ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ, ಕಾರವಾರ ಹಾಗೂ ಕುಮಟಾ ಹೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ವಿವಿಧ ನಿರ್ವಹಣೆ ಮತ್ತು ಕಾಮಗಾರಿಗಳ ಹಿನ್ನೆಲೆಯಲ್ಲಿ ಸೆ.23ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊನ್ನಾವರ ತಾಲೂಕಿನ ಗೇರುಸೊಪ್ಪ ಶಾಖೆಯ ಉಪ್ಪೋಣಿ ಫೀಡರ್‌ನ 11 ಕೆ.ವಿ. ಮಾರ್ಗದ ನಿರ್ವಹಣೆ ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಉಪ್ಪೋಣಿ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಸುದ್ದಿ ಓದಿದ್ದೀರಾ? ಹಳಿಯಾಳ | ಶ್ವಾನಗಳನ್ನು ಹಿಡಿದು ಕಾಡಿಗೆ ಬಿಟ್ಟ ಆರೋಪ; ಇಐಡಿ ಪ್ಯಾರಿ ಕಾರ್ಖಾನೆಯ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್
ಕಾರವಾರ ಹೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ನಡೆಯಲಿರುವುದರಿಂದ ಬೆಳಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ತೇಲಂಗರೋಡ ಫೀಡರ್‌ನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅದೇ ರೀತಿ, ಕುಮಟಾ ಉಪವಿಭಾಗದ ನಗರ ಶಾಖೆಯ 11 ಕೆ.ವಿ. ಕುಮಟಾ ಟೌನ್ ಹಾಗೂ ಗ್ರಾಮೀಣ ಶಾಖೆಯ 11 ಕೆ.ವಿ. ಧಾರೆಶ್ವರ ಮಾರ್ಗದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗಾಗಿ 11 ಕೆ.ವಿ. ಮಾರ್ಗ ಸ್ಥಳಾಂತರ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದರೊಂದಿಗೆ 33 ಕೆ.ವಿ. ಗೋಕರ್ಣ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಾದನಗೇರಿ, ಗೋಕರ್ಣ, ತದಡಿ, ಬಂಕಿಕೊಡ್ಲ, ಗಂಗಾವಳಿ, ಬಿಜ್ಜೂರ ಹಾಗೂ ಓಂ ಬೀಚ್ ಮಾರ್ಗದ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಂಬಂಧಪಟ್ಟ ಪ್ರದೇಶಗಳ ಗ್ರಾಹಕರು ಸಹಕರಿಸುವಂತೆ ಹೊನ್ನಾವರ, ಕಾರವಾರ ಹಾಗೂ ಕುಮಟಾ ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




