ಉತ್ತರ ಕನ್ನಡ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ; ಆಕ್ಷೇಪಣೆಗೆ ಮಾರ್ಚ್ 6 ಕೊನೆಯ ದಿನ

Date:

ಉತ್ತರ ಕನ್ನಡ ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

- Advertisement -

ಸರ್ಕಾರದ ಮಾರ್ಗಸೂಚಿಯಂತೆ ತಾಲ್ಲೂಕು ಮಟ್ಟದ ಪರಿಶೀಲನಾ ಸಮಿತಿಯು ಅರ್ಜಿಗಳನ್ನು ಪರಿಶೀಲಿಸಿ ಸಿದ್ಧಪಡಿಸಿದ ಅರ್ಹ ಅಭ್ಯರ್ಥಿಗಳ ಪಟ್ಟಿಗೆ, ಫೆಬ್ರವರಿ 25 ರಂದು ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಇದೀಗ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಬಿಡುಗಡೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಆಯ್ಕೆಯಾದವರ ವಿವರ ಇಂತಿದೆ: ಅಂಕೋಲಾದಲ್ಲಿ 2 ಕಾರ್ಯಕರ್ತೆಯರು ಹಾಗೂ 22 ಸಹಾಯಕಿಯರು, ಭಟ್ಕಳದಲ್ಲಿ 1 ಕಾರ್ಯಕರ್ತೆ ಹಾಗೂ 16 ಸಹಾಯಕಿಯರು, ದಾಂಡೇಲಿಯಲ್ಲಿ 9 ಸಹಾಯಕಿಯರು, ಹೊನ್ನಾವರದಲ್ಲಿ 1 ಕಾರ್ಯಕರ್ತೆ ಹಾಗೂ 11 ಸಹಾಯಕಿಯರು, ಕಾರವಾರದಲ್ಲಿ 8 ಸಹಾಯಕಿಯರು ಮತ್ತು ಕುಮಟಾದಲ್ಲಿ 8 ಸಹಾಯಕಿಯರನ್ನು ಆಯ್ಕೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ ? ದಾಂಡೇಲಿಯಲ್ಲಿ ಕರಗುತ್ತಿರುವ ಕಲರವ; ಪ್ರವಾಸಿಗರ ಅಬ್ಬರಕ್ಕೆ ಬೆದರಿದ ʼಹಾರ್ನ್‌ಬಿಲ್‌ʼ ಪಕ್ಷಿ ಪ್ರಭೇದ!

ಮುಂಡಗೋಡಿನಲ್ಲಿ 2 ಕಾರ್ಯಕರ್ತೆಯರು ಹಾಗೂ 12 ಸಹಾಯಕಿಯರು, ಸಿದ್ದಾಪುರದಲ್ಲಿ 2 ಕಾರ್ಯಕರ್ತೆಯರು ಹಾಗೂ 15 ಸಹಾಯಕಿಯರು, ಶಿರಸಿಯಲ್ಲಿ 2 ಕಾರ್ಯಕರ್ತೆಯರು ಹಾಗೂ 34 ಸಹಾಯಕಿಯರು, ಜೋಯಿಡಾದಲ್ಲಿ 5 ಕಾರ್ಯಕರ್ತೆಯರು ಹಾಗೂ 14 ಸಹಾಯಕಿಯರು, ಯಲ್ಲಾಪುರದಲ್ಲಿ 3 ಕಾರ್ಯಕರ್ತೆಯರು ಹಾಗೂ 12 ಸಹಾಯಕಿಯರು ಮತ್ತು ಹಳಿಯಾಳ ತಾಲ್ಲೂಕಿನಲ್ಲಿ 2 ಕಾರ್ಯಕರ್ತೆಯರು ಹಾಗೂ 16 ಸಹಾಯಕಿಯರು ಸೇರಿದಂತೆ ಜಿಲ್ಲಾದ್ಯಂತ ಒಟ್ಟು 20 ಕಾರ್ಯಕರ್ತೆಯರು ಹಾಗೂ 177 ಸಹಾಯಕಿಯರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಂಬಂಧಪಟ್ಟ ಗ್ರಾಮ ಪಂಚಾಯತಿಗಳು ಹಾಗೂ ಅಂಗನವಾಡಿ ಕೇಂದ್ರಗಳ ನಾಮಫಲಕಗಳಲ್ಲಿ ಸಾರ್ವಜನಿಕರ ವೀಕ್ಷಣೆಗಾಗಿ ಪ್ರದರ್ಶಿಸಲಾಗಿದೆ.

ಪ್ರಕಟಿತ ಪಟ್ಟಿಯ ಕುರಿತು ಅಭ್ಯರ್ಥಿಗಳಿಗೆ ಅಥವಾ ಸಾರ್ವಜನಿಕರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸೂಕ್ತ ದಾಖಲೆಗಳೊಂದಿಗೆ ಮಾರ್ಚ್ 6ರ ಒಳಗಾಗಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.

ನಿಗದಿತ ಅವಧಿಯ ನಂತರ ಬರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...