ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆಯ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲ 229 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜುಲೈ 1 ರಿಂದ ಸೆಪ್ಟೆಂಬರ್ 30ರವರೆಗೆ ಆರ್ಥಿಕ ಸೇರ್ಪಡೆ ಯೋಜನೆಗಳ ಸ್ಯಾಚುರೇಶನ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದಲ್ಲಿ ಎಲ್ಲ ನಿಷ್ಕ್ರಿಯ ಬ್ಯಾಂಕ್ ಖಾತೆಗಳ ಮರು ಕೆವೈಸಿ ಮಾಡಿಸುವುದು, ಬ್ಯಾಂಕ್‌ನಲ್ಲಿ ಖಾತೆಯನ್ನು ಹೊಂದಿಲ್ಲದವರಿಗೆ ಹೊಸ ಖಾತೆಯನ್ನು ತೆರೆಯುವುದು, ಪ್ರಧಾನಮಂತ್ರಿ ಜೀವನಜ್ಯೋತಿ ವಿಮೆ ಮತ್ತು ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಗಳನ್ನು ಮಾಡಿಸುವುದು, ಅಟಲ್ ಪಿಂಚಣಿ ಯೋಜನೆಯನ್ನು ಮಾಡಿಸುವುದು, ಡಿಜಿಟಲ್ ಸೈಬರ್ ವಂಚನೆಗಳ ಬಗ್ಗೆ ಜಾಗ್ರತಿ ಮೂಡಿಸಲಾಗುವುದು ಅಭಿಯಾನದ ಗುರಿಯಾಗಿದೆ.
ಇದನ್ನೂ ಓದಿದ್ದೀರಾ? ಶಿವಮೊಗ್ಗ | ಕಾನೂನು ಸಮರದಲ್ಲಿ ಶೀಘ್ರ ನ್ಯಾಯ ಸಿಗಲಿ, RMM ಅಭಿಮಾನಿಯಿಂದ ದೇವರ ಮೊರೆ
ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನ ನಡೆಯುವ ದಿನಾಂಕಗಳನ್ನು ಗ್ರಾಮ ಪಂಚಾಯಿತಿಯಿಂದ ಮತ್ತು ಬ್ಯಾಂಕ್‌ನಿಂದ ಮುಂಚಿತವಾಗಿ ತಿಳಿಸಲಾಗುವುದು. ಎಲ್ಲ ನಾಗರಿಕರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಭಿಯಾನ ನಡೆಯುವ ದಿನಾಂಕಗಳನ್ನು ತಿಳಿದುಕೊಂಡು ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಈ ಎಲ್ಲ ಸೌಲಭ್ಯಗಳ ಪ್ರಯೋಜನವನ್ನು ಪಡೆದುಕೊಳುವಂತೆ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.