ಉತ್ತರ ಕನ್ನಡ | ರೈತ ಸಂಘಟನೆಗಳು, ಹೆಸ್ಕಾಂ ನೌಕರರಿಂದ ಪ್ರತಿಭಟನೆ; ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋಧಿಸಿ ಸರ್ಕಾರಕ್ಕೆ ಮನವಿ.

Date:

ಉತ್ತರ ಕನ್ನಡ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಪ್ರಸ್ತಾವವನ್ನು ವಿರೋಧಿಸಿ ಜಿಲ್ಲೆಯ ಶಿರಸಿ, ಅಂಕೋಲಾ ಹಾಗೂ ಸಿದ್ದಾಪುರದಲ್ಲಿ ರೈತ ಸಂಘಟನೆಗಳು, ಹೆಸ್ಕಾಂ ನೌಕರರು ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

- Advertisement -

ಶಿರಸಿಯಲ್ಲಿ ಉಪವಿಭಾಗಾಧಿಕಾರಿ ಕಚೇರಿ ಎದುರು ಜಮಾಯಿಸಿದ ರೈತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ಮುಖಂಡರು ಮಾತನಾಡಿ, ವಿದ್ಯುತ್ ಕ್ಷೇತ್ರವನ್ನು ಖಾಸಗಿಯವರಿಗೆ ನೀಡಿದರೆ ರೈತರು ಹಾಗೂ ಸಾಮಾನ್ಯ ಗ್ರಾಹಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಖಾಸಗಿ ಕಂಪನಿಗಳು ಸಾರ್ವಜನಿಕ ಹಿತಕ್ಕಿಂತ ಲಾಭಕ್ಕೆ ಹೆಚ್ಚಿನ ಆದ್ಯತೆ ನೀಡುವ ಕಾರಣ ಕೃಷಿ ಕ್ಷೇತ್ರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಹಳಿಯಾಳ | ರೌಡಿಶೀಟರ್ ಹಲ್ಲೆ ಪ್ರಕರಣ: ಪಿಎಸ್‌ಐ ಅಮಾನತು, 8 ಸಿಬ್ಬಂದಿ ವರ್ಗಾವಣೆ

ಅಂಕೋಲಾದಲ್ಲಿ ಹೆಸ್ಕಾಂ ಕಚೇರಿ ಎದುರು ಹೆಸ್ಕಾಂ ನೌಕರರು ಹಾಗೂ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ವಿದ್ಯುತ್ ವಿತರಣಾ ವ್ಯವಸ್ಥೆಯಲ್ಲಿ ಖಾಸಗಿ ಕಂಪನಿಗಳ ಪ್ರವೇಶದಿಂದ ವಿದ್ಯುತ್ ದರ ಏರಿಕೆ ಸೇರಿದಂತೆ ಹಲವು ಸಮಸ್ಯೆಗಳು ಎದುರಾಗಬಹುದು ಎಂದು ಪ್ರತಿಭಟನಾಕಾರರು ತಿಳಿಸಿದರು. ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ವಿದ್ಯುತ್ ಸೇವೆ ದೊರೆಯಬೇಕು ಎಂದು ಒತ್ತಾಯಿಸಿದರು.

ಸಿದ್ದಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದರು. ಸರ್ಕಾರದ ಇಲಾಖೆಗಳ ಖಾಸಗೀಕರಣದಿಂದ ಸ್ಥಳೀಯ ಉದ್ಯೋಗ ಅವಕಾಶಗಳಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಹೇಳಿದರು. ವಿದ್ಯುತ್ ಕ್ಷೇತ್ರವು ಜನಸಾಮಾನ್ಯರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಅದನ್ನು ಸಂಪೂರ್ಣವಾಗಿ ಸಾರ್ವಜನಿಕ ಹಿತದೃಷ್ಟಿಯಿಂದಲೇ ನಿರ್ವಹಿಸಬೇಕು ಎಂದು ಆಗ್ರಹಿಸಿದರು.

ಮೂರು ತಾಲೂಕುಗಳಲ್ಲೂ ಪ್ರತಿಭಟನಾಕಾರರು ರಾಜ್ಯ ಸರ್ಕಾರವು ಖಾಸಗೀಕರಣದ ಪ್ರಸ್ತಾವವನ್ನು ಮರುಪರಿಶೀಲಿಸಿ, ರೈತರು ಹಾಗೂ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಬಳಿಕ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...