ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ: ಶೇ.99ಕ್ಕೂ ಅಧಿಕ ಎನ್ಯುಮರೇಷನ್ ಫಾರ್ಮ್‌ಗಳ ವಿತರಣೆ

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (SIR) ಕಾರ್ಯದ ಅಂಗವಾಗಿ ಎನ್ಯುಮರೇಷನ್ ಫಾರ್ಮ್‌ಗಳ ವಿತರಣೆಯಲ್ಲಿ ಶೇ.99ಕ್ಕೂ ಅಧಿಕ ಪ್ರಗತಿ ಸಾಧಿಸಲಾಗಿದ್ದು, ಫಾರ್ಮ್ ಭರ್ತಿ ಮಾಡುವ ವೇಳೆ ಯಾವುದೇ ಗೊಂದಲಗಳಿದ್ದರೆ ಮತದಾರರು ಉಚಿತ ಸಹಾಯವಾಣಿ 08382-1950 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

- Advertisement -

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ ಮನೆಗೆ ತೆರಳಿ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಿದ್ದಾರೆ. ಮತದಾರರಿಗೆ ಫಾರ್ಮ್ ಭರ್ತಿ ಮಾಡಲು ನೆರವಾಗುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಮತದಾರರ ಸಹಾಯ ಕೇಂದ್ರಗಳನ್ನು ಆರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮತದಾರರು ಈ ಕೇಂದ್ರಗಳ ಸೇವೆ ಪಡೆದು, ಅಗತ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತಮ್ಮ ಗೊಂದಲಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ಜಿಲ್ಲೆಯಿಂದ ವಲಸೆ ಹೋಗಿರುವ ಮತದಾರರ ಮನೆಗಳಿಗೂ ಎನ್ಯುಮರೇಷನ್ ಫಾರ್ಮ್‌ಗಳನ್ನು ವಿತರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಆರತಿಬೈಲು ಬಳಿ ಭೀಕರ ಅಪಘಾತ; ಪ್ರವಾಸಕ್ಕೆ ಹೊರಟಿದ್ದ ಧಾರವಾಡದ ಆರು ಮಂದಿ ದುರ್ಮರಣ

ಇಂತಹ ಮತದಾರರು ಆನ್‌ಲೈನ್ ಮೂಲಕವೂ ಫಾರ್ಮ್ ಭರ್ತಿ ಮಾಡಿ ಸಲ್ಲಿಸಲು ಅವಕಾಶವಿದೆ. ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಅಗತ್ಯವಿದ್ದಲ್ಲಿ ಮತದಾರರ ಹೆಸರನ್ನು ಬೇರೆ ಕ್ಷೇತ್ರಕ್ಕೆ ವರ್ಗಾವಣೆ ಮಾಡಿಸಿಕೊಳ್ಳಬಹುದು. ಆದರೆ ಫಾರ್ಮ್ ಪಡೆದ ಪ್ರತಿಯೊಬ್ಬ ಮತದಾರರೂ ಅದನ್ನು ಕಡ್ಡಾಯವಾಗಿ ಭರ್ತಿ ಮಾಡಿ ಹಿಂದಿರುಗಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕಾರ್ಯದ ಪ್ರಗತಿ ಕುರಿತು ಸಂಪೂರ್ಣ ಮಾಹಿತಿಯನ್ನು ಎಲ್ಲಾ ರಾಜಕೀಯ ಪಕ್ಷಗಳಿಗೆ ನಿಯಮಿತವಾಗಿ ನೀಡಲಾಗುತ್ತಿದೆ. ಮನೆ ಮನೆ ಭೇಟಿ ವೇಳೆ ಪತ್ತೆಯಾಗಿರುವ ಸ್ಥಳಾಂತರ, ಮರಣ, ದ್ವಿಪ್ರತಿ ಹೆಸರು ಸೇರಿದಂತೆ ವಿವಿಧ ವಿವರಗಳನ್ನು ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಪರಿಶೀಲಿಸಿ, ಯಾವುದೇ ಗೊಂದಲಗಳಿದ್ದರೆ ತಕ್ಷಣವೇ ಅಧಿಕಾರಿಗಳ ಗಮನಕ್ಕೆ ತರಬೇಕು. ಹಾಗೂ ಈ ಕಾರ್ಯ ಯಶಸ್ವಿಯಾಗಲು ಎಲ್ಲಾ ರಾಜಕೀಯ ಪಕ್ಷಗಳು ಅಗತ್ಯ ಸಹಕಾರ ನೀಡುವಂತೆ ಅವರು ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆ. ಶಂಭುಶೆಟ್ಟಿ, ಸಿಪಿಐ(ಎಂ)ನ ಶಾಂತಾರಾಮ ನಾಯಕ್, ಸಿಪಿಎಂನ ಯಮುನಾ ಗಾಂವಕರ್, ಬಿಜೆಪಿ ಪ್ರತಿನಿಧಿ ಎನ್.ಎಸ್. ಹೆಗಡೆ, ಜೆಡಿಎಸ್‌ನ ಸೂರಜ್ ನಾಯ್ಕ ಸೋನಿ, ಉದಯ ಭೋವಿ, ಚುನಾವಣಾ ಶಾಖೆಯ ಶಿರಸ್ತೇದಾರ್ ಶೇಖ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...