ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ (SIR) ಆರಂಭ; ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಭಾಗಿ

Date:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ಮಂಗಳವಾರದಿಂದ ಆರಂಭಗೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಚಾಲನೆ ದೊರೆತಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಹಕಾರ ನೀಡಿದರು.

- Advertisement -

ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ ಅವರ ನಿವಾಸಕ್ಕೆ ಶಿರಸಿ ಉಪ ವಿಭಾಗದ ಸಹಾಯಕ ಆಯುಕ್ತ ಚಂದ್ರಶೇಖರ್ ಆರ್., ತಹಶೀಲ್ದಾರ್ ಪುಟ್ಟರಾಜು ಗೌಡ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ, ಕುಟುಂಬದ ಮತದಾರರ ಮಾಹಿತಿಯನ್ನು ಪರಿಶೀಲಿಸಿ, ನಿಯಮಾನುಸಾರ ಅಗತ್ಯ ಪರಿಷ್ಕರಣೆ ಪ್ರಕ್ರಿಯೆ ಪೂರ್ಣಗೊಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ಟಿ. ನಾಯ್ಕ, ಮತದಾನವು ಪ್ರತಿಯೊಬ್ಬ ನಾಗರಿಕನ ಪವಿತ್ರ ಹಕ್ಕು ಹಾಗೂ ಕರ್ತವ್ಯವಾಗಿದ್ದು, 18 ವರ್ಷ ಪೂರ್ಣಗೊಂಡ ಅರ್ಹ ಯುವಜನರು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಮನೆ ಮನೆಗೆ ಭೇಟಿ ನೀಡುವ ಬಿಎಲ್‌ಒ ಅಧಿಕಾರಿಗಳಿಗೆ ಅಗತ್ಯ ದಾಖಲೆಗಳನ್ನು ನೀಡಿ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಚುರುಕುಗೊಂಡ ಮಳೆ; ರೈತರ ಮೊಗದಲ್ಲಿ ಮಂದಹಾಸ, ಜಲಾಶಯಗಳ ನೀರಿನ ಮಟ್ಟ ಏರಿಕೆ

ಇದೇ ವೇಳೆ ಲೋಕಸಭಾ ಕ್ಷೇತ್ರದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಹ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ತಮ್ಮ ಮತದಾರರ ವಿವರಗಳ ಪರಿಷ್ಕರಣೆಗೆ ಸಂಬಂಧಿಸಿದ ನಿಗದಿತ ನಮೂನೆಯನ್ನು ಭರ್ತಿ ಮಾಡಿ ಬಿಎಲ್‌ಒ ಅಧಿಕಾರಿಗಳಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಿರಸಿ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.

ಕುಮಟಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರ ಕುಟುಂಬದ ಸದಸ್ಯರಿಗೆ ಅಧಿಕಾರಿಗಳು ಎನ್ಯೂಮರೇಶನ್ ನಮೂನೆಗಳನ್ನು ವಿತರಿಸಿ ಭರ್ತಿ ಮಾಡಿಸಿಕೊಂಡರು. ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ಅವರ ನಿವಾಸಕ್ಕೂ ಭೇಟಿ ನೀಡಿದ ಅಧಿಕಾರಿಗಳು ಎನ್ಯೂಮರೇಶನ್ ಫಾರ್ಮ್ ವಿತರಿಸಿ, ಎಸ್‌ಐಆರ್ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಇನ್ನೊಂದೆಡೆ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ತಮ್ಮ ನಿವಾಸಗಳಲ್ಲಿ ಬಿಎಲ್‌ಒ ಅಧಿಕಾರಿಗಳಿಂದ ಎನ್ಯೂಮರೇಶನ್ ಫಾರ್ಮ್ ಸ್ವೀಕರಿಸಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.

ಜೊಯಿಡಾ ತಾಲೂಕಿನ ಚಾಪೋಲಿ (ಕ) ಗ್ರಾಮದ 100 ವರ್ಷ ದಾಟಿದ ಶತಾಯುಷಿ ಮಹಾದೇವ ಅಪ್ಪು ನಾಯ್ಕ ಅವರ ಮನೆಗೂ ಅಧಿಕಾರಿಗಳು ಭೇಟಿ ನೀಡಿ, ಎಸ್‌ಐಆರ್ ಎನ್ಯೂಮರೇಶನ್ ಫಾರ್ಮ್ ಹಸ್ತಾಂತರಿಸಿದರು. ಜೋಯಿಡಾ ತಹಶೀಲ್ದಾರ್ ಅವರು ಯೋಜನೆಯ ಉದ್ದೇಶ ಹಾಗೂ ನಮೂನೆಯನ್ನು ಭರ್ತಿ ಮಾಡುವ ವಿಧಾನವನ್ನು ವಿವರಿಸಿ ಮಾಹಿತಿ ನೀಡಿದರು.

ಜಿಲ್ಲೆಯಾದ್ಯಂತ ಆರಂಭಗೊಂಡಿರುವ ಈ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿಎಲ್‌ಒ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾರರ ವಿವರಗಳನ್ನು ಪರಿಶೀಲಿಸುತ್ತಿದ್ದು, ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಒದಗಿಸಿ ಸಹಕರಿಸುವಂತೆ ಚುನಾವಣಾ ಇಲಾಖೆ ಮನವಿ ಮಾಡಿದೆ. ವಿಶೇಷವಾಗಿ ಹೊಸದಾಗಿ 18 ವರ್ಷ ಪೂರ್ಣಗೊಂಡ ಅರ್ಹ ಯುವ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಿಕೊಳ್ಳುವಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಬರದ ಹೊಡೆತಕ್ಕೆ ಬೆಳೆ ನಷ್ಟ, ಸಾಲದ ಹೊರೆ; ರೈತ ಆತ್ಮಹತ್ಯೆ

ಮಳೆ ಕೈಕೊಟ್ಟು ಬೆಳೆ ನಿರೀಕ್ಷಿತ ಪ್ರಮಾಣದಲ್ಲಿ ಬಾರದ ಹಿನ್ನೆಲೆಯಲ್ಲಿ ಸಾಲದ ಹೊರೆ...

ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ದಾರಿದೀಪ ಅವ್ಯವಸ್ಥೆ: ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಮನವಿ

ಉಡುಪಿ ನಗರಸಭೆ ವ್ಯಾಪ್ತಿಯ ಗ್ರಾಮಾಂತರ ಹಾಗೂ ನಗರ ಪ್ರದೇಶಗಳಲ್ಲಿ ಹದಗೆಟ್ಟಿರುವ ದಾರಿದೀಪ...

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...