ಉತ್ತರ ಕನ್ನಡ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಸಂಭವನೀಯ ಅನಾಹುತಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಜುಲೈ 7 (ಮಂಗಳವಾರ) ರಂದು ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದಂತೆ, ನಿರಂತರ ಮಳೆಯಿಂದ ರಸ್ತೆಗಳಲ್ಲಿ ನೀರು ನಿಲ್ಲುವುದು, ಭೂಕುಸಿತ, ಮರಗಳು ಉರುಳುವುದು ಸೇರಿದಂತೆ ವಿವಿಧ ರೀತಿಯ ಪ್ರಕೃತಿ ವಿಕೋಪಗಳ ಸಾಧ್ಯತೆಯನ್ನು ಮನಗಂಡು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಅಂಕೋಲಾ | ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ; ಯುವಕನಿಗೆ ಗಂಭೀರ ಗಾಯ
ವಿದ್ಯಾರ್ಥಿಗಳ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಹಾಗೂ ಅನಾನುಕೂಲ ಉಂಟಾಗದಂತೆ ಈ ಕ್ರಮ ಜರುಗಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರು ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.
This video cannot be played in your browser. Open the video directly
ಈ ರಜೆ ಜುಲೈ 7 (ಮಂಗಳವಾರ)ರಂದು ಮಾತ್ರ ಅನ್ವಯವಾಗಲಿದ್ದು, ಮುಂದಿನ ದಿನಗಳ ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯವಿದ್ದಲ್ಲಿ ಜಿಲ್ಲಾಡಳಿತ ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.





