ಉತ್ತರ ಕನ್ನಡ | ಅಘನಾಶಿನಿ ನದಿ ಜೋಡಣೆ ಯೋಜನೆಗೆ ವ್ಯಾಪಕ ವಿರೋಧ: ದಾಖಲೆಯ 25 ಸಾವಿರ ಆಕ್ಷೇಪ ಪತ್ರ ಸಲ್ಲಿಕೆ

Date:

ಉತ್ತರ ಕನ್ನಡ ಜಿಲ್ಲೆಯ ಜೀವನಾಡಿ ಅಘನಾಶಿನಿ ನದಿಯ ನೀರನ್ನು ತಿರುಗಿಸುವ ಕೇಂದ್ರ ಸರ್ಕಾರದ ಯೋಜನೆಯ ವಿರುದ್ಧ ಸಿದ್ದಾಪುರದಲ್ಲಿ ಆಕ್ರೋಶದ ಅಲೆ ಎದ್ದಿದೆ. ಅರಣ್ಯ ನಾಶ ಮತ್ತು ಪರಿಸರ ಹಾನಿಯನ್ನು ಖಂಡಿಸಿ ಕೇವಲ ಒಂದೇ ದಿನದಲ್ಲಿ 25 ಸಾವಿರಕ್ಕೂ ಅಧಿಕ ಆಕ್ಷೇಪಣಾ ಪತ್ರಗಳನ್ನು ಸಲ್ಲಿಕೆ ಮಾಡುವ ಮೂಲಕ ಹೋರಾಟಗಾರರು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ.

- Advertisement -

ಜಿಲ್ಲೆಯ ವಿವಿಧ ಹಳ್ಳಿಗಳಿಂದ ಅತ್ಯಂತ ಶಿಸ್ತುಬದ್ಧವಾಗಿ ಆಗಮಿಸಿದ ಸಾರ್ವಜನಿಕರು ಮತ್ತು ಪರಿಸರ ಪ್ರೇಮಿಗಳು, ಅಘನಾಶಿನಿ ನದಿ ಜೋಡಣೆ ಯೋಜನೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿದರು. ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವರಿಗೆ ಬರೆದ ಈ ಆಕ್ಷೇಪಣಾ ಪತ್ರಗಳನ್ನು ತಾಲೂಕಾ ದಂಡಾಧಿಕಾರಿ ಎಮ್.ಆರ್. ಕುಲಕರ್ಣಿ ಅವರ ಮೂಲಕ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಅವರ ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯು, ಮುಂದಿನ ದಿನಗಳಲ್ಲಿ ಕೈಗೊಳ್ಳಲಿರುವ ತೀವ್ರ ಸ್ವರೂಪದ ಕಾನೂನು ಹೋರಾಟದ ಮುನ್ಸೂಚನೆ ಎಂದು ಸಂಘಟಕರು ಎಚ್ಚರಿಸಿದ್ದಾರೆ.

1000518325

ಪಶ್ಚಿಮ ಘಟ್ಟಗಳು ಕೇವಲ ಒಂದು ಪ್ರದೇಶದ ಆಸ್ತಿಯಲ್ಲ, ಅವು ಜಾಗತಿಕ ಹವಮಾನ ಭದ್ರತೆಯ ಅವಿಭಾಜ್ಯ ಅಂಗ. ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿರುವ ಮತ್ತು ವಿಶ್ವದ 8 ಪ್ರಮುಖ ಜೈವಿಕ ವೈವಿಧ್ಯತೆಯ ಹಾಟ್‌ಸ್ಪಾಟ್‌ಗಳಲ್ಲಿ ಒಂದಾಗಿರುವ ಈ ಸೂಕ್ಷ್ಮ ಪ್ರದೇಶದಲ್ಲಿ ಸುರಂಗ ನಿರ್ಮಾಣ, ಆಣೆಕಟ್ಟು ಮತ್ತು ನದಿ ತಿರುವು ಕಾಮಗಾರಿಗಳನ್ನು ನಡೆಸುವುದು ಅತ್ಯಂತ ಅಪಾಯಕಾರಿ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಯಿಂದ ಅರಣ್ಯ ನಾಶ, ಭೂಕುಸಿತ, ಜೀವ ವೈವಿಧ್ಯದ ಹಾನಿ ಮತ್ತು ಹವಮಾನ ಬದಲಾವಣೆಯಂತಹ ಗಂಭೀರ ಪರಿಣಾಮಗಳು ಉಂಟಾಗಲಿವೆ ಎಂಬುದು ವೈಜ್ಞಾನಿಕ ಅಧ್ಯಯನಗಳಿಂದ ಸಾಬೀತಾಗಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಆರ್ಥಿಕ ಸಬಲೀಕರಣದ ಸೂಚಕ: ಸಚಿವ ಮಂಕಾಳ ವೈದ್ಯ

ರಾಷ್ಟ್ರೀಯ ಜಲಾಭಿವೃದ್ಧಿ ಸಂಸ್ಥೆ ಸಿದ್ಧಪಡಿಸಿರುವ ಪೂರ್ವಭಾವಿ ಯೋಜನಾ ವರದಿಯು (PFR) ಸಂಪೂರ್ಣ ಅವೈಜ್ಞಾನಿಕ ಮತ್ತು ಪರಿಸರ ವಿರೋಧಿಯಾಗಿದೆ ಎಂದು ಸಭೆಯಲ್ಲಿ ಖಂಡಿಸಲಾಯಿತು. ಉತ್ತರ ಕನ್ನಡದ ಆರ್ಥಿಕತೆ ಮತ್ತು ಅಸ್ಮಿತೆಯಾಗಿರುವ ದಟ್ಟ ಕಾಡುಗಳು ಹಾಗೂ ಜಲಪಾತಗಳನ್ನು ಉಳಿಸಿಕೊಳ್ಳಲು ಈ ವರದಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಮಾಬ್ಲೇಶ್ವರ ನಾಯ್ಕ ಬೇಡ್ಕಣಿ, ನಾಗಪತಿ ಗೌಡ ಹುಕ್ಕಳ್ಳಿ, ಜಿ.ಎನ್. ಹೆಗಡೆ ಸೇರಿದಂತೆ ಅನೇಕ ಮುಖಂಡರು ಮಾತನಾಡಿದರು. ಸಭೆಯಲ್ಲಿ ಇಬ್ರಾಹೀಂ ಗೌಡಳ್ಳಿ, ಮಹೇಶ್ ನಾಯ್ಕ, ಹರಿಹರ್ ನಾಯ್ಕ, ರಾಜೇಶ್ ವಿ. ಭಟ್ ಹಾಗೂ ಸಾವಿರಾರು ಗ್ರಾಮಸ್ಥರು ಉಪಸ್ಥಿತರಿದ್ದು, ಯೋಜನೆಯ ವಿರುದ್ಧ ಒಕ್ಕೊರಲಿನ ಧ್ವನಿ ಎತ್ತಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...

ಯಾದಗಿರಿ | ಪ್ರವಾಸೋದ್ಯಮಕ್ಕೆ ಹೊಸ ಒತ್ತು: 21 ತಾಣಗಳ ಅಭಿವೃದ್ಧಿಗೆ ಆದ್ಯತೆ

ಐತಿಹಾಸಿಕ, ನೈಸರ್ಗಿಕ ಹಾಗೂ ಸಾಂಸ್ಕೃತಿಕ ವೈಶಿಷ್ಟ್ಯಗಳನ್ನು ಹೊಂದಿರುವ ಯಾದಗಿರಿ ಜಿಲ್ಲೆಯ ಪ್ರವಾಸೋದ್ಯಮ...

ಯಾದಗಿರಿ | ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಸಿಐಡಿ ತನಿಖೆಗೆ ಆಗ್ರಹ

ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಮರಣಾಂತಿಕ...