ಉತ್ತರ ಕನ್ನಡ | ಪಶ್ಚಿಮ ಪದವೀಧರರ ಮತಕ್ಷೇತ್ರ ಚುನಾವಣೆ–2026: 14,231 ಕರಡು ಮತದಾರರ ಪಟ್ಟಿ ಪ್ರಕಟ

Date:

ಉತ್ತರ ಕನ್ನಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026 ರ ಸಂಬಂಧ ಮತದಾರರ ಪಟ್ಟಿಯ ಅರ್ಹತಾ ದಿನಾಂಕ 01-11-2025 ಕ್ಕೆ ಸಂಬಂಧಿಸಿದಂತೆ ನವೆಂಬರ್ 25 ರಂದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಎಲ್ಲಾ ತಾಲೂಕಿನ ತಹಶೀಲ್ದಾರ ಕಚೇರಿಗಳಲ್ಲಿ, ತಾಲೂಕ ಪಂಚಾಯತ ಕಚೇರಿಗಳಲ್ಲಿ, ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

- Advertisement -

ಕರಡು ಪಟ್ಟಿಯು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ ಕಚೇರಿಗಳಲ್ಲಿ, ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶೀಲನೆಗೆ ಲಭ್ಯವಿರಲಿದೆ. ಅಭ್ಯರ್ಥಿಗಳು, ಪದವೀಧರರು ಹಾಗೂ ಸಾರ್ವಜನಿಕರು ತಮ್ಮ ಹೆಸರು ಪಟ್ಟಿಯಲ್ಲಿ ಅಳವಡಿಸಲಾಗಿದೆ ಅಥವಾ ಇಲ್ಲ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು. ಪ್ರಕಟಿತ ಕರಡು ಪಟ್ಟಿಯ ಪ್ರಕಾರ ಜಿಲ್ಲೆಯಲ್ಲಿ 7,128 ಪುರುಷರು ಮತ್ತು 7,103 ಮಹಿಳೆಯರು, ಒಟ್ಟು 14,231 ಮತದಾರರು ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಪಟ್ಟಿಗೆ ಸಂಬಂಧಿಸಿದಂತೆ ಅರ್ಹ ಪದವೀಧರರಿಗೆ ಹಕ್ಕು ಹಾಗೂ ಆಕ್ಷೇಪಣೆ ಸಲ್ಲಿಸಲು 10-12-2025ರವರೆಗೆ ಅವಕಾಶ ನೀಡಲಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು, ಪಟ್ಟಿಯಲ್ಲಿರುವ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ ಸಲ್ಲಿಸಲು, ಹೆಸರು ತೆಗೆದುಹಾಕಲು ಅಥವಾ ಮಾಹಿತಿಯ ತಿದ್ದುಪಡಿ ಮಾಡಲು ಮತದಾರ ನೋಂದಣಿ ನಿಯಮಗಳು 1960ರ ಪ್ರಕಾರ ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ ಕಚೇರಿಗೆ ಅಥವಾ ನಿಯೋಜಿತ ಅಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಪೊಲೀಸ್ ಕಾರ್ಯಾಚರಣೆ: ₹8 ಲಕ್ಷ ಮೌಲ್ಯದ ಚರಸ್‌ ವಶ, ಆರೋಪಿ ಸಚಿನ್ ಬಂಧನ

ಜಿಲ್ಲೆಯ ಎಲ್ಲಾ ಪದವೀಧರರು ತಮ್ಮ ಹೆಸರು ಹಾಗೂ ವಿವರಗಳನ್ನು ಸಮಯಕ್ಕೆ ಸರಿಯಾಗಿ ಪರಿಶೀಲಿಸಿಕೊಂಡು, ಅಗತ್ಯವಿದ್ದಲ್ಲಿ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...