ಉತ್ತರ ಕನ್ನಡ | ಸಾರ್ವಜನಿಕ ಬೇಡಿಕೆಗಳನ್ನು ಕ್ರಿಯಾ ಯೋಜನೆಯಲ್ಲಿ ಅಳವಡಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

Date:

Advertisements

ಜಿಲ್ಲಾ ಪಂಚಾಯತ್ ವತಿಯಿಂದ ರೂಪಿಸುವ ವಾರ್ಷಿಕ ಕ್ರಿಯಾ ಯೋಜನೆಯ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಬೇಡಿಕೆಗಳ ಕುರಿತ ಕಾಮಗಾರಿಗಳನ್ನು ಅಳವಡಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ನ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷ್ಮಾ ಗೋಡಬೋಲೆ ನಿರ್ದೇಶನ ನೀಡಿದರು.

ಅವರು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಅಧಿಕಾರಿಗಳು ನಿಗದಿತವಾಗಿ ತಮ್ಮ ವ್ಯಾಪ್ತಿಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಬೇಕು ಅಲ್ಲಿನ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಗತಿಯನ್ನು ಪರಿಶೀಲಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿ ಅಗತ್ಯ ನೆರವು ಒದಗಿಸಬೇಕು, ವಾರ್ಷಿಕ ಕ್ರಿಯಾ ಯೋಜನೆ ರೂಪಿಸುವಾಗ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಬೇಡಿಕೆಗಳನ್ನು ಇದರಲ್ಲಿ ಅಳವಡಿಸಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಉತ್ತಮ ಆಡಳಿತ ಸೇವೆ ಒದಗಿಸಬೇಕು ಎಂದರು.

Advertisements

ಪ್ರಸ್ತುತ ಜಿಲ್ಲೆಯಲ್ಲಿನ 59 ಅಪೌಷ್ಠಿಕ ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡಿ ಪೌಷ್ಠಿಕರನ್ನಾಗಿ ಮಾಡುವಂತೆ ಹಾಗೂ ಈ ಮಕ್ಕಳ ಚಿಕಿತ್ಸೆಗಾಗಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಯನ್ನು ಮೀಸಲಿಡುವಂತೆ ತಿಳಿಸಿದ ಅವರು, ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿರುವ ಪೌಷ್ಠಿಕ ಆಹಾರ ಘಟಕದ ತಜ್ಞರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಿ ಎಂದರು.

ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿ, ಹಾಸ್ಟೆಲ್‌ಗಳು, ವೈದ್ಯಕೀಯ ಕೇಂದ್ರಗಳಲ್ಲಿರುವ ಅನುಪಯುಕ್ತ ಸಾಮಗ್ರಿಗಳು/ಪೀಠೋಪಕರಣಗಳನ್ನು ನಿಯಮಾವಳಿಯಂತೆ ವಿಲೇವಾರಿ ಮಾಡಿ, ಕಚೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದಕ್ಕೆ ಆದ್ಯತೆ ನೀಡಿ, ಕಚೇರಿಯಲ್ಲಿನ ಕಡತಗಳನ್ನು ಸೂಕ್ತ ರೀತಿಯಲ್ಲಿ ವಿಂಗಡಿಸಿ ಸುಲಭವಾಗಿ ದೊರೆಯುವಂತೆ ಸಂರಕ್ಷಿಸಿಡುವಂತೆ ತಿಳಿಸಿದರು.

ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ಒದಗಿಸುವ ನಿಟ್ಟಿನಲ್ಲಿ ಈಗಾಗಲೇ ನಿವೇಶನ ಲಭ್ಯವಿರುವ ಸ್ಥಳಗಳಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಮತ್ತು ಉಳಿದ ಕಡೆಗಳಲ್ಲಿ ಜಾಗ ಗುರುತಿಸುವ ಕಾರ್ಯ ಮಾಡುವಂತೆ ಸೂಚಿಸಿದ ಅವರು, ಎಲ್ಲಾ ಸರಕಾರಿ ಕಚೇರಿಗಳು ತಮ್ಮ ಕಟ್ಟಡಗಳ ಮೂಲ ದಾಖಲಾತಿಗಳನ್ನು ಮತ್ತು ಕಡತಗಳನ್ನು ಸೂಕ್ತ ರೀತಿಯಲ್ಲಿ ಸಂರಕ್ಷಿಸಿಡುವಂತೆ ತಿಳಿಸಿದರು.

ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಲ್ಲಿ ಮತ್ತು ಕ್ರೀಡಾ ಹಾಸ್ಟೆಲ್‌ಗಳಲ್ಲಿನ ವಿದ್ಯಾರ್ಥಿಗಳಿಗೆ ಬೋಧನಾ ಕಲಿಕೆಗೆ ಅಗತ್ಯವಿರುವ ಪುಸ್ತಕಗಳನ್ನು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗೆ ನೆರವಾಗುವ ಪುಸ್ತಕಗಳನ್ನು ಒದಗಿಸುವಂತೆ ಹಾಗೂ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದರು.

ಮಳೆಗಾಲದಲ್ಲಿ ಕಲುಷಿತ ನೀರು ಸೇವನೆಯ ಘಟನೆಗಳು ಸಂಭವಿಸದಂತೆ ಜಾಗೃತಿ ವಹಿಸುವಂತೆ ಹಾಗೂ ನೀರಿನ ಮೂಲಗಳನ್ನು ನಿಗದಿಯಂತೆ ಲ್ಯಾಬ್‌ಗಳಲ್ಲಿ ಪರೀಕ್ಷೆಗೆ ಒಳಪಡಿಸುವಂತೆ ಸೂಚಿಸಿದ ಅವರು ಜಿಲ್ಲೆಯಲ್ಲಿನ ಕುಡಿಯುವ ನೀರಿನ ಜಲಮೂಲಗಳ ಸಂರಕ್ಷಣೆ ಹಾಗೂ ಅವುಗಳ ಮರುಪೂರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿನ ಎಲ್ಲಾ ಇಲಾಖಾಧಿಕಾರಿಗಳು ತಮ್ಮ ಪ್ರವಾಸ ಸಂದರ್ಭದಲ್ಲಿ ಇತರೇ ಇಲಾಖೆಗಳಲ್ಲಿನ ಪ್ರದೇಶದಲ್ಲಿ ಸಮಸ್ಯೆಗಳು ಕಂಡುಬಂದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುವ ಮೂಲಕ, ಪರಸ್ಪರ ಸಮನ್ವಯದಿಂದ ಜಿಲ್ಲೆಯ ಅಭಿವೃದ್ಧಿಗೆ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಇದನ್ನು ಓದಿದ್ದೀರಾ? ಉತ್ತರ ಕನ್ನಡ | ಮಾದಕ ವಸ್ತುಗಳ ಬಗ್ಗೆ ಯುವಜನತೆಗೆ ಜಾಗೃತಿ ಅಭಿಯಾನ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ 2024-25 ನೇ ಸಾಲಿನ ವಾರ್ಷಿಕ ಲೆಕ್ಕಪತ್ರ ಅನುಮೋದನೆ, 2025-26 ರ ಆಯವ್ಯಯ ಮಂಡನೆ ಹಾಗೂ ಲಿಂಕ್ ಡಾಕ್ಯೂಮೆಂಟ್ ಅಡಿ ಜಿಲ್ಲಾ ಪಂಚಾಯತ್ ಅಧೀನ ಇಲಾಖೆಗಳಿಗೆ ಹಂಚಿಕೆಯಾದ ಅನುದಾನಕ್ಕೆ ಕ್ರಿಯಾ ಯೋಜನೆ ಅನುಷ್ಠಾನಗೊಳಿಸಲು ಅನುಮೋದನೆ ಪಡೆಯಲಾಯಿತು.

ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರೀಯಾ, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ, ತರಬೇತಿ ನಿರತ ಐ.ಎ.ಎಸ್ ಅಧಿಕಾರಿ ಝುಪಿಶಾನ್ ಹಕ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X