ಉತ್ತರ ಕನ್ನಡ | ಪಿಯು ಪರೀಕ್ಷೆ: ರಾಜ್ಯಕ್ಕೆ 5ನೇ ರ್‍ಯಾಂಕ್; ಜಿಲ್ಲೆಗೆ ಕೀರ್ತಿ ತಂದ ಚಿನ್ಮಯಿ ಶೆಟ್ಟಿ ಮತ್ತು ಚೈತನ್ಯ ಹೆಗಡೆ

Date:

ನಿನ್ನೆ ಪ್ರಕಟವಾದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

- Advertisement -

ವಾಣಿಜ್ಯ ವಿಭಾಗದಲ್ಲಿ ಹೊನ್ನಾವರದ ಚಿನ್ಮಯಿ ಶೆಟ್ಟಿ ಹಾಗೂ ವಿಜ್ಞಾನ ವಿಭಾಗದಲ್ಲಿ ಶಿರಸಿಯ ಚೈತನ್ಯ ಹೆಗಡೆ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದು ಗಮನ ಸೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಹೊನ್ನಾವರದ ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿ ಚಿನ್ಮಯಿ ಮಂಜುನಾಥ ಶೆಟ್ಟಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 596 ಅಂಕಗಳನ್ನು (99.33%) ಪಡೆಯುವ ಮೂಲಕ ರಾಜ್ಯಕ್ಕೆ 5ನೇ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನವೇ ಈ ಅಭೂತಪೂರ್ವ ಯಶಸ್ಸಿಗೆ ಕಾರಣ ಎಂದು ಚಿನ್ಮಯಿ ಸಂತಸ ಹಂಚಿಕೊಂಡಿದ್ದಾರೆ.

ಶಿರಸಿಯ ಎಂ.ಇ.ಎಸ್. ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚೈತನ್ಯ ಜಿ. ಹೆಗಡೆ 600 ಅಂಕಗಳಿಗೆ 595 ಅಂಕಗಳನ್ನು (99.17%) ಪಡೆಯುವ ಮೂಲಕ ರಾಜ್ಯಕ್ಕೆ 5ನೇ ರ್‍ಯಾಂಕ್ ಹಾಗೂ ಜಿಲ್ಲೆಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಅಮೋಘ ಸಾಧನೆಯ ಮೂಲಕ ಚೈತನ್ಯ ಅವರು ಕಾಲೇಜು ಹಾಗೂ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಕುಮಟಾ ಮತ್ತು ಶಿರಸಿ ತಾಲ್ಲೂಕುಗಳಿಗೆ ಅಗ್ರಸ್ಥಾನ

ಈ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಗೆ ಅವರ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ಮತ್ತು ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...