ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

Date:

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 6ರವರೆಗೆ ಒಟ್ಟು 18 ಅಭ್ಯರ್ಥಿಗಳಿಂದ 36 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಿತು.

- Advertisement -

ಉಮೇದುವಾರಿಕೆಯನ್ನು ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನವಾಗಿದೆ. ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣಾಧಿಕಾರಿ ಕೆ.ಎಂ. ಜಾನಕಿ ಅವರು ನಾಮಪತ್ರಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹಾಗೂ ಚುನಾವಣಾ ವೀಕ್ಷಕ ಮನೋಜ್ ಜೈನ್ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಸುದ್ದಿ ಓದಿದ್ದೀರಾ? ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿ ಹುಬ್ಬಳ್ಳಿಯ ಮೋಹನ ಲಿಂಬಿಕಾಯಿ ಅವರು ಕಾಂಗ್ರೆಸ್ ಪಕ್ಷದಿಂದ ಹಾಗೂ ಗದಗ ಜಿಲ್ಲೆಯ ಸಂಕನೂರ ಎಸ್.ವಿ. ಅವರು ಬಿಜೆಪಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಮಾನ್ಯತೆ ಪಡೆದ ರಾಷ್ಟ್ರೀಯ ಮತ್ತು ರಾಜ್ಯ ಪಕ್ಷಗಳನ್ನು ಹೊರತುಪಡಿಸಿ ನೋಂದಾಯಿತ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಾಗಿ ಹಾವೇರಿ ಜಿಲ್ಲೆಯ ನಿಶಾಂತ ಶಂಕರ ಬಂಕಾಪೂರ ಅವರು ಕರ್ನಾಟಕ ರಾಷ್ಟ್ರ ಸಮಿತಿ, ಧಾರವಾಡ ಜಿಲ್ಲೆಯ ಮಲ್ಲಿಕಾರ್ಜುನ ಚನ್ನಪ್ಪ ಗಂಗಾಧರ ಅವರು ಕಿತ್ತೂರ ಕಲ್ಯಾಣ ಕರ್ನಾಟಕ ಸೇನಾ ಹಾಗೂ ಹಾವೇರಿ ಜಿಲ್ಲೆಯ ತಳವಾರ ಶಿವಕುಮಾರ ಅವರು ಜನತಾ ಚಳುವಳಿ ಭಾರತ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನು ಧಾರವಾಡ ಜಿಲ್ಲೆಯ ಅಬ್ದುಲ್ ಮನ್ನಾನ, ಹುಬ್ಬಳ್ಳಿಯ ಇಮ್ರಾನ ಕೂಡಲ, ಬೆಂಗಳೂರಿನ ಡಾ. ಜಿ.ಎಚ್. ಇಮ್ರಾಪೂರ, ಹಾವೇರಿ ಜಿಲ್ಲೆಯ ಉಮೇಶ ಕೃಷ್ಣಪ್ಪ ದೈವಜ್ಞ ಹಾಗೂ ಆರ್.ಎಂ. ಕುಬೇರಪ್ಪ, ಶಿರಸಿಯ ಕೃಷ್ಣ ಎಚ್. ಬಳೆಗಾರ, ಧಾರವಾಡ ಜಿಲ್ಲೆಯ ಕಾಂತಕುಮಾರ ಆರ್., ಗದಗ ಜಿಲ್ಲೆಯ ಜಿಶಾನ ಡಿ. ಸಿರಸಂಗಿ, ಹಾವೇರಿ ಜಿಲ್ಲೆಯ ಜೀಶಾನ ಅಹ್ಮದಖಾನ ಪಠಾಣ, ಹುಬ್ಬಳ್ಳಿಯ ಬಸವರಾಜ ಶಂಕರಪ್ಪ ಕೊಟಗಿ, ಹಾವೇರಿ ಜಿಲ್ಲೆಯ ಸಲೀಮ ಮಹ್ಮದ್ ಹನೀಫ್ ಜವಳಿ ಹಾಗೂ ಸುರೇಶ ಎಸ್. ಬಿಷ್ಟನಗೌಡರ ಮತ್ತು ಗದಗ ಜಿಲ್ಲೆಯ ಸಂತೋಷ ಮನೋಹರ ವೆರ್ಣೇಕರ್ ಅವರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರಗಳ ಪರಿಶೀಲನೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 9ರಂದು ಉಮೇದುವಾರಿಕೆ ಹಿಂಪಡೆಯಲು ಅವಕಾಶವಿದ್ದು, ನಂತರ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆ ಸ್ಪಷ್ಟವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಲ್ಹಾರದ ಕೆನೆ ಮೊಸರು: ಶತಮಾನದ ಇತಿಹಾಸ, ನೂರಾರು ಕುಟುಂಬಗಳ ಜೀವನಾಧಾರ…

ಕೊಲ್ಹಾರದ ಕೆನೆ ಮೊಸರು ಹಲವು ಕುಟುಂಬಗಳಿಗೆ ಜೀವನಾಧಾರ. ತಲೆಮಾರುಗಳಿಂದ ಬಂದಿರುವ ಈ...

ಶಿಕಾರಿಪುರ | ಬೀಗರೂಟ ಹಾಕಿದ್ರೆ 1 ಲಕ್ಷ, ಉಂಡ್ರೆ 50 ಸಾವಿರ ದಂಡ!

ಮದುವೆ ಅಂದರೆ ಕೇವಲ ಎರಡು ಮನಸುಗಳ ಮಿಲನ ಮಾತ್ರವಲ್ಲ, ಬಂಧು-ಬಳಗದ ಸಂಭ್ರಮ....

ತೀರ್ಥಹಳ್ಳಿ | ಮತದಾರರ ಪಟ್ಟಿ ಕುರಿತು ಬಿಜೆಪಿ ದೂರು; ಅರ್ಹರ ಹೆಸರು ತೆಗೆಯದಂತೆ ಕಾಂಗ್ರೆಸ್ ಆಗ್ರಹ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ, ಸುರಳಿ–ಬಾಚ್ಚೆಹಳ್ಳಿ ಗ್ರಾಮದ ಭಾಗ ಸಂಖ್ಯೆ 186ಕ್ಕೆ ಸಂಬಂಧಿಸಿದ...