ಉತ್ತರ ಕನ್ನಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೆಪ್ಟೆಂಬರ್.26ರಂದು ಬೆಳಿಗ್ಗೆ 10.30ಕ್ಕೆ ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲಾಗಿದೆ.
ಕಾರವಾರ ತಾಲೂಕಿನ ಕಿನ್ನರ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಹಳಿಯಾಳ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಪರ್ಸ್ ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಮಹಿಳೆ
ಇದೇ ವೇಳೆ ಸಹಾಯಕ ಆಯುಕ್ತರು, ತಹಶೀಲ್ದಾರರು ಹಾಗೂ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಿದ್ದಾಪುರ ತಾಲೂಕಿನ ನೀಲಕುಂದು, ಭಟ್ಕಳ ತಾಲೂಕಿನ ಮಾರುಕೇರಿ, ಮುಂಡಗೋಡ ತಾಲೂಕಿನ ಮೈನಳ್ಳಿ, ಕುಮಟಾ ತಾಲೂಕಿನ ಮಿರ್ಜಾನ ಹಾಗೂ ಜೋಯಿಡಾ ತಾಲೂಕಿನ ರಾಮನಗರ ಗ್ರಾಮ ಪಂಚಾಯಿತಿಗಳಲ್ಲಿ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.
ಸಭೆಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು ಹಾಗೂ ಕುಂದುಕೊರತೆಗಳನ್ನು ಸಲ್ಲಿಸಿ, ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




