ಉತ್ತರ ಕನ್ನಡ | ಶರಾವತಿ ನದಿ ಉಳಿಸಿ ಆಂದೋಲನ: ಬೆಂಗಳೂರಿನಲ್ಲಿ ‘ಗ್ರೀನ್ ಫ್ರೀಡಂ’ ಬೈಕ್ ಜಾಥಾ

Date:

Advertisements

ಶರಾವತಿ ನದಿಯನ್ನು ರಕ್ಷಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ʼಶರಾವತಿ ನದಿ ಉಳಿಸಿʼ(Save Sharavathi) ಆಂದೋಲನಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು. ನಗರದ ವಿವಿಧ ಭಾಗಗಳಿಂದ ಸುಮಾರು 200ಕ್ಕೂ ಹೆಚ್ಚು ಬೈಕರ್ಸ್ ಸೇರಿ, ಪರಿಸರ ಉಳಿಸುವ ಮತ್ತು ಶರಾವತಿ ನದಿಗೆ ಯಾವುದೇ ಹೊಸ ಯೋಜನೆಗಳ ಪ್ರಸ್ತಾಪ ಬೇಡ ಎಂದು ಒತ್ತಾಯಿಸಿದರು.

‘Green Freedom’ ಎಂಬ ಹೆಸರಿನಡಿ ಈ ಜಾಥಾವನ್ನು ಆಯೋಜಿಸಲಾಗಿತ್ತು. ಬೈಕರ್ಸ್ ‘Save_Sharavathi ‘ ಎಂಬ ಹ್ಯಾಶ್‌ಟ್ಯಾಗ್ ಹಾಗೂ ‘SaynotoSharavathipsp’ ಎಂಬ ಭಿತ್ತಿಪತ್ರಗಳನ್ನು ಹಿಡಿದು, ನದಿಯ ಮೇಲೆ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ವಿರೋಧಿಸಿ ಜಾಗೃತಿ ಮೂಡಿಸಿದರು. ಈ ಯೋಜನೆಯಿಂದ ಪಶ್ಚಿಮ ಘಟ್ಟಗಳಲ್ಲಿನ ಅಮೂಲ್ಯ ಪರಿಸರ ವ್ಯವಸ್ಥೆ ಮತ್ತು ಅರಣ್ಯ ನಾಶವಾಗುತ್ತದೆ ಎಂಬುದು ಪರಿಸರ ಪ್ರೇಮಿಗಳ ಪ್ರಮುಖ ಆತಂಕವಾಗಿದೆ.

ಜಾಥಾದಲ್ಲಿ ಭಾಗವಹಿಸಿದ ಬೈಕರ್ಸ್, ಶರಾವತಿ ಕಣಿವೆಯ ಜೀವವೈವಿದ್ಯ ಮಹತ್ವವನ್ನು ಒತ್ತಿ ಹೇಳಿದರು. ಶರಾವತಿ ನದಿ ಕೇವಲ ಉತ್ತರಕನ್ನಡ ಜಿಲ್ಲೆಗೆ ಸೀಮಿತವಲ್ಲ, ಇದು ಕರ್ನಾಟಕದ ಜೀವನಾಡಿ. ಅದರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಘೋಷಿಸಿದರು. ಪರಿಸರ ಸಂರಕ್ಷಣೆ ಕುರಿತ ತಮ್ಮ ಕಾಳಜಿಯನ್ನು ಈ ಬೈಕ್ ಜಾಥಾದ ಮೂಲಕ ಅವರು ಸಾರ್ವಜನಿಕರಿಗೆ ತಲುಪಿಸಿದರು.

ಈ ಸುದ್ದಿ ಓದಿದ್ದೀರಾ? ಇಂಡಿ | ನೌಕರರು ಜನರ ವಿಶ್ವಾಸ ಗಳಿಸಿ ಕರ್ತವ್ಯ ನಿರ್ವಹಿಸಬೇಕು: ಶಾಸಕ ಯಶವಂತರಾಯಗೌಡ ಪಾಟೀಲ

ಈ ಜಾಥಾ ಬೆಂಗಳೂರಿನಾದ್ಯಂತ ಸಂಚರಿಸಿ ಜನರಲ್ಲಿ ಪರಿಸರ ಪ್ರಜ್ಞೆ ಹೆಚ್ಚಿಸುವಲ್ಲಿ ಯಶಸ್ವಿಯಾಯಿತು. ಶರಾವತಿ ಉಳಿಸಿ ಆಂದೋಲನಕ್ಕೆ ಬೆಂಗಳೂರಿನಿಂದಲೂ ಬೆಂಬಲ ವ್ಯಕ್ತವಾದದ್ದು ಮಹತ್ವಪೂರ್ಣ ಬೆಳವಣಿಗೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X