ಉತ್ತರ ಕನ್ನಡ | ಮೇಲ್ಘಟ್ಟದ ತಾಲೂಕುಗಳು ಧಾರವಾಡ ಪೀಠದಲ್ಲೇ ಇರಲಿ: ಸರ್ಕಾರಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಪತ್ರ

Date:

ಉತ್ತರ ಕನ್ನಡ: ಮಂಗಳೂರಿನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ ಪೀಠವನ್ನು ಸ್ಥಾಪಿಸುವ ಕುರಿತು ಸದ್ಯ ಗಂಭೀರ ಚರ್ಚೆಗಳು ನಡೆಯುತ್ತಿದ್ದು, ಈ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಹಾಗೂ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿರುವ ಮಾಹಿತಿ ಲಭ್ಯವಾಗಿದೆ.

- Advertisement -

ಹಾಗೂ ಇದೇ ಸಂದರ್ಭದಲ್ಲಿ ಘಟ್ಟದ ಮೇಲಿನ ತಾಲ್ಲೂಕುಗಳನ್ನು ಧಾರವಾಡ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸಬೇಕು ಎಂಬ ಒತ್ತಾಯವೂ ಕೂಡ ವ್ಯಕ್ತವಾಗಿದೆ. ಈ ಸಂಬಂಧ ಯಲ್ಲಾಪುರ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ ಅವರು, ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಡಿ ಕೆ ಶಿವಕುಮಾರ್, ಹಿರಿಯ ನಾಯಕ ಆರ್.ವಿ ದೇಶಪಾಂಡೆ ಹಾಗೂ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಪತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ಪ್ರಮುಖ ತಾಲ್ಲೂಕುಗಳಾದ ಜೋಯಿಡಾ, ದಾಂಡೇಲಿ, ಹಳಿಯಾಳ, ಯಲ್ಲಾಪುರ, ಮುಂಡಗೋಡ, ಶಿರಸಿ ಮತ್ತು ಸಿದ್ದಾಪುರ ಪ್ರದೇಶಗಳು ಮಂಗಳೂರಿನಿಂದ ದೂರವಿದ್ದು, ಆಡಳಿತಾತ್ಮಕವಾಗಿ ಹಾಗೂ ಆರ್ಥಿಕವಾಗಿ ಧಾರವಾಡದೊಂದಿಗೆ ಹೆಚ್ಚು ಸಂಪರ್ಕ ಹೊಂದಿವೆ

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ ಹಾಗೂ ಮುಂಡಗೋಡನಲ್ಲಿ ನೀಟ್ ಪರೀಕ್ಷೆ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಹಲವು ವರ್ಷಗಳಿಂದ ಈ ಭಾಗದ ಜನರು ನ್ಯಾಯಾಂಗ ಸಂಬಂಧಿತ ವಿಚಾರಗಳಿಗೆ ಧಾರವಾಡ ಪೀಠವನ್ನೇ ಅವಲಂಬಿಸಿಕೊಂಡಿದ್ದಾರೆ. ಒಂದು ವೇಳೆ ಈ ತಾಲೂಕುಗಳನ್ನು ಮಂಗಳೂರು ಪೀಠದ ವ್ಯಾಪ್ತಿಗೆ ಒಳಪಡಿಸಿದರೆ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗುವುದಲ್ಲದೆ, ಸುದೀರ್ಘ ಪ್ರಯಾಣದ ತೊಂದರೆಯೂ ಎದುರಾಗಲಿದೆ.

ಆದ್ದರಿಂದ, ಸಾರ್ವಜನಿಕರ ಹಿತದೃಷ್ಟಿ, ನ್ಯಾಯದ ಸುಲಭ ಲಭ್ಯತೆ ಹಾಗೂ ಪರಿಣಾಮಕಾರಿ ನ್ಯಾಯಾಂಗ ವ್ಯವಸ್ಥೆಯ ಹಿತದೃಷ್ಟಿಯಿಂದ ಮೇಲ್ಘಟ್ಟದ ತಾಲೂಕುಗಳನ್ನು ಧಾರವಾಡ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸುವುದು ಅತ್ಯಂತ ಸೂಕ್ತವಾಗಿದೆ ಎಂದು ಶಾಸಕರು ಪತ್ರದಲ್ಲಿ ವಿವರಿಸಿದ್ದಾರೆ.

ಹೀಗಾಗಿ, ಘಟ್ಟದ ಮೇಲಿನ ತಾಲ್ಲೂಕುಗಳನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಧಾರವಾಡ ಪೀಠದ ಅಧೀನದಲ್ಲೇ ಮುಂದುವರಿಸಲು ಸರ್ಕಾರ ಹಾಗೂ ಹೈಕೋರ್ಟ್ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಶಾಸಕರು ಪತ್ರದ ಮೂಲಕ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...

ರಾಯಚೂರು | ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವಕ್ಕೆ ಎನ್‌.ಎಸ್.ಬೋಸರಾಜು ಶುಭ ಹಾರೈಕೆ

ನಾಳೆ ನ. 29ರಂದು ನಡೆಯಲಿರುವ ರಾಯಚೂರು ರಿಪೋರ್ಟಸ ಗಿಲ್ಡ್‌ನ 25ನೇ ವರ್ಷದ...