ಉತ್ತರ ಕನ್ನಡ | ರಾಜ್ಯದ ತಜ್ಞ ವೈದ್ಯರಿಗೆ ಶೀಘ್ರದಲ್ಲಿ ಸ್ಥಳ ನಿಯುಕ್ತಿ: ಸಚಿವ ದಿನೇಶ್ ಗುಂಡೂರಾವ್

Date:

Advertisements

ರಾಜ್ಯದಲ್ಲಿ ಖಾಲಿ ಇರುವ ಸೂಪರ್ ಸ್ಪೆಷಲಿಸ್ಟ್ ವೈದ್ಯರು ಮತ್ತು ತಜ್ಞ ವೈದ್ಯರ ನೇಮಕಾತಿಯ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದ್ದು, ಅವರಿಗೆ ಶೀಘ್ರದಲ್ಲಿ ಕೌನ್ಸಲಿಂಗ್ ಆರಂಭವಾಗಲಿದೆ. ಖಾಲಿ ಇರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಕಾರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, “ರಾಜ್ಯದ ಆಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಲಿಸ್ಟ್ ವೈದ್ಯರು ಮತ್ತು ತಜ್ಞ ವೈದ್ಯರ ಕೊರತೆ ಇರುವುದ ಗಮನಕ್ಕೆ ಬಂದಿದ್ದು, ಈ ಕುರಿತಂತೆ ಈಗಾಗಲೇ ನೇಮಕಾತಿ ಪ್ರಕ್ರಿಯೆ ಮುಕ್ತಯಗೊಳಿಸಿದ್ದು, ಶೀಘ್ರದಲ್ಲಿ ಸ್ಥಳ ನಿಯುಕ್ತಿ ಮಾಡಲಾಗುವುದು. ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುವ ಸಾವುಗಳನ್ನು ತಡೆಗಟ್ಟಲು ಈಗಾಗಲೇ ಕೆಲವು ತಾಲೂಕು ಆಸ್ಪತ್ರೆಗಳಲ್ಲಿ ಜಾರಿಯಲ್ಲಿರುವ ಪುನೀತ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು ಹೃದಯ, ಎದೆ ನೋವಿನ ಕುರಿತಂತೆ ತಾಲೂಕು ಆಸ್ಪತ್ರೆಗಳಲ್ಲಿ ಇಸಿಜಿ ನಡೆಸಿ, ಚಿಕಿತ್ಸೆ ನೀಡಲಾಗುವುದು ಹಾಗೂ ಅಪಘಾತ ಸಂದರ್ಭದಲ್ಲಿ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವ ಹರೀಶ್ ಸಾಂತ್ವನ ಯೋಜನೆ ಜಾರಿಯಲ್ಲಿದೆ” ಎಂದರು.

“ಉತ್ತರ ಕನ್ನಡ ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ ಇರುವುದು ಗಮನಕ್ಕೆ ಬಂದಿದ್ದು ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗುವುದು ಮತ್ತು ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರಲಾಗುವುದು. ಕ್ರಿಮ್ಸ್ ನಲ್ಲಿನ ಜಿಲ್ಲಾಸ್ಪತ್ರೆಯನ್ನು ಅಲ್ಲಿಂದ ಬೇರ್ಪಡಿಸುವುದಿಲ್ಲ ಬದಲಾಗಿ ಶಿರಸಿಯಲ್ಲಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಮಾಡಲಾಗುವುದು” ಎಂದು ಮಾಹಿತಿ ನೀಡಿದರು.

Advertisements

“ರಾಜ್ಯದಲ್ಲಿನ ವೈದ್ಯಕೀಯ ಆಂಬುಲೆನ್ಸ್ಗಳ ಸೇವೆಯನ್ನು ಇನ್ನು ಮುಂದೆ ಕೆಪಿಎಂಇ ಕಾನೂನಿನ ಅಡಿಯಲ್ಲಿ ತರಲು ನಿರ್ಧರಿಸಿದ್ದು, ಈ ಕುರಿತಂತೆ ಬರುವ ವಿಧಾನಸಭೆಯ ಅಧಿವೇಶನದಲ್ಲಿ ಕಾಯಿದೆ ಜಾರಿಗೆ ತರಲಾಗುವುದು. ರಾಜ್ಯದಲ್ಲಿ ಪ್ರಸ್ತುತ ಇರುವ ಅಂಬುಲೆನ್ಸ್ ಒದಗಿಸುತ್ತಿರುವ ಸೇವೆಗಳು ಮತ್ತು ಗುಣಮಟ್ಟದ ಬಗ್ಗೆ ಹಲವು ದೂರುಗಳು ಬರುತ್ತಿದ್ದು, ಈ ಕುರಿತಂತೆ ಆಂಬುಲೆನ್ಸ್ಗಳು ಯಾವ ರೀತಿ ಇರಬೇಕು, ಅದರಲ್ಲಿ ಯಾವ ಅಗತ್ಯ ವ್ಯವಸ್ಥೆಗಳು ಇರಬೇಕು ಎಂಬ ಬಗ್ಗೆ ಹಾಗೂ ಅವುಗಳಿಗೆ ನಿಗಧಿತ ದರ ನಿಗಧಿಪಡಿಸುವ ಬಗ್ಗೆ ಕಾನೂನು ರಚಿಸಲಾಗುತ್ತಿದ್ದು, ಇನ್ನು ಮುಂದೆ ಆಂಬುಲೆನ್ಸ್ ಸೇವೆ ಒದಗಿಸುವವರು ಮತ್ತು ಮೊಬೈಲ್ ಹೆಲ್ತ್ ಯೂನಿಟ್ ಗಳು ಖಾಸಗಿ ಆಸ್ಪತ್ರೆಗಳ ರೀತಿಯಲ್ಲಿ ಕೆಪಿಎಂಇ ಅಡಿಯಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಕೆಪಿಎಂಇ ಅಡಿಯಲ್ಲಿ ನೋಂದಣಿಯಾಗುವ ಆಂಬುಲೆನ್ಸ್ ಗಳಿಗೆ ಅವುಗಳ ಒದಗಿಸುವ ಸೇವೆಯ ಆಧಾರದಲ್ಲಿ ದರ ನಿಗಧಿಪಡಿಸಲಾಗುವುದು, ಆಂಬುಲೆನ್ಸ್ ಸೇವೆಯ ಅಗತ್ಯವಿರುವವರು ಆಪ್ ಮೂಲಕ ಬುಕ್ಕಿಂಗ್ ಮಾಡುವ ಸೌಲಭ್ಯ ಒದಗಿಸಲಾಗುವುದು, ಈ ಮೂಲಕ ಆಂಬುಲೆನ್ಸ್ ಸೇವೆಯಲ್ಲಿ ಪಾರದರ್ಶಕತೆ ತರಲಾಗುವುದು” ಎಂದರು.

“ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆರೋಗ್ಯ ಇಲಾಖೆಯಲ್ಲಿ 5500 ಮಂದಿಯನ್ನು ಯಾವುದೇ ಶಿಫಾರಸ್ಸು ಹಸ್ತಕ್ಷೇಪವಿಲ್ಲದೇ ಪಾರದರ್ಶಕವಾಗಿ ಕೌನ್ಸಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ತಜ್ಞ ವೈದ್ಯರ ವೇತನ ಹೆಚ್ಚಳ ಮಾಡುವುದು ಮಾತ್ರವಲ್ಲದೆ ನೇಮಕಾತಿ ಕೂಡಾ ಮಾಡಲಾಗುತ್ತಿದೆ. 108 ಸೇವೆಯನ್ನು ಸಂಪೂರ್ಣ ರಾಜ್ಯ ಸರ್ಕಾರದ ವಶಕ್ಕೆ ತೆಗೆದುಕೊಳ್ಳಲಿದ್ದು, ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಕಾರ್ಯ ಆರಂಭಿಸಲಿದ್ದು, ಇದು ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆಯಾಗಲಿದ್ದು, ಮುಂದಿನ ತಿಂಗಳು ಎಲ್ಲಾ ಜಿಲ್ಲೆಗಳಲ್ಲಿ ಕಂಟ್ರೋಲ್ ರೂಂ ತೆರೆದು, ನಮ್ಮ ಅಧಿಕಾರಿಗಳೇ 108 ನ್ನು ನಿರ್ವಹಣೆ ಮಾಡಲಿದ್ದು, ಇದಕ್ಕಾಗಿ ಪ್ರತ್ಯೇಕ ಕಂಟ್ರೋಲ್ ರೂಂ ನ್ನು ತೆರೆಯಲಾಗುವುದು” ಎಂದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಎಂಡೋ ಸಲ್ಫಾನ್ ಪೀಡಿತರಿಗೆ ಹೊನ್ನಾವರದಲ್ಲಿ ಚಿಕಿತ್ಸೆ, ಆರೈಕೆ ನೀಡಲು 100 ಬೆಡ್ ನ ಪ್ರತ್ಯೇಕ ಕೇಂದ್ರ ತೆರೆಯುವ ಬಗ್ಗೆ ಮುಖ್ಯಮಂತ್ರಿಗಳ ಪ್ರಸ್ತಾವನೆ ಸಲ್ಲಿಸಲಾಗುವುದು, 3 ನೇ ತೆಲೆಮಾರಿಗೆ ಹರಡುತ್ತಿರುವ ಕುರಿತ ಅಧ್ಯಯನ ಮಾಡುವ ಬಗ್ಗೆ ಚಿಂತನೆ ಮಾಡಲಾಗುವುದು, ಮಂಗನ ಖಾಯಿಲೆಗೆ ಲಸಿಕೆ ಬಗ್ಗೆ ಸಂಶೋಧನೆ ನಡೆಯುತ್ತಿದೆ, ಒಂದು ವರ್ಷದಲ್ಲಿ ಹೊಸ ಲಸಿಕೆ ಬರುವ ಸಾಧ್ಯತೆಯಿದೆ ಎಂದರು.

ಇದನ್ನೂ ಓದಿ: ಉತ್ತರ ಕನ್ನಡ | ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ; ಬೈಕ್ ಸಮೇತ ಕಳ್ಳನ ಬಂಧಿಸಿದ ಪೊಲೀಸರು

ಉತ್ತರ ಕನ್ನಡ ಜಿಲ್ಲಾ ನಾಗರೀಕ ಸಂಘ-ಸಂಸ್ಥೆಗಳ ಒಕ್ಕೂಟ ಪ್ರತಿನಿಧಿಗಳು ಜಿಲ್ಲೆಯಲ್ಲಿನ ವೈದ್ಯಕೀಯ ಸಮಸ್ಯೆಗಳ ಬಗ್ಗೆ ಮಾತನಾಡಿ, ಜಿಲ್ಲೆಯಲ್ಲಿ ತಜ್ಞ ವೈದ್ಯರ ಕೊರತೆ, ವೈದ್ಯಕೀಯ ಯಂತ್ರೋಪಕರಣಗಳ ಕೊರತೆಗಳ ಬಗ್ಗೆ ಸಚಿವರಿಗೆ ವಿವರಿಸಿದರು.

ಸಭೆಯಲ್ಲಿ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಹಾಗೂ ಕ್ರಿಮ್ಸ್ ನ ಡೀನ್ ಡಾ.ಪೂರ್ಣಿಮಾ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X