ಉತ್ತರ ಕನ್ನಡ | SIR ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ: ತಹಶೀಲ್ದಾರರಿಗೆ ಮನವಿ ಸಲ್ಲಿಕೆ

Date:

ಉತ್ತರ ಕನ್ನಡ: SIR’ (Special Intensive Revision) ಹೆಸರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗೆ ಆಗ್ರಹಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ.

- Advertisement -

ಇದರ ಭಾಗವಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ಮತ್ತು ಶಿರಸಿ, ಅಂಕೋಲಾ ತಾಲೂಕುಗಳಲ್ಲಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಿದ್ಧಾಪುರದಲ್ಲಿ ಮನವಿ ಸಲ್ಲಿಕೆ ಸಿದ್ಧಾಪುರ ತಾಲೂಕು SIR ವಿರೋಧಿ ಒಕ್ಕೂಟದ ಸದಸ್ಯರು ತಹಶೀಲ್ದಾರರಿಗೆ ಮನವಿ ಸಲ್ಲಿಸಿ, ಈ ಪ್ರಕ್ರಿಯೆಯು ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುವ ಹುನ್ನಾರವಾಗಿದೆ ಎಂದು ಆರೋಪಿಸಿದರು. 2003 ಹಾಗೂ ಅದಕ್ಕೂ ಹಿಂದಿನ ಪರಿಷ್ಕರಣೆ ಪ್ರಕ್ರಿಯೆಗಳಿಗೆ ಹೋಲಿಸಿದರೆ ಪ್ರಸ್ತುತ SIR ಪ್ರಕ್ರಿಯೆಯು ಹೆಚ್ಚು ಜಟಿಲವಾಗಿದ್ದು, ಇದು ಮತದಾರರನ್ನು ಕೇವಲ ಮತದಾನದ ಹಕ್ಕಿನಿಂದಷ್ಟೇ ಅಲ್ಲದೆ, ಸರ್ಕಾರದ ವಿವಿಧ ಸೌಲಭ್ಯಗಳಿಂದಲೂ ವಂಚಿತರನ್ನಾಗಿಸುವ ಅಪಾಯವನ್ನು ಉಂಟುಮಾಡಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಅಂಕೋಲಾ | ಹೆದ್ದಾರಿಯಲ್ಲಿ ಪಲ್ಟಿಯಾದ ಖಾಸಗಿ ಬಸ್; ಓರ್ವ ಪ್ರಯಾಣಿಕ ಸಾವು, 21 ಮಂದಿಗೆ ಗಾಯ

ಶಿರಸಿಯಲ್ಲಿ ಪ್ರತಿಭಟನೆ, ಮನವಿ ಸಲ್ಲಿಕೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಶಿರಸಿಯಲ್ಲಿಯೂ ಪ್ರತಿಭಟನೆ ನಡೆಸಲಾಯಿತು. SIR ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ವತಿಯಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸೋಷಿಯಲ್ ಡೆಮೊಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷ ರಿಯಾಜ್ ಶಿರಸಿ, ತಾಲೂಕು ಅಧ್ಯಕ್ಷ ಅಮ್ಜದ್ ಖಾನ್, ಜಿಲ್ಲಾ ಸಮಿತಿ ಸದಸ್ಯರಾದ ನಜೀರ್ ಖಾಝಿ ಹಾಗೂ ಬಷೀರ್ ಉಪಸ್ಥಿತರಿದ್ದರು. ಅಲ್ಲದೆ, N.K.M.U.F. ಕಾರ್ಯದರ್ಶಿ ಅರ್ಷದ್ ಸಯ್ಯದ್ ಹಾಗೂ ಒಕ್ಕೂಟದ ಶಿರಸಿ ತಾಲೂಕು ಉಪಾಧ್ಯಕ್ಷ ರಿಯಾಜ್ ಸಯ್ಯದ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿ, ಜನವಿರೋಧಿ ಎಂದು ಆರೋಪಿಸಲಾದ ಈ ಪ್ರಕ್ರಿಯೆಯ ವಿರುದ್ಧ ರಾಜ್ಯ ಸರ್ಕಾರ ದಿಟ್ಟ ನಿಲುವು ತಾಳಬೇಕೆಂದು ಆಗ್ರಹಿಸಿದರು.

ಪ್ರಮುಖ ಬೇಡಿಕೆಗಳು: ಜನವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಆರೋಪಿಸಲಾದ SIR ಪ್ರಕ್ರಿಯೆಯನ್ನು ಕರ್ನಾಟಕ ಸರ್ಕಾರ ಒಪ್ಪಬಾರದು, ರಾಜ್ಯ ಸರ್ಕಾರವೇ ಸ್ವತಂತ್ರವಾಗಿ ಅರ್ಹ ಮತದಾರರ ಪಟ್ಟಿಯನ್ನು ಸಿದ್ಧಪಡಿಸಬೇಕು, ಗ್ರಾಮಸಭೆ ಹಾಗೂ ವಾರ್ಡ್ ಸಭೆಗಳನ್ನು ನಡೆಸಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು, ಅರ್ಹ ಮತದಾರರಿಗೆ ಗುರುತಿನ ಚೀಟಿಗಳನ್ನು ವಿತರಿಸಬೇಕು,

ಅಗತ್ಯವಿದ್ದಲ್ಲಿ ನ್ಯಾಯಾಲಯದ ಮೊರೆ ಹೋಗಿ ಈ ಪ್ರಕ್ರಿಯೆಯನ್ನು ತಡೆಯಲು ಕ್ರಮ ಕೈಗೊಳ್ಳಬೇಕು, ಪ್ರಜಾಪ್ರಭುತ್ವದ ಮೂಲಭೂತ ತತ್ವಗಳ ರಕ್ಷಣೆಗೆ ಈ ಹೋರಾಟವನ್ನು ಮುಂದುವರಿಸುವುದಾಗಿ ಒಕ್ಕೂಟದ ಮುಖಂಡರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...