ಉತ್ತರ ಕನ್ನಡ | ಅಳ್ವೇಕೋಡಿ ಕಡಲ ತೀರದಲ್ಲಿ ದಾರುಣ ದುರಂತ: ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ

Date:

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ಸಮುದ್ರ ತೀರದಲ್ಲಿ ಭಾನುವಾರ ಭೀಕರ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಎಂಟು ಮಂದಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ಮೃತಪಟ್ಟಿದ್ದಾರೆ. ಇನ್ನೂ ಮೂವರು ನಾಪತ್ತೆಯಾಗಿರುವುದು ಆತಂಕ ಹೆಚ್ಚಿಸಿದೆ.

- Advertisement -

ಈ ಭೀಕರ ಅವಘಡದಲ್ಲಿ ಪ್ರಾಣ ಕಳೆದುಕೊಂಡ ಎಂಟೂ ಜನರೂ ಭಟ್ಕಳ ತಾಲೂಕಿನ ಸಾರದಹೊಳೆಯ ಹೆರಿಹಿತ್ಲು ಮೂಲದ ಒಂದೇ ಕುಟುಂಬದವರಾಗಿದ್ದಾರೆ. ರಜಾದಿನದ ಹಿನ್ನೆಲೆಯಲ್ಲಿ ಒಟ್ಟು 13 ಮಂದಿ ಸೇರಿ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಕೆಲವರು ಚಿಪ್ಪು ಸಂಗ್ರಹಿಸಲು ಸಮುದ್ರಕ್ಕೆ ಇಳಿದಾಗ, ಅಕಸ್ಮಾತ್ ಏರಿದ ದೈತ್ಯ ಅಲೆಗಳ ಸೆಳೆತಕ್ಕೆ ಸಿಲುಕಿ ಹಲವರು ನೀರಿನಲ್ಲಿ ಕಾಣೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಸ್ಥಳೀಯರ ಪ್ರಕಾರ, ನೀರಿಗೆ ಇಳಿದಿದ್ದವರು ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದುಕೊಂಡು ಸಾಗುತ್ತಿದ್ದರು. ಆದರೆ ಹಿಂದಿನ ದಿನ ಸುರಿದ ಭಾರಿ ಮಳೆಯಿಂದಾಗಿ ಹೊಳೆಯಲ್ಲಿ ನೀರಿನ ಹರಿವು ತೀವ್ರವಾಗಿತ್ತು. ಇದೇ ವೇಳೆ ಸಮುದ್ರದ ಅಲೆಗಳ ಅಬ್ಬರವೂ ಜೋರಾಗಿದ್ದರಿಂದ ನೀರಿನ ಮಟ್ಟ ದಿಢೀರನೆ ಏರಿಕೆಯಾಗಿದೆ. ನೀರಿನ ರಭಸಕ್ಕೆ ಸಿಲುಕಿ ಸಮತೋಲನ ಕಳೆದುಕೊಂಡ ಕೆಲವರು ಆಳಕ್ಕೆ ಕೊಚ್ಚಿ ಹೋಗಿದ್ದಾರೆ. ಈ ವೇಳೆ ಮುಳುಗುತ್ತಿದ್ದವರನ್ನು ರಕ್ಷಿಸಲು ಹೋದ ಕುಟುಂಬದ ಉಳಿದವರೂ ನೀರಿನ ಸೆಳೆತಕ್ಕೆ ಸಿಲುಕಿದ್ದರಿಂದ ದುರಂತದ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ ಹಾಗೂ ಮುಂಡಗೋಡನಲ್ಲಿ ನೀಟ್ ಪರೀಕ್ಷೆ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಈ ಅವಘಡದಲ್ಲಿ ಮೃತಪಟ್ಟ ಎಂಟು ಮಂದಿಯೂ ಒಂದೇ ಕುಟುಂಬಕ್ಕೆ ಸೇರಿದವರು ಎಂದು ತಿಳಿದುಬಂದಿದೆ. ನಾಪತ್ತೆಯಾದ ಮೂವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೃತದೇಹಗಳಲ್ಲಿ ಆರು ಮಂದಿಯ ಶವಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಇನ್ನೆರಡು ಮೃತದೇಹಗಳನ್ನು ಆರ್.ಎನ್.ಎಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಘಟನೆಯಲ್ಲಿ ನಾಗರತ್ನಾ ಮತ್ತು ಮಹಾದೇವಿ ಎಂಬ ಇಬ್ಬರು ಮಹಿಳೆಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಒಂದೇ ಮನೆಯ ಎಂಟು ಜೀವಗಳು ಬಲಿಯಾದ ವಿಷಯ ತಿಳಿಯುತ್ತಿದ್ದಂತೆ ಪಡುಶಿರಾಲಿ, ಶಾರದಾಹೊಳೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ. ಮನೆಗೆ ಮರಳಬೇಕಿದ್ದ ಕುಟುಂಬ ಸದಸ್ಯರು ಶವವಾಗಿ ಬಂದಿರುವ ದೃಶ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಮುಂದುವರಿಸುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...