ಉತ್ತರ ಕನ್ನಡ | ಗೃಹರಕ್ಷಕದಳದಲ್ಲಿ 89 ಸ್ವಯಂಸೇವಕರ ನೇಮಕಾತಿ: ಅರ್ಜಿ ಸಲ್ಲಿಸಲು ಮಾರ್ಚ್ 10 ಕೊನೆಯ ದಿನ

Date:

ಉತ್ತರ ಕನ್ನಡ: ಜಿಲ್ಲಾ ಗೃಹರಕ್ಷಕದಳದಲ್ಲಿ ಖಾಲಿ ಇರುವ ಒಟ್ಟು 89 ಸ್ವಯಂಸೇವಕ ಗೃಹರಕ್ಷಕ ಮತ್ತು ಗೃಹರಕ್ಷಕಿಯರ ಸ್ಥಾನಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ಆಸಕ್ತರು ಕಾರವಾರದ ಸರ್ವೋದಯ ನಗರದ ಕೋಡಿಬಾಗ್‌ನಲ್ಲಿರುವ ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 10 ಕೊನೆಯ ದಿನಾಂಕವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

ಅಭ್ಯರ್ಥಿಗಳು ತಮ್ಮ 10ನೇ ತರಗತಿಯ ದೃಢೀಕೃತ ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಚೇರಿಯಲ್ಲಿ ತೋರಿಸಿ ಅರ್ಜಿಗಳನ್ನು ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಅವುಗಳಿಗೆ ಪತ್ರಾಂಕಿತ ಅಧಿಕಾರಿಯಿಂದ (Gazetted Officer) ದೃಢೀಕೃತ ಸಹಿ ಮಾಡಿಸಿ ಮಾರ್ಚ್ 10ರ ಒಳಗಾಗಿ ಕಚೇರಿಗೆ ಸಲ್ಲಿಸಬೇಕು.

ಅರ್ಹತಾ ಮಾನದಂಡಗಳು: ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು, 19 ರಿಂದ 50 ವರ್ಷದೊಳಗಿನವರಾಗಿರಬೇಕು,‌ ಪುರುಷರಿಗೆ ಕನಿಷ್ಠ 168 ಸೆಂ.ಮೀ ಮತ್ತು ಮಹಿಳೆಯರಿಗೆ 157 ಸೆಂ.ಮೀ ಎತ್ತರ ಇರಬೇಕು, ಎದೆಯ ಸುತ್ತಳತೆ (ಪುರುಷರಿಗೆ): ಕನಿಷ್ಠ 81 ಸೆಂ.ಮೀ ಇರಬೇಕು (ವಿಸ್ತರಿಸಿದಾಗ 86 ಸೆಂ.ಮೀ)

Advertisements

ತಾಲೂಕು ವೈದ್ಯಾಧಿಕಾರಿಗಳಿಂದ ಪಡೆದ ವೈದ್ಯಕೀಯ ಪ್ರಮಾಣ ಪತ್ರ ಹಾಗೂ ಯಾವುದೇ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿಲ್ಲದ ಬಗ್ಗೆ ಪೊಲೀಸ್ ವೆರಿಫಿಕೇಶನ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸುವುದು ಕಡ್ಡಾಯ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಹಸಿರು ಜಿಲ್ಲೆಯಲ್ಲಿ ಅನ್ನದಾತನ ಅಳಲು; ರೈತರ ಸರಣಿ ಆತ್ಮಹತ್ಯೆ ಕೇಳುವುದೇನು?

ಕಂಪ್ಯೂಟರ್ ಜ್ಞಾನ ಹೊಂದಿರುವವರು, ಹೆವಿ ಡ್ರೈವಿಂಗ್ ಲೈಸೆನ್ಸ್ ಉಳ್ಳವರು, ಮೆಕಾನಿಕ್‌ಗಳು, ಎನ್.ಸಿ.ಸಿ (NCC), ಎನ್.ಎಸ್.ಎಸ್ (NSS) ಹಾಗೂ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಮೊದಲ ಆದ್ಯತೆ ನೀಡಲಾಗುವುದು.

ಗೃಹರಕ್ಷಕದಳದ ಈ ಸ್ಥಾನಗಳು ಖಾಯಂ ಹುದ್ದೆಗಳಾಗಿರುವುದಿಲ್ಲ. ಇದು ಸ್ವಯಂಸೇವಾ ವೃತ್ತಿಯಾಗಿದ್ದು, ರಾಜ್ಯ ಸರ್ಕಾರವು ಕಾಲಕಾಲಕ್ಕೆ ನಿಗದಿಪಡಿಸುವ ಗೌರವಧನವನ್ನು ಕರ್ತವ್ಯ ನಿರ್ವಹಿಸಿದ ಅವಧಿಗೆ ಮಾತ್ರ ಪಾವತಿಸಲಾಗುತ್ತದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಗೃಹರಕ್ಷಕದಳದ ಕಚೇರಿ ದೂರವಾಣಿ ಸಂಖ್ಯೆ: 08382-200137 ಅಥವಾ ಜಿಲ್ಲಾ ಬೋಧಕರಾದ ರಘು ಬಿ.ಸಿ (ಮೊಬೈಲ್: 9880573509) ಅವರನ್ನು ಸಂಪರ್ಕಿಸಬಹುದೆಂದು ಗೃಹರಕ್ಷಕ ದಳದ ಸಮಾದೇಷ್ಟರು ತಿಳಿಸಿದ್ದಾರೆ. ಹಾಗೂ ನಿಗದಿಪಡಿಸಿದ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...