ಉತ್ತರ ಕನ್ನಡ | ಜಿಲ್ಲೆಯ ಬಿ.ಸಿ.ಎಂ ಹಾಸ್ಟೆಲ್‌ಗಳಲ್ಲಿ ವಾರ್ಡನ್‌ಗಳ ಕೊರತೆ; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

Date:

ಉತ್ತರ ಕನ್ನಡ: ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಆಸರೆಯಾಗಬೇಕಿದ್ದ ಸರ್ಕಾರಿ ಹಾಸ್ಟೆಲ್‌ಗಳು (ವಸತಿ ನಿಲಯಗಳು) ಇಂದು ಮೂಲಸೌಕರ್ಯ ಮತ್ತು ಸಿಬ್ಬಂದಿ ಕೊರತೆಯಿಂದ ಸೊರಗುತ್ತಿರುವ ಸ್ಥಿತಿಯಲ್ಲಿವೆ. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟೆಲ್‌ಗಳಲ್ಲಿ ವಸತಿ ನಿಲಯ ಪಾಲಕರ ಕೊರತೆಯಿಂದಾಗಿ ವಿಧ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿ ತಲುಪುವಂತಾಗಿದೆ

- Advertisement -

ಜಿಲ್ಲೆಯಲ್ಲಿ ಒಟ್ಟು 105 ಸರ್ಕಾರಿ ಹಾಸ್ಟೆಲ್‌ಗಳಿದ್ದರೂ, ಪ್ರಸ್ತುತ ಕೆಲಸ ನಿರ್ವಹಿಸುತ್ತಿರುವವರು ಕೇವಲ 32 ವಾರ್ಡನ್‌ಗಳು ಮಾತ್ರ. ಇದರ ಪರಿಣಾಮವಾಗಿ ಒಬ್ಬೊಬ್ಬ ವಾರ್ಡನ್‌ ಎರಡು ಅಥವಾ ಮೂರು ಹಾಸ್ಟೆಲ್‌ಗಳ ಜವಾಬ್ದಾರಿಯನ್ನು ನಿಭಾಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಕೆಲ ತಾಲ್ಲೂಕುಗಳಲ್ಲಿ ಕಚೇರಿ ಸಿಬ್ಬಂದಿಯೇ ಹಾಸ್ಟೆಲ್‌ಗಳ ಉಸ್ತುವಾರಿ ನೋಡಿಕೊಳ್ಳುತ್ತಿರುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ಅತಿಯಾದ ಕೆಲಸದ ಒತ್ತಡದಿಂದ ವಾರ್ಡನ್‌ಗಳಿಗೆ ವಿದ್ಯಾರ್ಥಿಗಳ ಓದು, ಆರೋಗ್ಯ ಹಾಗೂ ದಿನನಿತ್ಯದ ಸಮಸ್ಯೆಗಳ ಕಡೆಗೆ ಸಮರ್ಪಕವಾಗಿ ಗಮನ ಹರಿಸಲು ಸಮಯವೇ ಸಿಗುತ್ತಿಲ್ಲ.

ಜಿಲ್ಲೆಯ 105 ಹಾಸ್ಟೆಲ್‌ಗಳಲ್ಲಿ 21 ಹಾಸ್ಟೆಲ್‌ಗಳು ಇಂದಿಗೂ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಬಾಡಿಗೆ ಪಾವತಿಸುತ್ತಿದ್ದರೂ, ಈ ಕಟ್ಟಡಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಶೌಚಾಲಯ, ಅಡುಗೆಮನೆ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿಲ್ಲ.

ಅರಣ್ಯ ಪ್ರದೇಶ ಹೆಚ್ಚಿರುವ ಹಾಗೂ ಸರಿಯಾದ ಬಸ್ ಸಂಪರ್ಕವಿಲ್ಲದ ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಈ ಹಾಸ್ಟೆಲ್‌ಗಳೇ ದೊಡ್ಡ ಆಸರೆಯಾಗಿದೆ. ಆದರೆ, ವಿಶೇಷವಾಗಿ ಹುಡುಗಿಯರ ಹಾಸ್ಟೆಲ್‌ಗಳಲ್ಲಿ ಸಮಯಕ್ಕೆ ಸರಿಯಾಗಿ ಸ್ಪಂದಿಸುವ ವಾರ್ಡನ್‌ಗಳ ಕೊರತೆ ಅವರ ಭದ್ರತೆ ಕುರಿತು ಆತಂಕ ಮೂಡಿಸಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

ಸರಿಯಾದ ಊಟದ ವ್ಯವಸ್ಥೆ ಇಲ್ಲದೆ, ಆರೋಗ್ಯದಲ್ಲಿ ಏರುಪೇರಾದಾಗ ಕೇಳುವವರಿಲ್ಲದಂತಾಗಿದೆ.“ಬಡ ಮಕ್ಕಳ ಶಿಕ್ಷಣದ ಜೊತೆ ಸರ್ಕಾರ ಆಟವಾಡಬಾರದು. ಕೂಡಲೇ ಪ್ರತಿಯೊಂದು ಹಾಸ್ಟೆಲ್‌ಗೆ ಖಾಯಂ ವಾರ್ಡನ್‌ಗಳನ್ನು ನೇಮಕ ಮಾಡಬೇಕು. ಬಾಡಿಗೆ ಕಟ್ಟಡಗಳನ್ನು ಬಿಟ್ಟು ಸರ್ಕಾರಿ ಕಟ್ಟಡಗಳನ್ನು ನಿರ್ಮಿಸಿ, ಅಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು” ಎಂದು ಪೋಷಕರು ಹಾಗೂ ವಿದ್ಯಾರ್ಥಿ ಸಂಘಟನೆಗಳು ಒತ್ತಾಯಿಸುತ್ತಿವೆ.

ಇನ್ನಾದರೂ ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಹಾಸ್ಟೆಲ್‌ಗಳ ದುಸ್ಥಿತಿಯನ್ನು ಸುಧಾರಿಸುವತ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...