ಉತ್ತರ ಕನ್ನಡ | ಗೋವಾದಲ್ಲಿ ಗಡಿ ಕನ್ನಡ ಭವನ ನಿರ್ಮಾಣಕ್ಕಾಗಿ ಖಾಸಗಿ ನಿವೇಶನ ಖರೀದಿ

Date:

Advertisements

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ನಿವೇಶನ ಖರೀದಿ ಮಾಡಿದೆ.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆಯಲ್ಲಿ ಹಾಗೂ ಪ್ರಕಾಶ ಮತ್ತೀಹಳ್ಳಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಇವರ ಉಪಸ್ಥಿತಿಯಲ್ಲಿ ಬುಧವಾರ ಹೋಟೆಲ್ ಕೇಸರ್ವಾಲ್ ಗಾರ್ಡನ್, ಪಂಜಿಮ್ ರಾಷ್ಟ್ರೀಯ ಹೆದ್ದಾರಿ, ವರ್ನಾ ಜಂಕ್ಷನ್ರಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಮಾತನಾಡಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ನಿವೇಶನ ಸರ್ವೆ ನಂಬರ್ 113/9 11571.2 Sq.ft Ambarame Matta, Cortalim Village, Vasco-Mormugao Taluk, Goa ನ್ನು ಖರೀದಿಸಿರುವ ಅಂಶಗಳ ಬಗ್ಗೆ ಮಾಹಿತಿ ನೀಡಿದರು.

2022-23ನೇ ಸಾಲಿನ ಆಯವ್ಯಯದಲ್ಲಿ “ಗೋವಾದಲ್ಲಿ ಕನ್ನಡ ಭವನ” ನಿರ್ಮಾಣ ಮಾಡುವ ಯೋಜನೆ ಘೋಷಣೆಯಾಗಿತ್ತು. ಸುಮಾರು 6 ಲಕ್ಷದಷ್ಟು ಇರುವ ಕನ್ನಡಿಗರಿಗಾಗಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣದ ಅನುಷ್ಠಾನಕ್ಕಾಗಿ ಕಳೆದ ನಲವತ್ತು ವರ್ಷಗಳಿಂದ ಗೋವಾ ಕನ್ನಡಿಗರು ಮನವಿ ಸಲ್ಲಿಸುತ್ತಾ ಬಂದಿದ್ದರು. ನಿವೇಶನ ಪಡೆಯುವ ಬಗ್ಗೆ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಈ ಮುಂದಿನಂತೆ ಕ್ರಮಗಳನ್ನು ತೆಗೆದುಕೊಂಡಿದೆ.

Advertisements

2022-23 ರ ಬಜೆಟ್‌ನಲ್ಲಿ ಸದರಿ ಯೋಜನೆ ಘೋಷಣೆಯಾಗುವುದಕ್ಕೂ ಮುನ್ನ ಅಖಿಲ ಗೋವಾ ಕನ್ನಡ ಮಹಾ ಸಂಘ ಇವರ ಮನವಿಯ ಮೇಲೆ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ 12-12-2021 ರಂದು ರಂದು ಗೋವಾಕ್ಕೆ ಭೇಟಿ ಮಾಡಿ ಅಲ್ಲಿನ ಎಲ್ಲಾ ಕನ್ನಡ ಪರ ಸಂಘ ಸಂಸ್ಥೆಗಳ ಜೊತೆ ಚರ್ಚಿಸಲಾಯಿತು.

ಜುವ್ಹಾರಿ ಆಗ್ರೋ ಕೆಮಿಕಲ್ ಲಿ. ಗೋವಾ, ಇವರ ಒಡೆತನದಲ್ಲಿರುವ ಖಾಸಗಿ ನಿವೇಶನವನ್ನು ಪಡೆದುಕೊಳ್ಳಲು ಪ್ರಯತ್ನಿಸಿ 20 ಡಿಸೆಂಬರ್ 2021 ರಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರು ನವದೆಹಲಿ ರವರಿಗೆ ಪತ್ರ ಬರೆಯಲಾಯಿತು. ಹಿಂದಿನ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರು ಗೋವಾದ ಜುವ್ಹಾರಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಿಗೆ 3 ಜನವರಿ 2022 ರಂದು ಪತ್ರ ಬರೆದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಇಂತಹ ಪ್ರತಿಷ್ಠಿತ ಯೋಜನೆಗೆ ಕೈಗಾರಿಕೆಗಳ ಸಿಎಸ್‌ಆರ್ ನಿಧಿಯ ವ್ಯಾಪ್ತಿಯಲ್ಲಿ ಉಚಿತವಾಗಿ ಕನಿಷ್ಠ 5 ಎಕರೆ ಜಾಗವನ್ನು ಒದಗಿಸಿ ಎರಡೂ ರಾಜ್ಯಗಳ ಬಾಂಧವ್ಯಗಳಿಗೆ ಪ್ರೋತ್ಸಾಹ ನೀಡಲು ಕೋರಿರುತ್ತಾರೆ.

ಇದನ್ನೂ ಓದಿ: ಉತ್ತರ ಕನ್ನಡ | ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕೋಲಾ ಬಸ್ ನಿಲ್ದಾಣ

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸೂಕ್ತವಾದ ಸರ್ಕಾರಿ ನಿವೇಶನವನ್ನು ಒದಗಿಸಲು ಕೋರಿ, ಗಡಿ ಪ್ರಾಧಿಕಾರದಿಂದ ಜಿಲ್ಲಾಧಿಕಾರಿಗಳು, ದಕ್ಷಿಣ ಗೋವಾ ಇವರಿಗೂ ಸಹಾ 10 ಡಿಸೆಂಬರ್2021 ರಂದು ಪತ್ರ ಬರೆಯಲಾಗಿರುತ್ತದೆ. ಇದಕ್ಕೆ ಪೂರಕವಾಗಿ ದಕ್ಷಿಣ ಗೋವಾದ ಜಿಲ್ಲಾ ಕಲೆಕ್ಟರ್‌ರವರು 6 ಜನವರಿ 2022 ರಂದು ದಕ್ಷಿಣ ಗೋವಾದ ಎಲ್ಲಾ ತಹಶೀಲ್ದಾರರುಗಳಿಗೆ ಪತ್ರ ಬರೆದು ನಮೂನೆ 1 & 14, ರ ನಮೂನೆಯಲ್ಲಿ ಅಗತ್ಯವಾದ ನಿವೇಶನಗಳನ್ನು ಗುರುತಿಸಿ, ಖರೀದಿ ಮೊತ್ತ, ನಕಾಶೆ ಇತ್ಯಾದಿಗಳ ವಿವರಗಳನ್ನು ಸಲ್ಲಿಸುವಂತೆ ಕೋರಿರುತ್ತಾರೆ. ಆದರೆ ನಂತರ ಇದರಿಂದ ಯಾವುದೇ ಪ್ರಗತಿಯಾಗಿರುವುದಿಲ್ಲ ಹಾಗೂ ಅನೇಕ ಬಾರಿ ಜಿಲ್ಲಾ ಕಲೆಕ್ಟರ್ ಮತ್ತು ತಹಶೀಲ್ದಾರರನ್ನು ಇವರನ್ನು ಖುದ್ದಾಗಿ ಸಂಪರ್ಕಿಸಿದರೂ ಕೂಡಾ ಸರ್ಕಾರಿ ಜಾಗ ಲಭ್ಯವಿಲ್ಲವಾಗಿರುವುದಾಗಿ ಮೌಖಿಕವಾಗಿ ತಿಳಿಸಿರುತ್ತಾರೆ. ಯಾವುದೇ ಹಿಂಬರಹ ನೀಡಿರುವುದಿಲ್ಲ.

ಸಭೆಯಲ್ಲಿ ಹಾಜರಿದ್ದ ಎಲ್ಲಾ ಕನ್ನಡ ಪರ ಸಂಘ ಸಂಸ್ಥೆಗಳು ಒಟ್ಟಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಪ್ರಸ್ತುತ ಖರೀದಿಸಿರುವ ನಿವೇಶನಕ್ಕೆ ತಾತ್ಕಲಿಕವಾಗಿ ಆವರಣಗೋಡೆಯನ್ನು ನಿರ್ಮಿಸಿ ಕೊಡುವುದಾಗಿ ತಿಳಿಸಿದರು ಹಾಗೂ ಕನ್ನಡ ಭವನ ನಿರ್ಮಾಣಕ್ಕಾಗಿ ಗೋವಾದಲ್ಲಿ ನಿವೇಶನ ಖರೀದಿಸಿರುವುದಕ್ಕಾಗಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಿಗೆ ಹಾಗೂ ಉಪಮುಖ್ಯಮಂತ್ರಿಗಳಿಗೆ ಆಭಾರಿಯಾಗಿರುವುದಾಗಿ ತಿಳಿಸಿದರು ಹಾಗೂ ಕನ್ನಡ ಭವನ ನಿರ್ಮಾಣ ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಸಲು ಅನುದಾನ ಒದಗಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿ ಕಾಮಗಾರಿಯನ್ನು ಪ್ರಾರಂಭಿಸಲು ಆಗ್ರಹಿಸಿದರು.

ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಗೋವಾ ಗಡಿನಾಡು ಘಟಕದ ಸಿದ್ದಣ್ಣ ಮೇಟಿ, ಹನುಮಂತ ರೆಡ್ಡಿ ಶಿರೂರು, ತವರಪ್ಪ, ರಾಜೇಶ್ ಶೆಟ್ಟಿ, ತಡಿವಾಳ್, ಶಿವಾನಂದ ಬಿಂಗಿ ಹಾಗೂ ಗೋವಾದಲ್ಲಿನ ಇತರೆ ಕನ್ನಡ ಪರ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರುಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X