ಉತ್ತರ ಕನ್ನಡ | ಪಿಎಸ್ಐ ಹಗರಣದ ಆರೋಪಿ ಆತ್ಮಹತ್ಯೆ

Date:

  • ಭಟ್‌ ಅವರು ನೆಲೆಮಾವಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿದ್ದರು
  • ʼಭಟ್ ತೀವ್ರ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆʼ

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ 2022ರ ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಜಿ.ಬಿ ಭಟ್ ಆತ್ಮಹತ್ಯೆಗೆ ಬಲಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃಹದೇಹ ಪತ್ತೆಯಾಗಿದೆ.

“ಭಟ್ ತೀವ್ರ ಸಾಲದಲ್ಲಿದ್ದರು. ಹಾಗಾಗಿ ಅನೇಕರು ಅವರ ಮನೆಗೆ ಬಂದು ಸಾಲ ಮರುಪಾವತಿಸುವಂತೆ ಕೇಳಿದ್ದಾರೆ. ಇದರಿಂದ ಮನನೊಂದು ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

“ಭಟ್‌ ಅವರು ನೆಲೆಮಾವಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿದ್ದು, ಪ್ರಭಾವಿ ವ್ಯಕ್ತಿಯಾಗಿದ್ದರು. ಜೊತೆಗೆ, ಅವರಿಗೆ ಪೊಲೀಸ್ ಮತ್ತು ಉನ್ನತ ಅಧಿಕಾರಿಗಳಂತಹ ಸ್ನೇಹಿತರು ಇದ್ದರು” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ಸುದ್ದಿ ಓದಿದ್ದೀರಾ? ಧಾರವಾಡ| ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ: ಕೃಷಿ ತಜ್ಞರು

ಅಧಿಕಾರಿಗಳ ನೇಮಕಾತಿ ಮತ್ತು ವರ್ಗಾವಣೆಯಲ್ಲಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಅದಕ್ಕಾಗಿಯೇ ಒಂದೆರಡು ತಿಂಗಳ ಹಿಂದೆ ಅವರನ್ನು ವಿಚಾರಣೆಗೆ ಕರೆದೊಯ್ಯಲಾಗಿತ್ತು. ಹಿರಿಯ ಕಾಂಗ್ರೆಸ್ ನಾಯಕ ಆರ್.ವಿ ದೇಶಪಾಂಡೆ ಅವರ ಬೆಂಬಲಿಗನಾಗಿದ್ದರು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಯಡಿಯೂರಪ್ಪ ಕಾರಣದಿಂದ ನನ್ನ ಮಗನಿಗೆ ಟಿಕೆಟ್ ತಪ್ಪಿದೆ: ಶಾಸಕ ಚಂದ್ರಪ್ಪ

ರಘು ಚಂದನ್‌ಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ ಶಾಸಕ ಎಂ ಚಂದ್ರಪ್ಪ...

ಧಾರವಾಡ | ‘ದಿಂಗಾಲೇಶ್ವರ ಸ್ವಾಮೀಜಿ ನೀಡಿದ ಹೇಳಿಕೆಗೂ, ಮುರುಘಾಮಠಕ್ಕೂ ಯಾವುದೇ ಸಂಬಂಧವಿಲ್ಲ’

ಮಾರ್ಚ್ 27ರಂದು ಹುಬ್ಬಳ್ಳಿ ಮೂರುಸಾವಿರ ಮಠದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

ಬೆಂಗಳೂರು | ಐಟಿ, ಬಿಟಿ ಕಂಪನಿಗಳಿಗೆ ಸಮರ್ಪಕ ನೀರು ಪೂರೈಕೆಗೆ ಬದ್ಧ: ಜಲಮಂಡಳಿ ಅಧ್ಯಕ್ಷ

“ಬೆಂಗಳೂರಿನ ಇತರೆ ಪ್ರದೇಶಗಳಂತೆಯೇ, ನಗರದ ಹೊರವಲಯದಲ್ಲಿರುವ ಐಟಿ-ಬಿಟಿ ಕಂಪನಿಗಳಿಗೂ ನೀರಿನ ಕೊರತೆಯಾಗದಂತೆ...