ಉತ್ತರ ಕನ್ನಡ | ಆರ್‌ಸಿಬಿ ಪಾಲಾದ ಗೋಕರ್ಣದ ಕುವರಿ: ಪ್ರತ್ಯೂಷಾ ಕುಮಾರ್ ಡಬ್ಲ್ಯೂಪಿಎಲ್‌ಗೆ ಆಯ್ಕೆ

Date:

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಪುಣ್ಯಕ್ಷೇತ್ರ ಗೋಕರ್ಣದ ಪ್ರತಿಭೆಯೊಂದು ಮಹಿಳಾ ಕ್ರಿಕೆಟ್ ಲೋಕದ ದೊಡ್ಡ ವೇದಿಕೆಯಾದ ಮಹಿಳಾ ಪ್ರೀಮಿಯರ್ ಲೀಗ್ (WPL) ಪ್ರವೇಶಿಸುವ ಮೂಲಕ ನಾಡಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

- Advertisement -

2026ರ ಆವೃತ್ತಿಯ ಡಬ್ಲ್ಯೂಪಿಎಲ್ ಟೂರ್ನಿಗಾಗಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಗೋಕರ್ಣ ಮೂಲದ ಪ್ರತಿಭಾವಂತ ಕ್ರಿಕೆಟರ್ ಪ್ರತ್ಯೂಷಾ ಕುಮಾರ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಮೂಲತಃ ಗೋಕರ್ಣದ ರಥಬೀದಿಯ ಜಂಭೆ ಮನೆತನಕ್ಕೆ ಸೇರಿದ ಪ್ರತ್ಯೂಷಾ ಅವರ ಈ ಸಾಧನೆಯು ಜಿಲ್ಲೆಯಾದ್ಯಂತ ಸಂಭ್ರಮಕ್ಕೆ ಕಾರಣವಾಗಿದೆ. ಪ್ರಸ್ತುತವಾಗಿ ಬೆಂಗಳೂರಿನಲ್ಲಿ ನೆಲೆಸಿರುವ 26 ವರ್ಷದ ಪ್ರತ್ಯೂಷಾ ಕುಮಾರ್, ತಮ್ಮ 14ನೇ ವಯಸ್ಸಿನಲ್ಲೇ ಕ್ರಿಕೆಟ್ ಬದುಕನ್ನು ಆರಂಭಿಸಿದವರು.

1000451599

ಕಠಿಣ ಪರಿಶ್ರಮ ಮತ್ತು ಆಟದ ಮೇಲಿನ ಅತೀವ ಆಸಕ್ತಿಯಿಂದಾಗಿ ಹಂತ ಹಂತವಾಗಿ ಬೆಳೆದ ಇವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುವ ಮೂಲಕ ದೇಶೀಯ ಕ್ರಿಕೆಟ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಮೈದಾನದಲ್ಲಿ ಚುರುಕಾದ ವಿಕೆಟ್ ಕೀಪಿಂಗ್ ಕೌಶಲ್ಯದ ಜೊತೆಗೆ ಸ್ಫೋಟಕ ಬ್ಯಾಟಿಂಗ್ ನಡೆಸುವ ಸಾಮರ್ಥ್ಯ ಹೊಂದಿರುವ ಇವರು ಆಕ್ರಮಣಕಾರಿ ಬಲಗೈ ಬ್ಯಾಟರ್ ಆಗಿ ಗುರುತಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ತಹಶೀಲ್ದಾರ್‌ಗಳ ಹೆಗಲಿಗೆ ಉಪವಿಭಾಗಗಳ ಹೊಣೆ; ಖಾಯಂ ಅಧಿಕಾರಿಗಳ ಕೊರತೆಯಿಂದ ಅಭಿವೃದ್ಧಿಗೆ ಅಡ್ಡಿ

ಇನ್ನು ಹರಾಜಿನ ಪ್ರಕ್ರಿಯೆಯಲ್ಲಿ ಪ್ರತ್ಯೂಷಾ ಅವರ ಪ್ರತಿಭೆಯನ್ನು ಗುರುತಿಸಿದ ಆರ್‌ಸಿಬಿ ಫ್ರಾಂಚೈಸಿಯು ಹತ್ತು ಲಕ್ಷ ರೂಪಾಯಿಗಳ ಮೊತ್ತ ನೀಡಿ ಒಪ್ಪಂದ ಮಾಡಿಕೊಂಡಿದೆ. ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಇನ್ನೂ ಪದಾರ್ಪಣೆ ಮಾಡದ ‘ಅನ್‌ಕ್ಯಾಪ್ಡ್’ ಆಟಗಾರ್ತಿಯಾಗಿದ್ದರೂ, ದೇಶೀಯ ಪಂದ್ಯಗಳಲ್ಲಿ ಅವರ ಸ್ಥಿರ ಪ್ರದರ್ಶನ ಮತ್ತು ಅನುಭವವನ್ನು ಗಮನಿಸಿ ಬೆಂಗಳೂರು ತಂಡ ಈ ಅವಕಾಶ ನೀಡಿದೆ.

ತವರಿನ ತಂಡಕ್ಕೇ ನಮ್ಮೂರಿನ ಹುಡುಗಿ ಆಯ್ಕೆಯಾಗಿರುವುದು ಸ್ಥಳೀಯರಿಗೆ ಹೆಮ್ಮೆಯ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಅವರು ರಾಷ್ಟ್ರೀಯ ತಂಡದಲ್ಲೂ ಮಿಂಚಲಿ ಎಂದು ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳು ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...