ಉತ್ತರ ಕನ್ನಡ | ಸೆ.24ರಂದು ಯೆಲ್ಲೋ ಅಲರ್ಟ್‌: ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

Date:

ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರಿನ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 24ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಗಂಟೆಗೆ 30–40 ಕಿ.ಮೀ. ವೇಗದ ಗಾಳಿಯೊಂದಿಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ತಿಳಿಸಿದೆ.

- Advertisement -

ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುಂಗಾರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರ ಸುರಕ್ಷತೆಗಾಗಿ ಹಲವು ಸೂಚನೆಗಳನ್ನು ನೀಡಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ಹವಾಮಾನ ಪರಿಸ್ಥಿತಿ ಹಾಗೂ ಸಂಬಂಧಿತ ಮಾಹಿತಿಗಾಗಿ ಜಿಲ್ಲಾಡಳಿತದ ಸಾಮಾಜಿಕ ಜಾಲತಾಣಗಳು ಮತ್ತು ಸ್ಥಳೀಯ ಸುದ್ದಿ ಮಾಧ್ಯಮಗಳನ್ನು ಪರಿಶೀಲಿಸುವಂತೆ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚಿಸಲಾಗಿದ್ದು, ಸಾರ್ವಜನಿಕರು ಹಾಗೂ ಮುಖ್ಯವಾಗಿ ಮಕ್ಕಳು ನೀರು ನಿಂತಿರುವ ತಗ್ಗು ಪ್ರದೇಶಗಳು, ಕೆರೆ, ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ನೀರಿರುವ ಪ್ರದೇಶಗಳು ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಎಸ್‌ಐಆರ್‌: ಸೆಪ್ಟೆಂಬರ್ ಅಂತ್ಯದೊಳಗೆ ಬಾಕಿ ಪ್ರಕರಣಗಳ ವಿಚಾರಣೆ ಪೂರ್ಣ — ಡಿಸಿ ಕೆ. ಲಕ್ಷ್ಮೀಪ್ರಿಯಾ

Advertisements

ಮಳೆ ಹಾಗೂ ಸಿಡಿಲಿನ ಸಂದರ್ಭದಲ್ಲಿ ರೈತರು ಕೃಷಿ ಚಟುವಟಿಕೆಗಳಿಂದ ದೂರವಿದ್ದು, ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆಯ ವೇಳೆ ಹೊರಗೆ ಸಂಚರಿಸದೆ ಸುರಕ್ಷಿತ ಕಟ್ಟಡಗಳಲ್ಲಿ ಆಶ್ರಯ ಪಡೆಯುವಂತೆ ತಿಳಿಸಲಾಗಿದೆ. ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು ಹಾಗೂ ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವಂತೆ ಸೂಚಿಸಲಾಗಿದೆ.

ದುರ್ಬಲ ಅಥವಾ ಹಳೆಯ ಕಟ್ಟಡಗಳು ಹಾಗೂ ಮರಗಳ ಕೆಳಗೆ ನಿಲ್ಲದಂತೆ ಎಚ್ಚರಿಕೆ ನೀಡಲಾಗಿದೆ .ತಗ್ಗು ಪ್ರದೇಶಗಳಲ್ಲಿ ಅಥವಾ ಮಳೆಯಿಂದ ಅಪಾಯಕ್ಕೀಡಾಗುವ ಪ್ರದೇಶಗಳಲ್ಲಿ ವಾಸಿಸುವವರು, ಶಿಥಿಲಾವಸ್ಥೆಯಲ್ಲಿರುವ ಮನೆ, ಕಂಪೌಂಡ್‌ ಅಥವಾ ಗೋಡೆಗಳಿರುವ ಪ್ರದೇಶಗಳಿಂದ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು.

ಅಗತ್ಯವಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರರು ಗುರುತಿಸಿರುವ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಜಿಲ್ಲಾಡಳಿತ ಸೂಚಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿನ ಕಾಲುಸಂಕ, ಕಿರು ಸೇತುವೆ ಸೇರಿದಂತೆ ನೀರು ಹರಿಯುವ ಸ್ಥಳಗಳನ್ನು ದಾಟುವಾಗ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಶಿಥಿಲಾವಸ್ಥೆಯಲ್ಲಿರುವ ಅಥವಾ ಕುಸಿಯುವ ಹಂತದಲ್ಲಿರುವ ಮನೆ ಹಾಗೂ ಕಂಪೌಂಡ್‌ ಗೋಡೆಗಳು ಕಂಡುಬಂದರೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.

ತುರ್ತು ಸೇವೆಗಾಗಿ 24×7 ವಿಪತ್ತು ನಿರ್ವಹಣಾ ಕಂಟ್ರೋಲ್‌ ರೂಂ: 08382-229857.ವಾಟ್ಸ್‌ಆ್ಯಪ್‌ ಸಂಖ್ಯೆ: 9483511015. ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಉತ್ತರ ಕನ್ನಡ, ಕಾರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...

ವಿಜಯಪುರ | ಆತ್ಮವಿಶ್ವಾಸ ಬೆಳೆಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ: ಪ್ರೊ. ಎಸ್ ಇಂದುಮತಿ

ಹೆಣ್ಣುಮಕ್ಕಳು ತಮ್ಮ ಭದ್ರತೆಯ ಕುರಿತು ಯಾವುದೇ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು....

ಚಿಕ್ಕಬಳ್ಳಾಪುರ: ರೈತ ಸಂಘದ ಕಚೇರಿಯಲ್ಲಿಯೇ ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಮಾಂಜಿನಪ್ಪ ನೇಣುಹಾಕಿಕೊಂಡು ಆತ್ಮಹತ್ಯೆ

ಮರಳುಕುಂಟೆ ಗ್ರಾಮದ ರಾಮಾಂಜಿನಪ್ಪ 12 ವರ್ಷಗಳಿಂದ ತಾಲ್ಲೂಕು ರೈತ ಸಂಘದ ಅಧ್ಯಕ್ಷರಾಗಿದ್ದರು....