ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ ಅಂತಿಮ ಹಂತ: 95,264 ಹೆಸರುಗಳು ಪಟ್ಟಿಯಿಂದ ಹೊರಕ್ಕೆ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಪ್ರಕ್ರಿಯೆ ಅಂತಿಮ ಹಂತದತ್ತ ಸಾಗಿದ್ದು, ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸಿದ ಬಳಿಕ 95,264 ಮತದಾರರನ್ನು ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಸೇರಿದಂತೆ ವಿವಿಧ ಕಾರಣಗಳಿಗೆ ಪಟ್ಟಿಯಿಂದ ಹೊರಗಿಡಲು ಗುರುತಿಸಲಾಗಿದೆ.

“ಜಿಲ್ಲೆಯ ಒಟ್ಟು 12,30,037 ಮತದಾರರಿಗೆ ಎನ್ಯುಮರೇಷನ್ ಫಾರ್ಮ್ ವಿತರಿಸಲಾಗಿದ್ದು, ಇದುವರೆಗೆ 11,15,968 ಫಾರ್ಮ್‌ಗಳನ್ನು ಗಣಕೀಕರಣ ಮಾಡಲಾಗಿದೆ” ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

- Advertisement -

ಜಿಲ್ಲೆಯಲ್ಲಿ ಗುರುತಿಸಲಾದ 95,264 ಪ್ರಕರಣಗಳಲ್ಲಿ 37,883 ಮಂದಿ ಶಾಶ್ವತವಾಗಿ ವಲಸೆ ಹೋಗಿರುವವರು, 42,251 ಮಂದಿ ಮೃತಪಟ್ಟವರು ಹಾಗೂ 11,109 ಮಂದಿ ದ್ವಿಪ್ರತಿ ಮತದಾರರು ಸೇರಿದ್ದಾರೆ. ಈ ಅಂಕಿ-ಅಂಶಗಳು ಕರಡು ಮತದಾರರ ಪಟ್ಟಿಯ ಸಿದ್ಧತೆಗೆ ಆಧಾರವಾಗಲಿದ್ದು, ನೈಜ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಉಳಿದಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಅಗತ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಉತ್ತರ ಕನ್ನಡದ ವಿಶೇಷ ಭೌಗೋಳಿಕ ಪರಿಸ್ಥಿತಿಯೇ ಈ ಪ್ರಕ್ರಿಯೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ದುಡಿಮೆಗಾಗಿ ಕೇರಳ, ಗೋವಾ, ಹುಬ್ಬಳ್ಳಿ ಸೇರಿದಂತೆ ವಿವಿಧ ನಗರಗಳಿಗೆ ವಲಸೆ ತೆರಳಿರುವ ಕುಟುಂಬಗಳು, ಗುಡ್ಡಗಾಡು ಪ್ರದೇಶದಲ್ಲಿ ಸರಿಯಾದ ರಸ್ತೆ ಸಂಪರ್ಕಗಳಿಲ್ಲದ ಹಳ್ಳಿಗಳು ಒಂದೆಡೆಯಾದರೆ, ನಿರಂತರ ಸುರಿಯುತ್ತಿರುವ ಮಳೆಯಿಂದ ಹಲವು ಗ್ರಾಮಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಉಂಟಾಗಿದೆ ಈ ಪರಿಸ್ಥಿತಿಗಳು ಬಿಎಲ್‌ಒಗಳ ಕೆಲಸವನ್ನು ಮತ್ತಷ್ಟು ಕಠಿಣಗೊಳಿಸಿವೆ.

ಈ ಕುರಿತು ಈದಿನ.ಕಾಮ್‌ ಜೊತೆಗೆ ಮಾತನಾಡಿದ ಬಿಎಲ್‌ಒಗಳು, “ಮನೆ ಮನೆಗೆ ತೆರಳಿದಾಗ ಮತದಾರರ ಪಟ್ಟಿಯಲ್ಲಿರುವ ಹಲವರು ಕೆಲಸದ ನಿಮಿತ್ತ ಹೊರರಾಜ್ಯ, ಹೊರ ಜಿಲ್ಲೆಗಳಲ್ಲಿ ಇರುವುದರಿಂದ ಅವರನ್ನು ನೇರವಾಗಿ ಭೇಟಿ ಮಾಡಿ ಎನ್ಯುಮರೇಷನ್ ಫಾರ್ಮ್ ಭರ್ತಿ ಮಾಡಿಸುವುದು ಕಷ್ಟವಾಗಿದೆ. ಮಳೆ ಮತ್ತು ನೆಟ್‌ವರ್ಕ್ ಸಮಸ್ಯೆಯೂ ಕಾರ್ಯಾಚರಣೆಗೆ ಅಡ್ಡಿಯಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲೂ ಎಸ್‌ಐಆರ್ ಕಾರ್ಯ ನಡೆಯುತ್ತಿದ್ದು, ಕಾರವಾರ ಕ್ಷೇತ್ರದಲ್ಲಿ ಒಟ್ಟು 2,23,390 ಮತದಾರರಲ್ಲಿ 1,97,913 ಫಾರ್ಮ್‌ಗಳನ್ನು ಗಣಕೀಕರಣ ಮಾಡಲಾಗಿದೆ. ಈ ಕ್ಷೇತ್ರದಲ್ಲಿ 22,718 ಮತದಾರರನ್ನು ಸ್ಥಳಾಂತರ, ಮರಣ ಹಾಗೂ ದ್ವಿಪ್ರತಿ ಪ್ರಕರಣಗಳಿಗೆ ಗುರುತಿಸಲಾಗಿದ್ದು, ಇವರಲ್ಲಿ 8,909 ಮಂದಿ ವಲಸೆ, 8,654 ಮಂದಿ ಮೃತರು ಹಾಗೂ 3,554 ಮಂದಿ ದ್ವಿಪ್ರತಿ ಮತದಾರರು ಸೇರಿದ್ದಾರೆ.

“ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,92,055 ಮತದಾರರಿದ್ದು, 1,77,217 ಫಾರ್ಮ್‌ಗಳು ಗಣಕೀಕರಣಗೊಂಡಿವೆ. ಇಲ್ಲಿ 14,838 ಪ್ರಕರಣಗಳು ಗುರುತಿಸಲಾಗಿದ್ದು, 6,003 ಮಂದಿ ವಲಸೆ, 7,221 ಮಂದಿ ಮೃತರು ಹಾಗೂ 1,091 ಮಂದಿ ದ್ವಿಪ್ರತಿ ಮತದಾರರು” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ ಪಕ್ಷ, ಎಸ್‌ಐಆರ್ ಪ್ರಕ್ರಿಯೆಯ ಸುಗಮ ಅನುಷ್ಠಾನಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಉಸ್ತುವಾರಿಯಾಗಿ ಶಿರಸಿ ಶಾಸಕ ಭೀಮಣ್ಣ ನಾಯ್ಕರನ್ನು ನೇಮಿಸಿದೆ. ಜಿಲ್ಲೆಯ ಎಲ್ಲಾ ಆರು ವಿಧಾನಸಭಾ ಕ್ಷೇತ್ರಗಳಿಗೂ ಪ್ರತ್ಯೇಕ ಉಸ್ತುವಾರಿ ಶಾಸಕರನ್ನು ನಿಯೋಜಿಸಲಾಗಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ, ಹೆಸರು ಕೈಬಿಟ್ಟಿರುವ ಅನುಮಾನ ಅಥವಾ ಮಾಹಿತಿ ಕೊರತೆ ಇದ್ದರೆ ಸಾರ್ವಜನಿಕರು ತಮ್ಮ ಕ್ಷೇತ್ರದ ಉಸ್ತುವಾರಿ ಹಾಗೂ ಬಿಎಲ್ಎ ಗಳನ್ನು ನೇರವಾಗಿ ಸಂಪರ್ಕಿಸಿ ನೆರವು ಪಡೆಯುವಂತೆ ಕಾಂಗ್ರೆಸ್ ಪಕ್ಷ ಮನವಿ ಮಾಡಿದೆ.

ಈಗ ಎಸ್‌ಐಆರ್ ಪ್ರಕ್ರಿಯೆ ಅಂತಿಮ ಹಂತದಲ್ಲಿರುವುದರಿಂದ, ಪ್ರತಿಯೊಬ್ಬ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸುರಕ್ಷಿತವಾಗಿದೆಯೇ ಎಂಬುದನ್ನು ಪರಿಶೀಲಿಸಿ, ಅಗತ್ಯವಿದ್ದರೆ ತಕ್ಷಣ ಕ್ರಮ ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ.

ಉತ್ತರ ಕನ್ನಡದಂತಹ ವಿಶಾಲ ಹಾಗೂ ದುರ್ಗಮ, ಗುಡ್ಡಗಾಡು ಜಿಲ್ಲೆಯಲ್ಲಿ ಬಿಎಲ್‌ಒಗಳು ಹಲವು ಕಠಿಣ ಸವಾಲುಗಳ ನಡುವೆಯೂ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರ ಸಹಕಾರವೇ ಅಂತಿಮ ಮತದಾರರ ಪಟ್ಟಿಯ ನಿಖರತೆಗೆ ಪ್ರಮುಖ ಕಾರಣವಾಗಿದೆ.

+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆ ಪ್ರತಾಪ್ ಸಿಂಹಗೆ ಇದೆಯೇ? ಮೈಲಾಂಡಹಳ್ಳಿ ಮುರಳಿ ತಿರುಗೇಟು

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ನೈತಿಕತೆಯೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ...

ರಾಯಚೂರು | ಎಡಿಸಿ ಶಿವಪ್ಪ ಭಜಂತ್ರಿ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

ರಾಯಚೂರು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ, ಗ್ರೇಡ್-1 ತಹಶೀಲ್ದಾರ್ ಸುರೇಶ್ ವರ್ಮಾ,...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19 ಸೀಟು ಹಾಗೂ ನೆತನ್ಯಾಹು ಭವಿಷ್ಯ…

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ...