ಉತ್ತರ ಕನ್ನಡ | ಅಂಚೆ ಸೇವೆಯಲ್ಲಿ ಮಹತ್ವದ ಬದಲಾವಣೆ: ಕಚೇರಿ ಮುಕ್ತಾಯದ ಕೊನೆಯ 30 ನಿಮಿಷಗಳವರೆಗೂ ಬುಕ್ಕಿಂಗ್ ಅವಕಾಶ

Date:

ಉತ್ತರ ಕನ್ನಡ: ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯು ತನ್ನ ಸೇವೆಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಇನ್ನು ಮುಂದೆ ಎಲ್ಲಾ ಇಲಾಖಾ ಅಂಚೆ ಕಚೇರಿಗಳಲ್ಲಿ ಕೆಲಸದ ಅವಧಿ ಮುಗಿಯುವ ಕೊನೆಯ 30 ನಿಮಿಷಗಳವರೆಗೂ ಅಂಚೆ ವಸ್ತುಗಳನ್ನು ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ.

- Advertisement -

ಸಾಮಾನ್ಯವಾಗಿ ಕಚೇರಿ ಸಮಯದ ಕೊನೆಯ ಕ್ಷಣದಲ್ಲಿ ಬರುವ ಗ್ರಾಹಕರಿಗೆ ಅಂಚೆ ಸೇವೆ ಪಡೆಯಲು ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಇಲಾಖೆಯು, ನಿಗದಿತ ಕಾರ್ಯಾವಧಿ ಮುಕ್ತಾಯಕ್ಕೆ ಮುಂಚಿತವಾಗಿ 30 ನಿಮಿಷಗಳವರೆಗೆ ಸ್ಪೀಡ್ ಪೋಸ್ಟ್,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪಾರ್ಸೆಲ್ ಹಾಗೂ ಅಂತರರಾಷ್ಟ್ರೀಯ ಸ್ಪೀಡ್ ಪೋಸ್ಟ್ ಮತ್ತು ಪಾರ್ಸೆಲ್‌ಗಳನ್ನು ಬುಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತಂದಿದೆ. ಇದರಿಂದ ಸಂಜೆಯ ವೇಳೆಗೆ ಕಚೇರಿಗೆ ಧಾವಿಸುವ ಗ್ರಾಹಕರು ಇನ್ನು ಮುಂದೆ ಸುಲಭವಾಗಿ ತಮ್ಮ ಪಾರ್ಸೆಲ್‌ಗಳನ್ನು ರವಾನಿಸಬಹುದಾಗಿದೆ.

ಕೇವಲ ಕಚೇರಿಗಳಿಗೆ ಭೇಟಿ ನೀಡುವುದು ಮಾತ್ರವಲ್ಲದೆ, ಮನೆಯಲ್ಲಿಯೇ ಕುಳಿತು ಅಂಚೆ ಸೇವೆ ಪಡೆಯಲು ಇಲಾಖೆಯು ‘ಗ್ರಾಹಕ ಸ್ವಯಂ ಸೇವಾ ಪೋರ್ಟಲ್’ ಅನ್ನು ಲಭ್ಯವಾಗಿಸಿದೆ. ಗ್ರಾಹಕರು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಅಂಚೆ ವಸ್ತುಗಳ ಬುಕ್ಕಿಂಗ್, ಟ್ರ‍್ಯಾಕಿಂಗ್ ಹಾಗೂ ದೂರು ಸಲ್ಲಿಕೆಯಂತಹ ಕಾರ್ಯಗಳನ್ನು ಆನ್‌ಲೈನ್‌ನಲ್ಲೇ ಮಾಡಬಹುದಾಗಿದೆ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸಿದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿಗಳ ಖಡಕ್ ಸೂಚನೆ

ಅಂಚೆ ಸೇವೆಗಳನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ “Dak Seva App” ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಕೂಡ ಇಲಾಖೆ ಬಿಡುಗಡೆ ಮಾಡಿದೆ. ಈ ಆಪ್ ಮೂಲಕ ಗ್ರಾಹಕರು ತಮ್ಮ ಮೊಬೈಲ್‌ನಲ್ಲಿಯೇ ಬುಕ್ಕಿಂಗ್ ಮತ್ತು ಸೇವಾ ಮಾಹಿತಿಯನ್ನು ಪಡೆಯಬಹುದು.

ಈ ಆಪ್ ಡೌನ್‌ಲೋಡ್ ಮಾಡಲು ಅಗತ್ಯವಿರುವ ಕ್ಯೂಆರ್ ಕೋಡ್ ಅಂಚೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಲಭ್ಯವಿದ್ದು, ಸಾರ್ವಜನಿಕರು ಈ ಎಲ್ಲಾ ಆಧುನಿಕ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಅಂಚೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ತಮ್ಮ ಸಮೀಪದ ಅಂಚೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...