ಉತ್ತರ ಕನ್ನಡ | ಆತ್ಮಸ್ಥೈರ್ಯ ಮತ್ತು ಸತತ ಪ್ರಯತ್ನದಿಂದ ಜೀವನದಲ್ಲಿ ಯಶಸ್ಸು ಸಾಧ್ಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

Date:

ಉತ್ತರ ಕನ್ನಡ: ವಿದ್ಯಾರ್ಥಿಗಳು ಜೀವನದಲ್ಲಿ ಕೇವಲ ಅಂಕ ಗಳಿಕೆಯನ್ನೇ ಉದ್ದೇಶವಾಗಿಸಿಕೊಳ್ಳದೆ, ತಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವತ್ತ ಗಮನ ಹರಿಸಬೇಕು. ಆತ್ಮಸ್ಥೈರ್ಯದಿಂದ ಕಾರ್ಯ ಸಿದ್ಧಿ ಸಾಧ್ಯವಾಗಲಿದ್ದು, ಓದಿನ ಜೊತೆಗೆ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಕರೆ ನೀಡಿದರು.

- Advertisement -

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಹಾಗೂ ಸಂವಾದದಲ್ಲಿ ಅವರು ಮಾತನಾಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಅಂಕಗಳು ಕೇವಲ ಮನೋಸಾಮರ್ಥ್ಯದ ಮಾನದಂಡಗಳಾಗಿದ್ದು, ಜೀವನದ ಗುರಿ ಮುಟ್ಟಲು ಸಾಧಿಸುವ ಛಲವಿರಬೇಕು. ಪರೀಕ್ಷಾ ಒತ್ತಡಗಳನ್ನು ಎದುರಿಸಿ ಭವಿಷ್ಯದ ಬಗ್ಗೆ ಯೋಚಿಸಿ ನಿರ್ಧಾರ ಕೈಗೊಳ್ಳಬೇಕು. ಶಿಕ್ಷಣ ಪಡೆದ ನಂತರ ಸಮಾಜಕ್ಕೆ ನಾವು ನೀಡುವ ಕೊಡುಗೆ ಬಹಳ ಮುಖ್ಯ ಎಂದು ಅವರು ತಿಳಿಸಿದರು.

ಈ ಬಾರಿಯ ಜಿಲ್ಲೆಯ ಸಾಧನೆಗೆ ಇಲಾಖೆಯ ಪ್ರಯತ್ನ, ಪಾಲಕರ ಬೆಂಬಲ ಹಾಗೂ ಸಮಾಜದ ಪ್ರೇರಣೆ ಕಾರಣ ಎಂದು ಅವರು ಶ್ಲಾಘಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದಿ ರಾಜ್ಯಕ್ಕೆ ರ‍್ಯಾಂಕ್ ಬಂದ ವಿದ್ಯಾರ್ಥಿಗಳ ಸಾಧನೆ ಅನನ್ಯವಾದುದು.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಮೀಟರ್ ಬಡ್ಡಿ ದಂಧೆಗೆ ಬ್ರೇಕ್: ಕಿಂಗ್‌ಪಿನ್ ಜಮೀರ್ ಅಹ್ಮದ್ ಕೊಲೆ ಬಳಿಕ ಖಾಕಿ ಕಾರ್ಯಾಚರಣೆ ಚುರುಕು

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವಾಗ ಮೂಲ ವಿಷಯಗಳನ್ನು ಅರ್ಥೈಸಿಕೊಳ್ಳುವುದು ಮುಖ್ಯ. ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡಿಸಿ, ತಪ್ಪುಗಳನ್ನು ತಾವೇ ಮೌಲ್ಯಮಾಪನ ಮಾಡಿ ಸರಿಪಡಿಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಇರಲಿ ಎಂದು ಹಿತವಚನ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯಮಟ್ಟದ ಮೊದಲ ಹತ್ತು ಸ್ಥಾನ ಗಳಿಸಿದ ಶಿರಸಿ ಮತ್ತು ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಸಂವಾದದಲ್ಲಿ ಸಮೃದ್ಧಿ ಭಾಗ್ವತ, ಸಾನಿಕಾ ಬೈಲೂರ್, ವೈಭವಿ ನಾಯ್ಕ, ದೇವಿಕಾ ಪೈ, ದಿಶಾಂತ್ ನಾಯ್ಕ, ಅದಿತಿ ನಾಯ್ಕ ಹಾಗೂ ಲತಿಕಾ ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಲತಾ ನಾಯಕ, ಡಯಟ್ ಉಪನಿರ್ದೇಶಕ ಎನ್.ಆರ್. ಹೆಗಡೆ, ಶಿಕ್ಷಣಾಧಿಕಾರಿ ಡಾ. ಶುಭಾ ನಾಯಕ ಸೇರಿದಂತೆ ಹಲವು ಅಧಿಕಾರಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬೆಟಗೇರಿ ಕೃಷ್ಣಶರ್ಮ, ವಿ.ಕೃ. ಗೋಕಾಕರು ಕನ್ನಡ ವಿವೇಕ ಕಟ್ಟಿದವರು: ಕವಿ ಡಾ. ಸಿದ್ದಲಿಂಗ ಪಟ್ಟಣಶೆಟ್ಟಿ

ಬೆಟಗೇರಿ ಕೃಷ್ಣಶರ್ಮ ಮತ್ತು ವಿ.ಕೃ. ಗೋಕಾಕರು ತಮ್ಮ ಬರವಣಿಗೆಯಲ್ಲಿ ನೆಲದ ಸಂವೇದನೆಗಳ...

ಸಿಂದಗಿ | ರಾಮಾನಂದ ತೀರ್ಥರ ಜನ್ಮದಿನದೊಳಗೆ ವೀರಸೌಧ ಅಭಿವೃದ್ಧಿಗೆ ಕ್ರಮ

ಹೈದರಾಬಾದ್ ವಿಮೋಚನಾ ಚಳವಳಿಯ ಪಿತಾಮಹ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್...

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...