ಉತ್ತರ ಕನ್ನಡ | ಅಡುಗೆ ಅನಿಲ (ಗ್ಯಾಸ್) ಕೊರತೆ ಇಲ್ಲ: ಆತಂಕ ಬೇಡ ಎಂದ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ

Date:

ಉತ್ತರ ಕನ್ನಡ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗೃಹಬಳಕೆಯ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿತ್ತು. ಆದರೆ, ಜಿಲ್ಲೆಯಲ್ಲಿ ಅನಿಲ ಪೂರೈಕೆ ವ್ಯವಸ್ಥೆ ಎಂದಿನಂತೆ ಸುಗಮವಾಗಿ ನಡೆಯುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಗೊಂದಲ ಅಥವಾ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಸ್ಪಷ್ಟಪಡಿಸಿದ್ದಾರೆ.

- Advertisement -

​ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅನಿಲ ಸರಬರಾಜು ಮಾಡುವ ಕಂಪನಿಗಳ ಅಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

ಜಿಲ್ಲೆಗೆ ಅನಿಲ ಪೂರೈಸುವ ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಮತ್ತು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಕಂಪನಿಗಳ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ಸಮಾಲೋಚನೆ ನಡೆಸಿದ ಅವರು, ಜಿಲ್ಲೆಯ ದೈನಂದಿನ ಬೇಡಿಕೆಗೆ ಅನುಗುಣವಾಗಿ ಅನಿಲ ಪೂರೈಕೆ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ ? ಶಿರಸಿ | ರಾಜ್ಯದ ಜಿಎಸ್ಟಿ ಪಾಲು ಕೊಡಿಸಲು ಬಿಜೆಪಿ ನಾಯಕರು ತಮ್ಮ ತಾಕತ್ತು ತೋರಿಸಲಿ: ಭೀಮಣ್ಣ ನಾಯ್ಕ ವಾಗ್ದಾಳಿ

​ಸಭೆಯಲ್ಲಿ ಪ್ರತಿಕ್ರಿಯಿಸಿದ ತೈಲ ಕಂಪನಿಗಳ ಅಧಿಕಾರಿಗಳು, ಅನಿಲ ಸರಬರಾಜಿನಲ್ಲಿ ಯಾವುದೇ ಅಡಚಣೆ ಇಲ್ಲ ಎಂದು ಭರವಸೆ ನೀಡಿದ್ದಾರೆ. ಕಳೆದ ಒಂದು ದಿನವಷ್ಟೇ ಮುಂಗಡ ಬುಕ್ಕಿಂಗ್ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದಿತ್ತು, ಆದರೆ ಪ್ರಸ್ತುತ ಅದನ್ನು ಸರಿಪಡಿಸಲಾಗಿದೆ.

ಸಾರ್ವಜನಿಕರು ಕೇವಲ ಮಿಸ್ ಕಾಲ್ ಮೂಲಕವೇ ಬುಕ್ಕಿಂಗ್ ಮಾಡಲು ಕಾಯದೇ, ಐ.ವಿ.ಆರ್.ಎಸ್, ವಾಟ್ಸಾಪ್, ಮೊಬೈಲ್ ಅಪ್ಲಿಕೇಶನ್ ಹಾಗೂ ಪಾವತಿ ಆಪ್‌ಗಳಂತಹ ಪರ್ಯಾಯ ಮಾರ್ಗಗಳನ್ನು ಬಳಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

​ಮುಖ್ಯವಾಗಿ ಅಂಗನವಾಡಿಗಳು, ಶಾಲೆಗಳು, ಆಸ್ಪತ್ರೆಗಳು, ಸರ್ಕಾರಿ ಹಾಸ್ಟೆಲ್‌ಗಳು ಮತ್ತು ಇಂದಿರಾ ಕ್ಯಾಂಟೀನ್‌ಗಳಿಗೆ ಅಡುಗೆ ಅನಿಲದ ಕೊರತೆಯಾಗದಂತೆ ಆದ್ಯತೆಯ ಮೇರೆಗೆ ಸರಬರಾಜು ಮಾಡಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ವಿತರಣೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ತಿಳಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಜನರಲ್ಲಿ ವಿನಂತಿಸಿದ್ದಾರೆ.

​ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ | ಸರ್ಕಾರದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಲು ಹಾಗೂ ವಿಶ್ವವಿದ್ಯಾಲಯ ಸ್ಥಾಪಿಸಲು ಒತ್ತಾಯ

ಟಿಪ್ಪು ಸೆಕ್ಯುಲರ್ ಸೇನೆಯ ವತಿಯಿಂದ ಇಂದು ದೇವನಹಳ್ಳಿಯಲ್ಲಿ ಹಜರತ್ ಟಿಪ್ಪು ಸುಲ್ತಾನ್...

ರಾಯಚೂರು | ಲೋಹಿಯಾ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಈರಣ್ಣ ರುದ್ರಾಕ್ಷಿ ಅವರಿಗೆ ಸನ್ಮಾನ

ರಾಯಚೂರು ಲೋಹಿಯ ಪ್ರತಿಷ್ಠಾನದಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಈರಣ್ಣ ರುದ್ರಾಕ್ಷಿ ಅವರಿಗೆ...

ರಾಯಚೂರು | ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚನೆಗೆ ಜೆಡಿಎಸ್ ಆಗ್ರಹ

ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರನ್ನು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ...

ಉಡುಪಿ | ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು: ಜಾನ್ ಆರ್. ಡಿಸಿಲ್ವ

ಇಂದು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಚಾಕಚಕ್ಯತೆಯನ್ನು...