ಉತ್ತರ ಕನ್ನಡ | ಕಾಳ ಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ: ಜಿಲ್ಲಾಧಿಕಾರಿಯಿಂದ ಟಾಸ್ಕ್ ಪೋರ್ಸ್ ರಚನೆ

Date:

Advertisements

ಗ್ಯಾರೆಂಟಿ ಯೋಜನೆಯಡಿಯಲ್ಲಿ ನೀಡುತ್ತಿರುವ ಪಡಿತರ ಅಕ್ಕಿಯನ್ನು ಕಾಳಸಂತೆಕೋರರು ಪಡಿತರ ಚೀಟಿದಾರರಿಂದ ಕಡಿಮೆ ದರದಲ್ಲಿ ಖರೀದಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಉದ್ದೇಶದಿಂದ, ಪಡಿತರ ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡುವ ಸಂಭವವಿದೆ. ಹಾಗಾಗಿ ಇದನ್ನು ತಡೆಯಲು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯ ಅವರು ತಾಲೂಕು ಮಟ್ಟದಲ್ಲಿ ಟಾಸ್ಕ್ ಪೋರ್ಸ್(ಕಾರ್ಯಪಡೆ) ರಚಿಸಿಲು ಆದೇಶಿಸಿದ್ದಾರೆ.

ತಾಲೂಕು ಮಟ್ಟದಲ್ಲಿ ಆರಕ್ಷಕ ಇಲಾಖೆ ಒಳಗೊಂಡಂತೆ ತಪಾಸಣೆ ತಂಡವನ್ನು ರಚನೆ ಮಾಡಿದ್ದು, ಈ ತಂಡದಲ್ಲಿ ತಾಲೂಕು ತಹಶೀಲ್ದಾರರು ಅಧ್ಯಕ್ಷರಾಗಿದ್ದು, ಆಹಾರ ಶಿರಸ್ತೇದಾರರು, ಪೊಲೀಸ್ ಉಪನಿರೀಕ್ಷಕರು, ಕಂದಾಯ ನಿರೀಕ್ಷಕರು, ವಾಣಿಜ್ಯ ತೆರಿಗೆ ಇಲಾಖೆ ಪರಿವೀಕ್ಷಕರು ಮತ್ತು ಮೋಟಾರ್ ವಾಹನ ನಿರೀಕ್ಷಕರು ಸದಸ್ಯರಾಗಿದ್ದಾರೆ. ಆಹಾರ ನಿರೀಕ್ಷಕರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | 90 ದಿನಗಳ ಮಧ್ಯಸ್ಥಿಕೆಯ ವಿಶೇಷ ಆಂದೋಲನ: ಸದುಪಯೋಗ ಪಡೆದುಕೊಳ್ಳುವಂತೆ ನ್ಯಾ. ಎಂ ಎಸ್‌ ದರಗದ ಕರೆ

Advertisements

ಈ ತಂಡದವರು ಪಡಿತರ ಅಕ್ಕಿ ಕಾಳಸಂತೆಯಲ್ಲಿ ಸಂಗ್ರಹಣೆ ಮತ್ತು ಮಾರಾಟವಾಗುವ ಮಾರ್ಗಗಳಾದ ಅಕ್ಕಿ ಮಿಲ್. ಹೊಟೇಲ್, ಕಿರಾಣಿ ಅಂಗಡಿಗಳು, ಗೋದಾಮು ಹಾಗೂ ಸಾರಿಗೆ ಮೂಲಕ ಸಾಗಾಟವಾಗುವುದನ್ನು ತಪಾಸಣೆ ಮಾಡಬೇಕು. ತಪಾಸಣೆ ಸಂದರ್ಭದಲ್ಲಿ ಪಡಿತರ ಸಂಗ್ರಹಣೆ ಮತ್ತು ಮಾರ್ಗಾಂತರ ಮಾಡುವುದು ಕಂಡುಬಂದರೆ ಆವಶ್ಯಕ ವಸ್ತುಗಳ ಕಾಯ್ದೆ 1955ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ, ಉಪನಿರ್ದೇಶಕರು ಆಹಾರ ನಾಗರಿಕ ಸರಬರಾಜು ಇಲಾಖೆ ಉತ್ತರ ಕನ್ನಡ ಕಾರವಾರ ಅವರಿಗೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X