ಉತ್ತರ ಕನ್ನಡ | ಕೇರಳ ಮೂಲದ ಅನಾಥ ವ್ಯಕ್ತಿಯ ರಕ್ಷಣೆ: ಪುನಿತ್ ರಾಜಕುಮಾರ ಆಶ್ರಮಕ್ಕೆ ಸೇರ್ಪಡೆ

Date:

ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹೂಕಾರ ಗ್ರಾಮದಲ್ಲಿ ಹಲವು ವರ್ಷಗಳಿಂದ ಅನಾಥ ಸ್ಥಿತಿಯಲ್ಲಿ ಅಲೆಯುತ್ತಿದ್ದ ಕೇರಳ ಮೂಲದ ನಟರಾಜ ಮಲಬಾರಿ ಎನ್ನುವ ವೃದ್ಧ ವ್ಯಕ್ತಿಯನ್ನು ರಕ್ಷಿಸಿ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ ಆಶ್ರಯಧಾಮ ಅನಾಥಾಶ್ರಮಕ್ಕೆ ಸೇರಿಸಿಕೊಂಡಿದ್ದಾರೆ.

- Advertisement -

ಈ ಕುರಿತು ಅನಾಥಾಶ್ರಮದ ಮುಖ್ಯಸ್ಥ ನಾಗರಾಜ‌ ನಾಯ್ಕ ಮಾತನಾಡಿ, ಹಲವು ವರ್ಷಗಳಿಂದ ಹೂಕಾರ ಗ್ರಾಮದಲ್ಲಿ ಅನಾಥ ಸ್ಥಿತಿಯಲ್ಲಿ ಇದ್ದ ವೃದ್ಧ ವ್ಯಕ್ತಿಗೆ ಗ್ರಾಮದ ನಾಗರೀಕರು ಊಟ ನೀಡಿ ಆಶ್ರಯ ನೀಡಿದ್ದಾರೆ. ಈಗ ಈ ವೃದ್ಧನು ಹಲವು ಕಾಯಿಲೆಗಳಿಂದ ಬಳಲುತ್ತಿರುವುದರಿಂದ ಆತನ ಮುಂದಿನ ಜೀವನಾಧಾರಕ್ಕೆ ನಮ್ಮ ಅನಾಥಾಶ್ರಮಕ್ಕೆ ಸೇರಿಸುವಂತೆ ಹೂಕಾರಿನ ದಯಾನಂದ ಗೊವಿಂದ ನಾಯ್ಕ ಮತ್ತು ಲಕ್ಷ್ಮಣ ಗೋವಿಂದ ನಾಯ್ಕ ಎನ್ನುವವರು ಸಿದ್ದಾಪುರ ಪೋಲೀಸ್ ಠಾಣೆಗೆ ಮನವಿ ಮಾಡಿಕೊಂಡಿದ್ದರು. ಸಿದ್ದಾಪುರ ಪೋಲೀಸರು‌ಆ ವೃದ್ಧನನ್ನು ಆಶ್ರಮಕ್ಕೆ ಸೇರಿಸಿಕೊಳ್ಳುವಂತೆ ಕೇಳಿದರು. ನಾನು ಹೋಗಿ ಆಶ್ರಮಕ್ಕೆ ಕರೆದುಕೊಂಡು ಬಂದು ಆಶ್ರಯ ನೀಡಿದ್ದೆನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ವ್ಯಕ್ತಿಯು ತನ್ನ ಹೆಸರನ್ನು ನಟರಾಜ ಮಲಬಾರಿ ಎಂದು ಹೇಳುತ್ತಿದ್ದು, ತಾನು ಕಳೆದ 50 ವರ್ಷಗಳ ಹಿಂದೆ ಗಾರೆ ಕೆಲಸಕ್ಕಾಗಿ ಕೇರಳದಿಂದ ಸಿದ್ದಾಪುರಕ್ಕೆ ಬಂದಿದ್ದಾಗಿ ತಿಳಿದು ಬಂದಿದೆ. ತಾಲೂಕು ಸರಕಾರಿ ಆಸ್ಪತ್ರೆಯ ಕಟ್ಟಡ ನಿರ್ಮಾಣದಲ್ಲಿ, ಎಂ ಜಿ ಸಿ ಕಾಲೇಜಿನ ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳುತ್ತಿದ್ದಾರೆ. ಈಗ ಈ ವೃದ್ಧ ವ್ಯಕ್ತಿ ವಯಸ್ಸಾದ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದು ಕೆಲಸ ಮಾಡಲಾಗದ ಸ್ಥಿತಿಯಲ್ಲಿದ್ದಾರೆ.

ಈ ವರದಿ ಓದಿದ್ದೀರಾ? ಧಾರವಾಡ | ಗ್ರಾಮ ಪಂಚಾಯತ ಗ್ರಂಥಾಲಯ ಮೇಲ್ವಿಚಾರಕರ ಹುದ್ದಗಳಿಗೆ ಅರ್ಜಿ ಆಹ್ವಾನ

ಈ ವೃದ್ಧ ವ್ಯಕ್ತಿಯ ಬಂಧುಗಳು ಅಥವಾ ಪರಿಚಯದವರು ಇದ್ದರೆ 8073197439, 9481389187 ಈ ನಂಬರ್ ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...