ಅರಣ್ಯವಾಸಿಗಳ ಹೋರಾಟಕ್ಕೆ 32 ವರ್ಷ | ಒಂದು ಲಕ್ಷ ಗಿಡ ನೆಟ್ಟು ವನಮಹೋತ್ಸವ ಆಚರಣೆ

Date:

Advertisements

ಅರಣ್ಯ ಭೂಮಿ ಹಕ್ಕು ಹೋರಾಟಕ್ಕೆ 32 ವರ್ಷ ಪೂರೈಸಿದ ಹಿನ್ನೆಲೆ ಅರಣ್ಯ ಅಭಿವೃದ್ಧಿ ಮತ್ತು ಪರಿಸರ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ಒಂದು ಲಕ್ಷ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಉತ್ತರ ಕನ್ನಡ ಜಿಲ್ಲಾದ್ಯಂತ ಆಚರಿಸಲು ನಿರ್ಧರಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದರು.

ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ’32 ವರ್ಷ ಹೋರಾಟ- ಒಂದು ಲಕ್ಷ ಗಿಡ’ ಎಂಬ ವಿನೂತನ ರೀತಿಯ ವನಮಹೋತ್ಸವ ಕಾರ್ಯಕ್ರಮದ ಲಾಂಛನ ಬಿಡುಗಡೆ ಮಾಡಿ ಮಾತನಾಡಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಭೀವೃದ್ಧಿ ಕಾರ್ಯ, ಬೆಂಕಿ, ಜಲವಿದ್ಯುತ್‌ ಯೋಜನೆ, ಸಾರಿಗೆ, ಅರಣ್ಯ ಇಲಾಖೆಯ ಕಾಮಗಾರಿ ಮುಂತಾದ ಉದ್ದೇಶದಿಂದ ಜಿಲ್ಲೆಯಲ್ಲಿನ ಅರಣ್ಯ ಸಾಂದ್ರತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವುದು ವಿಷಾದಕರ. ಈ ಹಿನ್ನೆಲೆ ಅರಣ್ಯ ಭೂಮಿಯ ಮೇಲೆ ಅವಲಂಭಿತ ಅರಣ್ಯವಾಸಿಗಳು ಜಿಲ್ಲಾದ್ಯಂತ ಅರಣ್ಯ ಇಲಾಖೆಯ ಸಹಕಾರವಿಲ್ಲದೇ, ಗಿಡ ನೆಟ್ಟು ಪರಿಸರ ಜಾಗೃತೆ ಮೂಡಿಸಲಿದೆ ಎಂದು ಹೇಳಿದರು.

Advertisements

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೌಗೋಳಿಕವಾಗಿ 10,571 ಚದರ ಕಿ.ಮೀ ಪ್ರದೇಶ ಹೊಂದಿದ್ದು, ಅದರಲ್ಲಿ 8,500 ಚದರ ಕಿ.ಮೀ ಅರಣ್ಯ ಪ್ರದೇಶವಿದೆ. ಭೌಗೋಳಿಕವಾಗಿ ಜಿಲ್ಲೆಯ ಜನಸಂಖ್ಯೆಯ ಸಾಂಧ್ರತೆಯ ಪ್ರಮಾಣ ಪ್ರತಿ ಸ್ಕ್ಯೂರ್‌ ಕಿ.ಮೀ ಗೆ 202 ಜನ ಇದ್ದರೆ. ಅರಣ್ಯ ಸಾಂದ್ರತೆಯ ಪ್ರದೇಶವು ಜನಸಂಖ್ಯೆಯ ಸಾಂದ್ರತೆಗಿಂತ 10 ಪಟ್ಟು ಹೆಚ್ಚಾಗಿ ಇದ್ದರೂ ವಾಸ್ತವಿಕವಾಗಿ ಗಿಡ, ಮರ ಪ್ರಮಾಣ ಕಡಿಮೆ ಇರುವುದು ಉಲ್ಲೇಖನಾರ್ಹ ಎಂದರು.

ಈ ಸುದ್ದಿ ಓದಿದ್ದೀರಾ? ವಿಧಾನಸಭೆಯ ಭವ್ಯ ಪರಂಪರೆಗೆ ಬಿಜೆಪಿಯಿಂದ ಕಪ್ಪು ಚುಕ್ಕೆ ಅಂಟಿದೆ: ಸಚಿವ ಪ್ರಿಯಾಂಕ್‌ ಖರ್ಗೆ ಟೀಕೆ

ಅರಣ್ಯ ಇಲಾಖೆ ವನಮಹೋತ್ಸವ ಬೊಗಸ್

ಪ್ರತಿವರ್ಷ ಅರಣ್ಯ ಇಲಾಖೆಯು ನೇಡುವ ಗಿಡಗಳ ಸಂಖ್ಯೆ ಪ್ರಕಟಿಸುತ್ತದೆ. ವಿನಾಃ, ನೆಟ್ಟಂತ ಗಿಡಗಳ ರಕ್ಷಣೆ ಆಗಿರುವ ಕುರಿತು ಯಾವುದೇ ದಾಖಲೆಗಳು ಇರುವುದಿಲ್ಲ. ಅರಣ್ಯ ಇಲಾಖೆ ಗಿಡ ನೆಡುವ ವನಮೋತ್ಸವ ಯೋಜನೆ ಬೋಗಸ್‌ ಯೋಜನೆಯಾಗಿದೆ. ಕಳೆದ ವರ್ಷ ತೆಗೆದ ಹೊಂಡಕ್ಕೆ ಪ್ರಸಕ್ತ ವರ್ಷ ಗಿಡ ನೆಡುವ ನೀತಿ ಅರಣ್ಯ ಇಲಾಖೆಯದಾಗಿದೆ. ಜಿಲ್ಲೆಯ ಪರಿಸರ ಮತ್ತು ಮಣ್ಣಿಗೆ ಮಾರಕವಾಗಿರುವ ಗಿಡ, ಮರಗಳನ್ನು ಅರಣ್ಯ ಇಲಾಖೆ ನೆಡುವ ಅವೈಜ್ಞಾನಿಕವಾಗಿರುವ ಪದ್ಧತಿ ಬಿಡಬೇಕು ಎಂದು ರವೀಂದ್ರ ನಾಯ್ಕ ಅಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಅಧ್ಯಕ್ಷ ಭಿಮ್ಸಿ ವಾಲ್ಮೀಕಿ, ಮುಂಡಗೋಡ ಅಧ್ಯಕ್ಷ ಶಿವಾನಂದ ಜೋಗಿ, ಜಿಲ್ಲಾ ಸಂಚಾಲಕರಾದ ಇಬ್ರಾಹಿಂ ಗೌಡಳ್ಳಿ, ರಾಜು ನರೇಬೈಲ್ ಹಾಗೂ ಪ್ರಮುಖರಾದ ದುಗ್ಗು ಮರಾಠಿ, ನೂರ್ ಅಹಮ್ಮದ್, ಗಣೇಶ ಧಾಕು ಮರಾಠಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X