ಉತ್ತರ ಕನ್ನಡ| ಗ್ರಾಮಸ್ಥರ ಸತ್ಯಾಗ್ರಹಕ್ಕೆ ತೆರೆ: ಅಧಿಕಾರಿಗಳ ಭರವಸೆಯ ಮೇಲೆ ಹೋರಾಟಕ್ಕೆ ತಾತ್ಕಾಲಿಕ ವಿರಾಮ

Date:

ಉತ್ತರ ಕನ್ನಡ ಜಿಲ್ಲೆಯ ಜೋಯಡಾ ತಾಲ್ಲೂಕಿನ ತಹಶೀಲದಾರ ಕಚೇರಿ ಎದುರು ಎರಡು ದಿನಗಳಿಂದ ಗ್ರಾಮಸ್ಥರು ನಡೆಸುತ್ತಿದ್ದ ಅಹೋರಾತ್ರಿ ಸತ್ಯಾಗ್ರಹಕ್ಕೆ ಮಂಗಳವಾರ ಕೊನೆ ದೊರಕಿದೆ. ಮೂಲಭೂತ ಸೌಕರ್ಯಕ್ಕಾಗಿ ಗ್ರಾಮಸ್ಥರು ಮಾಡುತ್ತಿದ್ದ ಧರಣಿಗೆ ತಾಲೂಕು ಅಧಿಕಾರಿಗಳು ಸ್ಪಂದಿಸಿದ್ದು, ರೈತ ಸಂಘದ ನಾಯಕರ ಹಾಗೂ ಗ್ರಾಮ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳನ್ನು ಈಡೇರಿಸುವ ಕುರಿತು ಭರವಸೆ ನೀಡಿ ಪ್ರತಿಭಟನೆಯನ್ನು ಕೈ ಬಿಡುವಂತೆ ಮನವೊಲಿಸಲಾಗಿದೆ.

- Advertisement -

ಸಭೆಯಲ್ಲಿ ಗ್ರಾಮಸ್ಥರ ಪ್ರಮುಖ ಬೇಡಿಕೆಗಳಾದ ರಸ್ತೆ, ಬಸ್‌ಸೇವೆ, ಸಂಪರ್ಕ ಸೌಲಭ್ಯ ಹಾಗೂ ಅರಣ್ಯ ಇಲಾಖೆಯ ತೊಡಕುಗಳ ಕುರಿತು ಚರ್ಚೆ ನಡೆಯಿತು. ಅಧಿಕಾರಿಗಳು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಗ್ರಾಮಸ್ಥರು ಹೋರಾಟವನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡರು. ಆದರೆ, ಮೂರು ವಾರಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಜೋಯಡಾದಿಂದ ಹಳಿಯಾಳ ಶಾಸಕರ ಮನೆವರೆಗೆ ಪಾದಯಾತ್ರೆ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಭೆಯಲ್ಲಿ ನೀಡಲಾದ ಪ್ರಮುಖ ಭರವಸೆಗಳು: ಕಿರವತ್ತಿ–ಕಾರ್ಟೋಳಿ–ಡಿಗ್ಗಿ–ಗೋವಾ ಗಡಿ ರಸ್ತೆ: ಕಾಮಗಾರಿ ನವೆಂಬರ್ 25ರಿಂದ ಪ್ರಾರಂಭಿಸುವ ಭರವಸೆ. ಡಿಗ್ಗಿ–ವಾಗೇಲಿ ರಸ್ತೆ: ಡಾಂಬರೀಕರಣಕ್ಕಾಗಿ ಪ್ರಸ್ತಾವನೆ ಸಲ್ಲಿಕೆ. ಕಿರವತ್ತಿ, ತೆರಾಳಿ, ಸಿಸೈ, ದುಧಮಾಳ ರಸ್ತೆ: ಗ್ರಾಮಪಂಚಾಯಿತಿ ಮತ್ತು ತಾಪಂ ಮಟ್ಟದಲ್ಲಿ ಯೋಜನೆ ರೂಪಿಸಲು ಸೂಚನೆ. ಗ್ರಾಮ ಬಸ್‌ಸೇವೆ: ಜೋಯಡಾದಿಂದ ಕಾರ್ಟೋಳಿ ಹಾಗೂ ಕುಂಡಲ ವಸತಿ ಮಾರ್ಗದಲ್ಲಿ ಬಸ್ ಸೇವೆ ಪ್ರಾರಂಭಿಸಲು ಕ್ರಮ. ಸಂಪರ್ಕ ಸೇವೆ: 17 ಬಿಎಸ್‌ಎನ್‌ಎಲ್ ಟವರ್‌ಗಳಿಗೆ ತ್ವರಿತ ಸಂಪರ್ಕ ಕಲ್ಪಿಸುವ ಭರವಸೆ. ಅರಣ್ಯ ಇಲಾಖೆಯ ತೊಡಕುಗಳು: ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಯಾಗದಂತೆ ಕ್ರಮ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ

ಕುಣಬಿ ಸಮುದಾಯದ ಪರಿಶಿಷ್ಟ ಪಂಗಡ ಸೇರಿಕೆ: ಅದು ಕೇಂದ್ರ ಸರ್ಕಾರದ ನಿರ್ಧಾರದ ಮೇಲೆ ಇದೆ ಎಂದು ತಹಶೀಲದಾರರು ಸ್ಪಷ್ಟಪಡಿಸಿದರು. ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆಗೆ ರೈತ ಸಂಘದ ನಾಯಕರು, ಯಮುನಾ ಗಾಂವಕರ, ಪ್ರೇಮಾನಂದ ವೇಳಿಪ್, ತಿಲಕ್ ಗೌಡ, ಡಿ. ಸ್ಯಾಮ್ಸನ್ ಹಾಗೂ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...