ಉತ್ತರ ಕನ್ನಡ | ಪಹಲ್ಗಾಮ್​​ ಭಯೋತ್ಪಾದಕರ ದಾಳಿ ಬಳಿಕ ರಕ್ಷಣಾ ಪಡೆಗಳ ಕಟ್ಟೆಚ್ಚರ

Date:

ಜಮ್ಮು ಕಾಶ್ಮೀರದ ಪಹಲ್ಗಾಮ್​​ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ದೇಶಾದ್ಯಂತ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೂ ರಕ್ಷಣಾ ಪಡೆಗಳು ಕಟ್ಟೆಚ್ಚರ ವಹಿಸಿದ್ದು, ಸೋಮವಾರ ರಕ್ಷಣಾ ಪಡೆಗಳು ಹಾಗೂ ತನಿಖಾ ಸಂಸ್ಥೆಗಳು ಕರಾವಳಿಯಲ್ಲಿ ಸಭೆ ನಡೆಸಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಭದ್ರತೆ ಅಲರ್ಟ್ ಘೋಷಿಸುವ ಸಾಧ್ಯತೆ ಹೆಚ್ಚಾಗಿದೆ.

- Advertisement -

ಜಿಲ್ಲೆಯ ಸೂಕ್ಷ್ಮ ಪ್ರದೇಶಗಳು ಸೇರಿದಂತೆ ಜನಸಂದಣಿ ಪ್ರದೇಶ ಹಾಗೂ ಸಮುದ್ರ ಮಾರ್ಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದ್ದು, ಬಿಗಿ ಬಂದೋಬಸ್ತ್ ಹೆಚ್ಚಿಸಿ ಸ್ಥಳೀಯರ ಮೇಲೂ ಹದ್ದಿನ‌ ಕಣ್ಣಿಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈಗಾಗಲೇ ಗಡಿಯಲ್ಲಿ ಬಿಗುವಿನ‌ ವಾತಾರಣ ಇದ್ದು, ಕೇವಲ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಸೀಮಿತಗೊಳಿಸದೇ, ಸ್ಥಳೀಯವಾಗಿಯೂ ಸಮಾಜ ಘಾತಕ ಕೃತ್ಯಗಳಿಗೆ ಅವಕಾಶ ನೀಡದಂತೆ ಸ್ಥಳೀಯ ಪೊಲೀಸರ ಸಹಕಾರ ಪಡೆದು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರದಂತೆ ಜಿಲ್ಲೆಯ ಎಲ್ಲ ಉಪವಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ನೇತೃತ್ವದಲ್ಲಿ ಪೊಲೀಸರು ಈಗಾಗಲೇ, ಜಿಲ್ಲೆಯಲ್ಲಿ ಸಮಾಜ ಘಾತಕ‌ ಕೃತ್ಯಗಳಲ್ಲಿ ತೊಡಗಿಕೊಳ್ಳುವ ಹಾಗೂ ಪ್ರೇರಣೆ ನೀಡುವ ಮತ್ತು ಶಾಂತಿ ಸುವ್ಯವಸ್ಥೆಯನ್ನು ಕದಡುವ ರೌಡಿ‌ ಶೀಟರ್​​ಗಳ ಪೆರೇಡ್ ನಡೆಸಿ ಎಚ್ಚರಿಕೆ ನೀಡುತ್ತಿದ್ದಾರೆ.

ಜಿಲ್ಲೆಯ ಗಡಿ ಹಾಗೂ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ವಿಶೇಷ ಅಭಿಯಾನ, ಚೆಕ್‌ಪೋಸ್ಟ್​​ಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಚೆಕ್ ಪೋಸ್ಟ್​​ಗಳಲ್ಲಿ ಸಂಚಾರ ನಿಯಮ‌ ಉಲ್ಲಂಘನೆ‌ ಸೇರಿದಂತೆ 361 ಪ್ರಕರಣಗಳಲ್ಲಿ ₹1.45 ಲಕ್ಷ ದಂಡ ವಿಧಿಸಲಾಗಿದೆ.

ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಬೆನ್ನಲ್ಲೇ, ನೌಕಾನೆಲೆ, ಕೈಗಾ ಸೇರಿದಂತೆ ಅತಿ ಸೂಕ್ಷ್ಮ ಪ್ರದೇಶ ಒಳಗೊಂಡಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುದ್ದಾಗಿ ಕರಾವಳಿ ಹಾಗೂ ಮಲೆನಾಡಿನ ಸೂಕ್ಷ್ಮ ಪ್ರದೇಶಗಳಲ್ಲಿ ಪರಿಶೀಲಿಸಿ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿದ್ದರು. ಅಲ್ಲದೆ ಪ್ರವಾಸಿ ತಾಣಗಳೊಂದಿಗೆ ಗುರುತಿಸಿಕೊಂಡಿರುವ ಜಿಲ್ಲೆಯಲ್ಲಿ ಪ್ರವಾಸಿಗರಿಗೆ ರಕ್ಷಣೆ ಒದಗಿಸುವ ಸಂಬಂಧ ಜಿಲ್ಲೆಯ ಗಡಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್ ತೆರೆದು ವಿಶೇಷ ನಿಗಾ ವಹಿಸಿದ್ದರು. ಅದರಂತೆ ಜಿಲ್ಲೆಯ ವಿವಿಧ ವಿಭಾಗಗಳಲ್ಲಿ ಕಳೆದ ಎರಡು ದಿನದಿಂದ ರಾತ್ರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮದ್ಯ ಸೇವಿಸಿ ವಾಹನ ಚಲಾವಣೆ ಹಾಗೂ ನಿಯಮ ಉಲ್ಲಂಘಿಸಿ ವಾಹನ ಚಲಾವಣೆ ಮಾಡುತ್ತಿದ್ದ ಸುಮಾರು 361 ಪ್ರಕರಣಗಳನ್ನು ದಾಖಲಿಸಿ ₹1,45,600 ದಂಡ ವಸೂಲಿ ಮಾಡಿದ್ದಾರೆ. ಈ ಪೈಕಿ ಭಟ್ಕಳ ವಿಭಾಗದಿಂದ 185 ಪ್ರಕರಣ, ಶಿರಸಿ ವಿಭಾಗದಲ್ಲಿ 101, ದಾಂಡೇಲಿ ವಿಭಾಗದಲ್ಲಿ 73 ಹಾಗೂ ಕಾರವಾರ ವಿಭಾಗದಲ್ಲಿ 12 ಪ್ರಕರಣಗಳನ್ನು ದಾಖಲಿಸಿ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಸಿ ಮುಟ್ಟಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | 260ಕ್ಕೂ ಹೆಚ್ಚು ಮನೆಗಳ್ಳತನ; ಅಂತಾರಾಜ್ಯ ಆರೋಪಿ ಬಂಧನ

“ಜಿಲ್ಲೆಯಲ್ಲಿ ಗಡಿ ಹಾಗೂ ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ವಿಶೇಷ ಕಾರ್ಯಾಚರಣೆ ಮೂಲಕ ನಿಯಮ ಉಲ್ಲಂಘಿಸುವುದರ ವಿರುದ್ದ ಕ್ರಮ ಕೈಗೊಳ್ಳುವುದರೊಂದಿಗೆ ಜಿಲ್ಲೆಯಾದ್ಯಂತೆ ಭದ್ರತೆ ಹೆಚ್ಚಿಸಿ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ” ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ ಐತಾಳ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...