರ್ಶನದಲ್ಲಿ ನಡೆದ ಈ ಅಭಿಯಾನದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಕ್ಷಣ ಸಂಸ್ಥೆಗಳಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕಾರ್ಯಕ್ರಮಗಳಲ್ಲಿ ವಿವಿಧ ರೀತಿಯ ಮಾದಕ ವಸ್ತುಗಳು, ಅವುಗಳ ಸೇವನೆಯಿಂದ ಆರೋಗ್ಯ, ಶಿಕ್ಷಣ ಮತ್ತು ಕುಟುಂಬ ಜೀವನದ ಮೇಲೆ ಉಂಟಾಗುವ ಪರಿಣಾಮಗಳು, ಸಂಬಂಧಿತ ಕಾನೂನು ನಿಯಮಗಳು ಹಾಗೂ ಶಿಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಜೊತೆಗೆ ವ್ಯಸನದಿಂದ ದೂರವಿರುವ ಮಾರ್ಗಗಳು ಮತ್ತು ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ವಿವರಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಅಪರೂಪದ ಬಿಳಿ ಕಾಗೆ ಪ್ರತ್ಯಕ್ಷ: ಶಾಲಾ ಮಕ್ಕಳಲ್ಲಿ ಮೂಡಿದ ಕುತೂಹಲ

ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರಿಸಿ, ಅನುಮಾನಗಳನ್ನು ನಿವಾರಿಸುವ ಮೂಲಕ ಜಾಗೃತಿ ಮೂಡಿಸುವ ಪ್ರಯತ್ನ ನಡೆಸಿದರು. ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಭಾಗದ ಶಾಲೆ-ಕಾಲೇಜುಗಳಲ್ಲೂ ಸಮಾನವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಅಭಿಯಾನದ ವಿಶೇಷತೆಯಾಗಿದೆ.

ಜಿಲ್ಲಾ ಪೊಲೀಸ್ ಇಲಾಖೆ ಅಪರಾಧ ನಿಯಂತ್ರಣದ ಜೊತೆಗೆ ಸಮಾಜಮುಖಿ ಕಾರ್ಯಗಳಿಗೂ ಆದ್ಯತೆ ನೀಡುತ್ತಿದ್ದು, ಯುವಜನರಲ್ಲಿ ಕಾನೂನು ಪಾಲನೆ, ಸಾಮಾಜಿಕ ಜವಾಬ್ದಾರಿ ಹಾಗೂ ಆರೋಗ್ಯಕರ ಬದುಕಿನ ಬಗ್ಗೆ ಅರಿವು ಬೆಳೆಸುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಸಂಸ್ಥೆಗಳು, ಪೋಷಕರು ಮತ್ತು ಪೊಲೀಸ್ ಇಲಾಖೆ ಪರಸ್ಪರ ಸಹಕಾರದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಹಾಗೂ ಇಂತಹ ಜಾಗೃತಿ ಅಭಿಯಾನಗಳು ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ನಡೆಯಬೇಕೆಂದು ಸಾರ್ವಜನಿಕರು ಹಾಗೂ ಪಾಲಕರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...