ಉತ್ತರ ಕನ್ನಡ | ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ: ಶರಾವತಿ ತಗ್ಗು ಪ್ರದೇಶದ ಜನರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ

Date:

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಲಿಂಗನಮಕ್ಕಿ ಜಲಾಶಯದಿಂದ ಆಗಸ್ಟ್‌ 19ರಂದು ಬೆಳಿಗ್ಗೆ 10 ಗಂಟೆಯಿಂದ ಹೊರಬಿಡಲಾಗುವುದೆಂದು ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರರು ಕೆಪಿಸಿ ಲಿಂಗನಮಕ್ಕಿಯವರು ಆಗಸ್ಟ್‌ 18ರಂದು ತಿಳಿಸಿದ್ದು, ಸಾರ್ವಜನಿಕರು ಈ ಮುಂದಿನಂತೆ ಸೂಚನೆಗಳನ್ನು ಪಾಲಿಸುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮಿಪ್ರಿಯಾ ಕೆ ತಿಳಿಸಿದ್ದಾರೆ.

- Advertisement -

“ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಅವರ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಆಗಸ್ಟ್‌ 20 ಬೆಳಿಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿರುತ್ತದೆ. ಲಿಂಗನಮಕ್ಕಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ಗಣನೀಯವಾಗಿ ಏರುತ್ತಿರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಲಿಂಗನಮಕ್ಕಿ ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಆಗಸ್ಟ್‌ 18ರಂದು ಮಧ್ಯಾಹ್ನ 1 ಗಂಟೆಗೆ ಜಲಾಶಯದ ನೀರಿನ ಮಟ್ಟವು 1815.50 ಅಡಿಗಳಿಗೆ ತಲುಪಿದೆ. ಈ ದಿನ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 59,891 ಕ್ಯೂಸೆಕ್‌ಗಳಿಗಿಂತಲೂ ಅಧಿಕವಾಗಿದ್ದು, ಇದೇ ರೀತಿಯಲ್ಲಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇದೆ” ಎಂದಿದ್ದಾರೆ.

ಲಿಂಗನಮಕ್ಕಿ ಜಲಾಶಯದ ತಗ್ಗು ಪ್ರದೇಶದಲ್ಲಿ ಶರಾವತಿ ನದಿಯ ಇಕ್ಕೆಲಗಳ ಪ್ರದೇಶದಲ್ಲಿರುವ ಹೊನ್ನಾವರ ತಾಲೂಕಿನ ವ್ಯಾಪ್ತಿಯಲ್ಲಿರುವ ತಳಮಟ್ಟದ ಗ್ರಾಮಗಳ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಪ್ರವಾಹ ಸಂಭವನೀಯ ಸ್ಥಳಗಳ ಸಾರ್ವಜನಿಕರು ಅಮೂಲ್ಯ ವಸ್ತುಗಳನ್ನು ತೆಗೆದುಕೊಂಡು ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಇಬ್ಬರು ಸ್ಥಳದಲ್ಲಿಯೇ ಸಾವು, ಹಲವರಿಗೆ ಗಾಯ

ಶರಾವತಿ ನದಿಯ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರ ಕುರಿತು ಕಾಳಜಿ ಕೇಂದ್ರಗಳನ್ನು ಅಣಿಗೊಳಿಸಲಾಗಿರುತ್ತದೆ. ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿಯ ಒಳಗೆ ಅಥವಾ ಅದರ ಸುತ್ತಲಿನ ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕು. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ತುರ್ತು ಸೇವೆಗೆ 24/7 ಕಂಟ್ರೋಲ್ ರೂಮ್ ಟೋಲ್ ಪ್ರೀ ಸಂಖ್ಯೆ 08382-229857 ಮತ್ತು ವಾಟ್ಸ್ಯಾಪ್ ಸಂಖ್ಯೆ 9483511015 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...