ಉತ್ತರ ಕನ್ನಡ | ಅತಿವೃಷ್ಟಿ–ಬರ ಪರಿಸ್ಥಿತಿ ಪರಿಶೀಲನೆ: ತುರ್ತು ಪರಿಹಾರಕ್ಕೆ ಸಚಿವ ಲಕ್ಷ್ಮಣ ಸವದಿ ಸೂಚನೆ

Date:

ಉತ್ತರ ಕನ್ನಡ ಜಿಲ್ಲೆಯ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ, ರಸ್ತೆ ಹಾನಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಹೆಸ್ಕಾಂಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಎರಡು ದಿನಗಳ ಕಾಲ ಜಿಲ್ಲೆಯಾದ್ಯಂತ ಪರಿಶೀಲನೆ ನಡೆಸಿ, ತಕ್ಷಣ ಕೈಗೊಳ್ಳಬೇಕಾದ ತುರ್ತು ಪರಿಹಾರ ಕಾರ್ಯಗಳಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಂಪುಟ ದರ್ಜೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

- Advertisement -

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳಿಂದ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಿರುವ ಬೆಳೆ ಹಾನಿ ಹಾಗೂ ಇತರ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಅಗತ್ಯ ಪರಿಹಾರ ಒದಗಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಶಿರಸಿಯ ಮಾಜಿ ಉಪವಿಭಾಗಾಧಿಕಾರಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ

ಅಡಿಕೆ ಬೆಳೆಗಳಿಗೆ ಬಾಧಿಸುತ್ತಿರುವ ಎಲೆಚುಕ್ಕಿ ರೋಗ ಹಾಗೂ ಕೊಳೆರೋಗ ನಿಯಂತ್ರಣಕ್ಕೆ ತಜ್ಞರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ತುರ್ತಾಗಿ ಪರಿಹಾರ ಒದಗಿಸುವ ಜೊತೆಗೆ ಅಲ್ಪಾವಧಿ, ಮಧ್ಯಂತರ ಹಾಗೂ ದೀರ್ಘಾವಧಿ ಎಂಬ ಮೂರು ಹಂತಗಳಲ್ಲಿ ಶಾಶ್ವತ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ಶಾಸಕರನ್ನು ಒಳಗೊಂಡು ಪಕ್ಷಾತೀತವಾಗಿ ಪ್ರತಿಯೊಂದು ಕ್ಷೇತ್ರದ ಸಮಸ್ಯೆಗಳ ಕುರಿತು ಮಾಹಿತಿ ಪಡೆದು, ವಿವಿಧ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗುವುದು ಎಂದು ಸಚಿವರು ಹೇಳಿದರು. ಸಭೆಯಲ್ಲಿ ಕಾರವಾರ ಶಾಸಕ ಸತೀಶ ಕೆ. ಸೈಲ್ ಮಾತನಾಡಿ, ಗ್ರಾಮೀಣ ಭಾಗದ ರಸ್ತೆಗಳು ಮಳೆಯಿಂದ ತೀವ್ರ ಹಾನಿಗೊಳಗಾಗಿದ್ದು, ಅವುಗಳನ್ನು ತುರ್ತಾಗಿ ದುರಸ್ತಿಗೊಳಿಸಬೇಕು ಎಂದು ಒತ್ತಾಯಿಸಿದರು. ಕೈಗಾ ರಸ್ತೆಯೂ ಹೆಚ್ಚಿನ ಪ್ರಮಾಣದಲ್ಲಿ ಹಾಳಾಗಿದ್ದು, ಅದನ್ನು ಕೂಡಲೇ ದುರಸ್ತಿಗೊಳಿಸುವಂತೆ ಮನವಿ ಮಾಡಿದರು.

ಶಿರಸಿ–ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ ಮಾತನಾಡಿ, ಶಿರಸಿ ಭಾಗದ ಗ್ರಾಮೀಣ ರಸ್ತೆಗಳು ಹಾಳಾಗಿದ್ದು, ಅವೈಜ್ಞಾನಿಕ ಕಾಮಗಾರಿಗಳಿಂದ ಸಂಚಾರಕ್ಕೆ ತೊಂದರೆಯಾಗಿದೆ ಎಂದರು. ಅಡಿಕೆ ಕೊಳೆರೋಗ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಸೂಕ್ತ ಔಷಧಿ ಕಂಡುಹಿಡಿದು ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಮನೆ ಹಾನಿಗೊಳಗಾದ ಸಂತ್ರಸ್ತರಿಗೆ ಗರಿಷ್ಠ ಪ್ರಮಾಣದ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಅಂಕೋಲಾ ತಾಲೂಕಿನ ಹಾರವಾಡದಲ್ಲಿ ಉಂಟಾಗಿರುವ ಕಡಲಕೊರೆತಕ್ಕೆ ಶಾಶ್ವತ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು. ಸಭೆಯ ಬಳಿಕ ಸಚಿವ ಲಕ್ಷ್ಮಣ ಸವದಿ ಅಂಕೋಲಾ ತಾಲೂಕಿನ ಹಾರವಾಡ ಗ್ರಾಮದಲ್ಲಿ ಕಡಲಕೊರೆತ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ಯಲ್ಲಾಪುರ ಶಾಸಕ ಅರಬೈಲ್ ಶಿವರಾಮ ಹೆಬ್ಬಾರ್, ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಶ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲೆಯ ಎಲ್ಲಾ ಉಪ ವಿಭಾಗಾಧಿಕಾರಿಗಳು, ತಹಸೀಲ್ದಾರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...