ಉತ್ತರ ಕನ್ನಡ | ನಾಳೆ ಮುಂಡಗೋಡ ಪಟ್ಟಣದಲ್ಲಿ ಬೃಹತ್ ಉದ್ಯೋಗಮೇಳ

Date:

Advertisements

ಉತ್ತರಕನ್ನಡ ಜಿಲ್ಲೆಯ ಮತ್ತು ಮುಂಡಗೋಡು ತಾಲೂಕಿನ ಯುವ ಸಮೂಹಕ್ಕೆ ಉದ್ಯೋಗದ ಅವಕಾಶವನ್ನು ಹೆಚ್ಚಿಸಲು ಮುಂಡಗೋಡು ಪಟ್ಟಣದ ಲೊಯೋಲ ವಿಕಾಸ ಕೇಂದ್ರ (ಎಲ್.ವಿ.ಕೆ) ಸಭಾಂಗಣದಲ್ಲಿ ಅಕ್ಟೋಬರ್ 05, 2024 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದಾರೆ.

ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಜೀವನೋಪಾಯ ಮತ್ತು ಕೌಶಲಾಭಿವೃದ್ಧಿ ಕೇಂದ್ರವು ದೇಶದ ಪ್ರಸಿದ್ಧ ಕಾರ್ಪೋರೇಟ್ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಸಹಭಾಗಿತ್ವದಲ್ಲಿ ಪ್ರತಿಭಾನ್ವಿತ ಯುವ ಸಮೂಹದ ಸಂದರ್ಶನ ನಡೆಸಲಿದ್ದು, ಈಗಾಗಲೇ ಸುಮಾರು 500ಕ್ಕಿಂತ ಹೆಚ್ಚಿನ ಉದ್ಯೋಗಾಂಕ್ಷಿಗಳು ಉದ್ಯೋಗಮೇಳಕ್ಕೆ ನೋಂದಾಯಿಸಿಕೊಂಡಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲಿ, ಎಸ್‌ವಿ ರಿಕ್ರುಟೆಕ್, ಟೋಯೋಟಾ, ಹೊಂಡಾ, ಜಿಯೋ, ಅಮೆಜಾನ್, ಮುತ್ತೂಟ್ ಫೈನಾನ್ಸ್, ಎಸ್‌ಬಿಐ ಲೈಫ್, ಕ್ರೆಡಿಟ್ ಅಕ್ಸೆಸ್, ವಿ-ಜಾಬ್, ಸಿಎಮ್ಸ್, ಎಲ್‌ಬಿಸಿ, ಮುಂತಾದ ಕಾರ್ಪೋರೇಟ್ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಉದ್ಯೋಗದಾತರು ಸಂದರ್ಶನ ನಡೆಸಲಿದ್ದಾರೆ.

Advertisements
IMG 20241004 173426

ಉದ್ಯೋಗ ಮೇಳವನ್ನು ಮುಂಡಗೋಡದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹೀರೇಹಳ್ಳಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ಎಸ್ ರಿಕ್ರುಟೆಕ್, ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಜೀವನ ಕುಮಾರ್, ಮುಂಡಗೋಡ ತಾಲೂಕಿನ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾ ಅಧಿಕಾರಿ, ಟಿ ವಾಯ್ ದಾಸನಕೊಪ್ಪ, ಪಟ್ಟಣದ ಸೆಂಟ್ ರೀಟಾ ಚರ್ಚಚ ನ ಮುಖ್ಯ ಗುರು, ಫಾ.ಗಿಲ್ಬರ್ಟ್ ಸಾಲ್ದಾನಾ, ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಈ ಉದ್ಯೋಗಮೇಳವನ್ನು ಎಲ್‌ವಿಕೆಯ ಜೀವನೋಪಾಯ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರ, ತಾಲೂಕಿನ ವಿವಿಧ ಸಮುದಾಯ ಆಧರಿತ ಸಂಘಟನೆಗಳಾದ ಯುವರತ್ನ ವೇದಿಕೆ, ಜನಸ್ಪೂರ್ತಿ ಸ್ವ-ಸಹಾಯ ಸಂಘಗಳ ಒಕ್ಕೂಟ, ಕಟ್ಟಡ ಕಾರ್ಮಿಕರ ಯೂನಿಯನ್, ಭೂ-ಹಕ್ಕುದಾರರ ಹಿತರಕ್ಷಣಾ ವೇದಿಕೆ ಹಾಗೂ ಜನವೇದಿಕೆ -ಜೊತೆ ಸಂಯುಕ್ತವಾಗಿ ಲೊಯೋಲ ವಿಕಾಸ ಕೇಂದ್ರದ ಸಹಭಾಗಿತ್ವದೊಡನೆ ಆಯೋಜಿಸಿದ್ದು, ಉತ್ತರ ಕನ್ನಡ ಜಿಲ್ಲೆ ಅಷ್ಟೇ ಅಲ್ಲದೆ ಅನ್ಯ ಜಿಲ್ಲೆಗಳ ನಿರುದ್ಯೋಗಿ ಯುವಕರಿಗೂ ಪ್ರಯೋಜನ ಆಗಲಿದೆ ಎಂದು ಸಂಚಾಲಕ ಲಕ್ಷ್ಮಣ ಹೇಳುತ್ತಾರೆ.

ಇದನ್ನೂ ಓದಿ ಗಾಂಧಿ ಕನ್ನಡಕವನ್ನು ಬಳಸಿ ಗಾಂಧಿ ತತ್ವವನ್ನು ಗಾಳಿಗೆ ತೂರಿದವರು

ಉದ್ಯೋಗ ಮೇಳ ನಡೆಯುವ ಸ್ಥಳ: ವಿವೇಕಾನಂದ ಬಯಲು ರಂಗ ಮಂದಿರ, ಸಂತೆ ಮಾರ್ಕೆಟ್, ಪಟ್ಟಣ ಪಂಚಾಯತಿ ಹತ್ತಿರ, ಮುಂಡಗೋಡ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X