ಉತ್ತರ ಕನ್ನಡ | SIR-2026 ಕರಡು ಮತದಾರರ ಪಟ್ಟಿ ಪ್ರಕಟ: 1,07,015 ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗೆ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ–2026 (SIR) ಪ್ರಕ್ರಿಯೆಯ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ವಿವಿಧ ಕಾರಣಗಳಿಂದಾಗಿ ಒಟ್ಟು 1,07,015 ಮತದಾರರ ಹೆಸರುಗಳು ಕರಡು ಪಟ್ಟಿಯಿಂದ‌ ಕೈ ಬಿಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ತಿಳಿಸಿದ್ದಾರೆ.

- Advertisement -

ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯ ಪ್ರಕಾರ, ಜೂನ್ 16, 2026ರ ಪಟ್ಟಿಯಲ್ಲಿ ಒಟ್ಟು 12,30,037 ಮತದಾರರು ಇದ್ದರು. ಆಗಸ್ಟ್ 24ರಂದು ಪ್ರಕಟಿಸಲಾದ ಕರಡು ಪಟ್ಟಿಯಲ್ಲಿ ಈ ಸಂಖ್ಯೆ 11,23,022ಕ್ಕೆ ಇಳಿಕೆಯಾಗಿದೆ. ಇದರಲ್ಲಿ 5,62,004 ಪುರುಷರು, 5,61,014 ಮಹಿಳೆಯರು ಹಾಗೂ ನಾಲ್ವರು ತೃತೀಯ ಲಿಂಗದ ಮತದಾರರು ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕ್ಷೇತ್ರವಾರು ಗಮನಿಸಿದರೆ, ಹಳಿಯಾಳದಲ್ಲಿ 1,87,543ರಿಂದ 1,67,767ಕ್ಕೆ ಇಳಿಕೆಯಾಗಿದ್ದು, 19,776 ಮತದಾರರ ಹೆಸರುಗಳು ಕರಡು ಪಟ್ಟಿಯಿಂದ ಕೈ ಬಿಡಲಾಗಿದೆ. ಕಾರವಾರದಲ್ಲಿ 2,23,390ರಿಂದ 1,98,962ಕ್ಕೆ ಇಳಿಕೆಯಾಗಿದ್ದು, 24,428 ಹೆಸರುಗಳನ್ನು ಕಡಿಮೆ ಮಾಡಿದ್ದಾರೆ. ಕುಮಟಾದಲ್ಲಿ 1,92,055ರಿಂದ 1,77,434ಕ್ಕೆ ಇಳಿಕೆಯಾಗಿದ್ದು, 14,621 ಮತದಾರರ ಹೆಸರುಗಳು ಹೊರಗುಳಿದಿವೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಜನರ ಮನೆ ಬಾಗಿಲಿಗೆ ಜಾತಿ–ಆದಾಯ ಪ್ರಮಾಣಪತ್ರ: 9.60 ಲಕ್ಷ ವಿತರಣೆ, ಶೇ.85.76 ಸಾಧನೆ

ಅದೇ ರೀತಿ ಭಟ್ಕಳದಲ್ಲಿ 2,31,778ರಿಂದ 2,13,682ಕ್ಕೆ ಇಳಿಕೆಯಾಗಿದ್ದು, 18,096 ಹೆಸರುಗಳು, ಶಿರಸಿಯಲ್ಲಿ 2,05,743ರಿಂದ 1,91,751ಕ್ಕೆ ಇಳಿಕೆಯಾಗಿದ್ದು, 13,992 ಹೆಸರುಗಳು ಹಾಗೂ ಯಲ್ಲಾಪುರದಲ್ಲಿ 1,89,528ರಿಂದ 1,73,426ಕ್ಕೆ ಇಳಿಕೆಯಾಗಿದ್ದು, 16,102 ಹೆಸರುಗಳು ಕರಡು ಪಟ್ಟಿಯಿಂದ ಕೈ ಬಿಡಲಾಗಿದೆ.

1001021636

SIR ಪ್ರಕ್ರಿಯೆಯಡಿ ಜಿಲ್ಲೆಯಲ್ಲಿ ಮತಗಟ್ಟೆಗಳ ಪುನರ್‌ವಿಂಗಡಣೆ (Rationalization) ಕೂಡ ನಡೆಸಲಾಗಿದೆ. ಈ ಪ್ರಕ್ರಿಯೆಗೂ ಮೊದಲು ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 1,445 ಮತಗಟ್ಟೆಗಳು ಇದ್ದವು. ಪುನರ್‌ವಿಂಗಡಣೆ ಬಳಿಕ 78 ಹೊಸ ಮತಗಟ್ಟೆಗಳನ್ನು ಹೆಚ್ಚಿಸಿ ಒಟ್ಟು 1,523 ಮತಗಟ್ಟೆಗಳಿಗೆ ಏರಿಸಲಾಗಿದೆ. ಹಳಿಯಾಳದಲ್ಲಿ 14, ಕಾರವಾರದಲ್ಲಿ 7, ಕುಮಟಾದಲ್ಲಿ 12, ಭಟ್ಕಳದಲ್ಲಿ 21, ಶಿರಸಿಯಲ್ಲಿ 12 ಹಾಗೂ ಯಲ್ಲಾಪುರದಲ್ಲಿ 12 ಮತಗಟ್ಟೆಗಳು ಹೆಚ್ಚಾಗಿವೆ.

ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ: ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಗಸ್ಟ್ 24ರಿಂದ ಸೆಪ್ಟೆಂಬರ್ 23, 2026ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಪ್ರಕ್ರಿಯೆ ಆಗಸ್ಟ್ 24ರಿಂದ ಅಕ್ಟೋಬರ್ 22ರವರೆಗೆ ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27, 2026ರಂದು ಪ್ರಕಟಿಸಲಾಗುತ್ತದೆ.

ಜಿಲ್ಲಾಡಳಿತವು ಮತದಾರರು ತಮ್ಮ ಹೆಸರು ಕರಡು ಪಟ್ಟಿಯಲ್ಲಿ ಇರುವುದನ್ನು ಪರಿಶೀಲಿಸಿ, ಹೆಸರು ಇಲ್ಲದಿದ್ದರೆ ಅಥವಾ ಯಾವುದೇ ತಿದ್ದುಪಡಿ ಅಗತ್ಯವಿದ್ದರೆ ನಿಗದಿತ ಅವಧಿಯೊಳಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.
ಮತದಾರರ ಪಟ್ಟಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ವೆಬ್‌ಸೈಟ್ ಹಾಗೂ ಉತ್ತರ ಕನ್ನಡ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್ ಪರಿಶೀಲಿಸಬಹುದು. ಅಥವಾ ಮತದಾರರ ಸಹಾಯವಾಣಿ 1950 ಸಂಖ್ಯೆಯನ್ನೂ ಸಂಪರ್ಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...